ಜನಾಕರ್ಷಣೆಯ ಕರಾವಳಿ ಉತ್ಸವ: ಸ್ಪೀಕರ್, ಉಸ್ತುವಾರಿ ಸಚಿವರ ಸೂಚನೆ
Friday, December 13th, 2024
ಮಂಗಳೂರು : ಈ ವರ್ಷ ನಡೆಯಲಿರುವ ಕರಾವಳಿ ಉತ್ಸವವನ್ನು ಜನಾಕರ್ಷಣೆಯ ಕಾರ್ಯಕ್ರಮವನ್ನಾಗಿ ಮಾಡಲು ಹೆಚ್ಚು ಒತ್ತು ನೀಡುವಂತೆ ಸ್ಪೀಕರ್ ಯು.ಟಿ ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಕರಾವಳಿ ಉತ್ಸವ ಸಿದ್ಧತೆಗಳ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಸುವರ್ಣ ವಿಧಾನಸೌಧದಿಂದ ವಿಡಿಯೋ ಕಾನ್ಪೆರನ್ಸ್ ಮೂಲಕ ಭಾಗವಹಿಸಿ ಮಾತನಾಡಿದರು. ಕರಾವಳಿ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಾಂಸ್ಕøತಿಕ ಕಲಾಪ್ರಕಾರಗಳು ಸೇರಿದಂತೆ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಹ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು. […]