ರೌಡಿಶೀಟರ್ ಪಿಂಕಿ ನವಾಸ್ ಮೇಲೆ ಕಾಟಿಪಳ್ಳದಲ್ಲಿ ಮಾರಕಾಸ್ತ್ರಗಳಿಂದ ದಾಳಿ

Wednesday, February 10th, 2021
pinki-nawaz

ಮಂಗಳೂರು : ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಪಿಂಕಿ ನವಾಸ್ ಮೇಲೆ ರೌಡಿಗಳ ಗುಂಪೊಂದು ದಾಳಿ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದಿದೆ. ಪಿಂಕಿ ನವಾಸ್ ಮೇಲೆ ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಪಿಂಕಿ ನವಾಸ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದೀಪಕ್ ರಾವ್ ಹತ್ಯೆಗೆ ಪ್ರತಿಕಾರದ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು,  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದೀಪಕ್ ರಾವ್​ನನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Wednesday, July 18th, 2018
Deepak-rao

ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ 2018 ಜನವರಿ 3 ರಂದು ದೀಪಕ್ ರಾವ್ನನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿ ಸುರತ್ಕಲ್ ಕೃಷ್ಣಾಪುರದ ಸಫ್ವಾನ್ ಯಾನೆ ಚಪ್ಪು ( 23) ನನ್ನು ಮಂಗಳೂರು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ. ಸಫ್ವಾನ್ ಬಂಧನದೊಂದಿಗೆ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13 ಕ್ಕೇರಿದೆ. ಈತ ದೀಪಕ್ ರಾವ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ರಿಜ್ವಾನ್ನ ಸಹೋದರ ಎಂದು ತಿಳಿದುಬಂದಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಸಫ್ವಾನ್ ನನ್ನು ಇಂದು ಸುರತ್ಕಲ್ ಮುಕ್ಕದಲ್ಲಿ ಪೊಲೀಸರು […]

ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ 500 ಪುಟಗಳ ಆರೋಪ ಪಟ್ಟಿ ಸಲ್ಲಿಸಿದ ಪೊಲೀಸರು

Wednesday, April 11th, 2018

ದೀಪಕ್‌ ರಾವ್‌ ಮನೆಗೆ ಅಮಿತ್‌ ಶಾ , ಬಿ.ಎಸ್. ಯಡಿಯೂರಪ್ಪ ಭೇಟಿ, ಸಾಂತ್ವನ

Wednesday, February 21st, 2018
deepak-rao

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಮನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಅಮಿತ್‌ ಶಾ ಅವರ ಭೇಟಿ ವೇಳೆ ಪಕ್ಷದ ಉತ್ತರ ಬ್ಲಾಕ್ ಸಮಿತಿ ಈಗಾಗಲೇ ಸಂಗ್ರಹಿಸಿದ್ದ 10 ಲಕ್ಷ ರೂ.ಗಳನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಉತ್ತರ ಬ್ಲಾಕ್ ಅಧ್ಯಕ್ಷ ಭರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಚೋದನಾಕಾರಿ ಭಾಷಣ: ವಿಹೆಚ್‌ಪಿ ಜಿಲ್ಲಾಧ್ಯಕ್ಷನ ವಿರುದ್ಧ ಪೊಲೀಸರಿಂದ ಸ್ವಯಂ ದೂರು

Wednesday, January 31st, 2018
hindu-parishat

ಮಂಗಳೂರು: ದೀಪಕ್ ರಾವ್ ಎನ್ನುವ ಮುಗ್ಧನ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆ ಮಾಡಬಾರದಾ’ ಎಂದು ಬಹಿರಂಗವಾಗಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ವಿರುದ್ಧ ಮಂಗಳೂರು ಉತ್ತರ ಠಾಣಾ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ. ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ `ಹಡೆದವ್ವನ ಶಾಪ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಜಗದೀಶ ಶೇಣವ ಅವರ ಪ್ರಚೋದನಾಕಾರಿ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂತಹ ಪ್ರಚೋದನಕಾರಿ ಭಾಷಣ ಮಾಡಿದ ಜಗದೀಶ್ […]

ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾದ ಮಂಗಳೂರು ಪೊಲೀಸ್‌ ಆಯುಕ್ತ

Thursday, January 25th, 2018
madel-police

ಮಂಗಳೂರು: ದಕ್ಷ ಸೇವೆ ಸಲ್ಲಿಸಿದವರಿಗೆ ನೀಡುವ ರಾಷ್ಟ್ರಪತಿ ಪದಕಕ್ಕೆ ಪೊಲೀಸ್ ಆಯುಕ್ತರಾದ ಟಿ.ಆರ್.ಸುರೇಶ್ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವ ದಿನದಂದು ಅವರು ಪದಕ ಸ್ವೀಕರಿಸಲಿದ್ದಾರೆ. ಕರ್ನಾಟಕದಿಂದ ಹಲವು ಸಾಧಕ ಪೊಲೀಸರಿಗೆ ಈ ಸನ್ಮಾನ ಲಭಿಸಿದ್ದು, ದಕ್ಷಿಣ ಕನ್ನಡದಿಂದ ಕೆಎಸ್‌ಆರ್‌ಪಿಯ ಹೆಡ್‌‌ ಕಾನ್ಸ್‌ಟೇಬಲ್‌ ಕಮಲಾಕ್ಷ ಅವರಿಗೂ ರಾಷ್ಟ್ರಪತಿ ಪದಕ ದೊರೆಯಲಿದೆ. ಇತ್ತೀಚೆಗೆ ನಡೆದ ದೀಪಕ್ ರಾವ್ ಹಾಗೂ ಬಶೀರ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ, ಶೂಟೌಟ್ ಪ್ರಕರಣದ ಆರೋಪಿಗಳ ಬಂಧನ, ಗಾಂಜಾ ಮಾಫಿಯಾದ ವಿರುದ್ಧ ನಡೆಯುತ್ತಿರುವ ಕಾರ್ಯಾಚರಣೆ ಸೇರಿದಂತೆ ಕರಾವಳಿಯಲ್ಲಿ ಶಾಂತಿ […]

ದೀಪಕ್‌ ರಾವ್‌ ಮನೆಗೆ ದೇವೇಗೌಡ ಭೇಟಿ… ಆರ್ಥಿಕ ನೆರವಿನ ಭರವಸೆ

Monday, January 22nd, 2018
devegowda

ಮಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಬಲಿಯಾದ ದೀಪಕ್‌ ರಾವ್‌ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಾಟಿಪಳ್ಳದ ನಿವಾಸದಲ್ಲಿ ದೀಪಕ್ ಕುಟುಂಬವನ್ನು ಭೇಟಿ ಮಾಡಿದ ಅವರು, ಸಂತ್ರಸ್ತ ಕುಟುಂಬದೊಂದಿಗೆ ದುಃಖ ಹಂಚಿಕೊಂಡು, ಆರ್ಥಿಕ ನೆರವಿನ ಭರವಸೆಯನ್ನೂ ನೀಡಿದರು. ಕುಟುಂಬದ ಸದ್ಯದ ಪರಿಸ್ಥಿತಿಯ ಬಗ್ಗೆ ಹಿರಿಯ ನಾಯಕ ಹಾಗೂ ರಾಜ್ಯ ಉಪಾಧ್ಯಕ್ಷ ಬಿ.ಎಂ.ಫಾರೂಕ್ ಅವರು ದೇವೇಗೌಡರಿಗೆ ವಿವರಿಸಿದರು. ದೀಪಕ್ ತಾಯಿ ಪ್ರೇಮಾ ಅವರ ಪರಿಸ್ಥಿತಿಯನ್ನು ಕಂಡು ಮರುಗಿದ ಮಾಜಿ ಪ್ರಧಾನಿ, ತಮ್ಮ ವೈಯಕ್ತಿಕ […]

ಕೋಡಿ ಮಠದ ಶ್ರೀಗಳ ಭವಿಷ್ಯದ ಮೊರೆ ಹೋದ ಶಾಸಕ ಮೊಯ್ದೀನ್ ಬಾವಾ

Saturday, January 20th, 2018
mohuiddin-bava

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯ್ದೀನ್‌ ಬಾವಾ ಕೋಡಿ ಮಠದ ಶ್ರೀ ಶಿವಯೋಗಿ ಶಿವಾನಂದ ರಾಜೇಂದ್ರ ಮಹಾ ಸ್ವಾಮೀಜಿಯವರನ್ನ ಭೇಟಿ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೋಡಿ ಮಠದ ಸ್ವಾಮೀಜಿ ಅವರನ್ನು ಶಾಸಕ ಮೊಯ್ದೀನ್ ಬಾವಾ ಭೇಟಿಯಾಗಿರುವ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಬಿರುಸಿನ ಚಟುವಟಿಕೆ ಆರಂಭಿಸಿರುವ ಶಾಸಕ ಮೊಯಿದ್ದಿನ್ ಬಾವಾ ಈ ನಡುವೆ ಏಕಾಏಕಿ ಕೋಡಿ ಮಠದ ಸ್ವಾಮೀಜಿ ಅವರನ್ನು ಭೇಟಿಯಾಗಿರುವುದು ಭಾರಿ ಕುತೂಹಲ ಮೂಡಿಸಿದೆ. ಇತ್ತೀಚೆಗೆ […]

‘ಮಂಗಳೂರು ಉತ್ತರ’ದಲ್ಲಿ ಶಾಸಕ ಬಾವಾ ವಿರುದ್ಧ ಬಿಜೆಪಿ ಅಭ್ಯರ್ಥಿ ಯಾರು?

Friday, January 19th, 2018
rajashekarananda-swami

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಅಥವಾ ಸುರತ್ಕಲ್ ಕೂಡಾ ಒಂದು. ಕೋಮು ಸೂಕ್ಷ್ಮ ಪ್ರದೇಶ ಎಂದೇ ಗುರುತಿಸಲಾಗುವ ಈ ಕ್ಷೇತ್ರ ಹಿಂದೆ ಬಿಜೆಪಿಯ ಭದ್ರಕೋಟೆಯಾಗಿತ್ತು. ಆದರೆ ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಭದ್ರಕೋಟೆಯನ್ನು ಛಿದ್ರಗೊಳಿಸಿ ಕಾಂಗ್ರೆಸ್ ಇಲ್ಲಿ ವಿಜಯದ ನಗೆ ಬೀರಿತ್ತು. ಪ್ರಸ್ತುತ ಕಾಂಗ್ರೆಸ್ ನ ಮೊಯ್ದೀನ್ ಬಾವಾ ಇಲ್ಲಿನ ಶಾಸಕರು. ಮಂಗಳೂರು ಉತ್ತರ ಕ್ಷೇತ್ರಕ್ಕೆ ಬಂದರೆ […]

ದೀಪಕ್ ರಾವ್ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ

Tuesday, January 16th, 2018
deepak-rao

ಮಂಗಳೂರು: ನಗರ ಹೊರವಲಯದ ಕಾಟಿಪಳ್ಳ ದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಟಿಪಳ್ಳ ನಿವಾಸಿಗಳಾದ ಅಬ್ದುಲ್ ಅಜೀಜ್ ( 42), ಅಬ್ದುಲ್ ಅಜೀಮ್ (34) ಎಂದು ಗುರುತಿಸಲಾಗಿದೆ. ಜನವರಿ 3 ರಂದು ಕಾಟಿಪಳ್ಳದಲ್ಲಿ ದೀಪಕ್ ರಾವ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಕುರಿತು ತನಿಖೆ ನಡೆಸಿದ್ದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಬಂಧಿಸಿದ್ದರು. ದೀಪಕ್ ರಾವ್ ಕೊಲೆಯಾದ ದಿವಸವೇ ನಾಲ್ವರನ್ನು […]