Blog Archive

ದಕ್ಷಿಣ ಕನ್ನಡ ಜಿಲ್ಲೆಗೆ ಕೊರೋನಾ ವೈರಸ್ ಬಂದಿದ್ದು ದುಬೈನಿಂದ

Friday, May 1st, 2020
corona-entry

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಗೆ  ಕೊರೋನಾ ವೈರಸ್ ಬಂದಿದ್ದು ವಿದೇಶದಿಂದ.  ಮಾರ್ಚ್ 22ರಂದು ಮೊದಲ ಕೋವಿಡ್ ಸೋಂಕು  ಜಿಲ್ಲೆಯಲ್ಲಿ  ಪತ್ತೆಯಾಗಿತ್ತು. ದುಬೈನಿಂದ ಆಗಮಿಸಿದ  ಯುವಕನೊಬ್ಬನಲ್ಲಿ ಕೋವಿಡ್‌-19  ವೈರಾಣು ಪತ್ತೆಯಾಗಿತ್ತು. ಮೇಲೆ ಎಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದರು ಒಂದಿಲ್ಲೊಂದು ಹೊಸ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಲ್ಲಿಯ ವರೆಗೆ ಒಟ್ಟು ಸೋಂಕಿತರ ಸಂಖ್ಯೆ 22ಕ್ಕೇರಿದ್ದು, ಆ ಪೈಕಿ ಓರ್ವ ಭಟ್ಕಳ, ಓರ್ವ ಉಡುಪಿ ಹಾಗೂ ನಾಲ್ವರು ಕೇರಳದವರಾಗಿದ್ದಾರೆ. ಉಳಿದ 16 ಮಂದಿ ದ.ಕ. ಜಿಲ್ಲೆಯವರು. ಒಟ್ಟು ಸೋಂಕಿತರ […]

ಬಂಟ್ವಾಳ ಕೆಳಗಿನ ಪೇಟೆ ಸಂಪೂರ್ಣ ಸ್ತಬ್ದ, ಮೃತ ಮಹಿಳೆಯ ಕುಟುಂಬದ ಮೇಲೆ ನಿಗಾ

Sunday, April 19th, 2020
Bantwal

ಮಂಗಳೂರು: ಕೊರೋನಾ ಸೋಂಕಿನಿಂದ ಬಂಟ್ವಾಳದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ಕೆಳಗಿನ ಪೇಟೆಯಿಂದ ಜಕ್ರಿಬೆಟ್ಟು ವಿನವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಈ ನಡುವೆ ಮೃತ ಮಹಿಳೆಯ ಅತ್ತೆ ಹಾಗೂ ಪಕ್ಕದ ಮನೆಯ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾಗಿರುವುದು ಪರಿಸರದಲ್ಲಿ ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ ಮೃತ ಮಹಿಳೆಯ ಅತ್ತೆಯನ್ನು ಸದ್ಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಮೂರು ದಿನಗಳ ಹಿಂದೆ ಪಕ್ಕದಮನೆಯ ಮಹಿಳೆಯೊಬ್ಬರು ಕೂಡ ಜ್ವರದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.  ಅತ್ತೆಇತ್ತೀಚೆಗೆ ಕಾಲು […]

ಕೊರೊನಾ ಸೋಂಕು ಶಂಕೆ : ದುಬೈನಿಂದ ಮಂಗಳೂರಿಗೆ ಆಗಮಿಸಿದ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ ದಾಖಲು

Monday, March 9th, 2020
venlock

ಮಂಗಳೂರು : ನಗರದ ಅಂತರಾಷ್ಟ್ರೀಯ ಏರ್ ಪೋರ್ಟಿನಲ್ಲಿ ಶಂಕಿತ ಕೊರೊನಾ ಪ್ರಯಾಣಿಕನೊಬ್ಬ ಪತ್ತೆಯಾಗಿದ್ದಾನೆ. ಪ್ರಯಾಣಿಕ ಭಾನುವಾರ ತಡ ರಾತ್ರಿ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದಾನೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಸ್ಕ್ರೀನಿಂಗ್ ವೇಳೆ ಟೆಂಪರೇಚರ್ ನಲ್ಲಿ ಬಯಲಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಆರೋಗ್ಯಾಧಿಕಾರಿಗಳು ಸ್ಯಾಂಪಲ್ ತೆಗೆದು ಲ್ಯಾಬ್‍ಗೆ ರವಾನಿಸಿದ್ದು, ಕೊರೊನಾ ಇರೋ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಯಾಣಿಕನನ್ನು ಐಸೋಲೇಶನ್ ವಾರ್ಡ್‍ಗೆ ಸಿಬ್ಬಂದಿ ರವಾನಿಸಿದ್ದಾರೆ. ಚೀನಾದಲ್ಲಿ ಮರಣ ಮೃದಂಗ […]

ಕರ್ನಾಟಕ ಆಶ್ರಯದಲ್ಲಿ ದುಬೈಯಲ್ಲಿ ರಕ್ತದಾನ ಶಿಬಿರ

Saturday, March 7th, 2020
dubay

ದುಬೈ : ನ್ಯೂ ಮಾರ್ಕ್ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಮಂಗಳೂರು ಮತ್ತು ಕೊಂಕಣ್ಸ್ ಬೆಲ್ಸ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಜಂಟಿ ಆಶ್ರಯದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 06.03.2020 ನೇ ಶುಕ್ರವಾರದಂದು ಯುನೈಟೆಡ್ ಅರಬ್ ಎಮಿರೇಟ್ಸ್ ನ ದುಬೈಯ ಲತೀಫಾ ಬ್ಲಡ್ ಡೊನೇಷನ್ ಸೆಂಟರ್ ನಲ್ಲಿ ಯಶಸ್ವಿಯಾಗಿ ನಡೆಯಿತು. ರಕ್ತ ದಾನ ಶಿಬಿರದಲ್ಲಿ ಒಟ್ಟು 70 ಮಂದಿ ಭಾಗವಹಿಸಿ ಹೆಸರು ನೋಂದಾಯಿಸಿದ್ದರು. ಕಾರಣಾಂತರಗಳಿಂದ 50 ಮಂದಿಗೆ ಮಾತ್ರ ರಕ್ತದಾನ ಮಾಡಲು ಸಾಧ್ಯವಾಯಿತು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ದುಬೈಯ ಲತೀಫಾ […]

ಮಂಗಳೂರು : ವಿದೇಶದಿಂದ ಅಕ್ರಮ ಚಿನ್ನ ಸಾಗಾಟ; ಆರೋಪಿ ಚಿನ್ನ ಸಹಿತ ವಶ

Tuesday, November 5th, 2019
gold

ಮಂಗಳೂರು : ದುಬೈಯಿಂದ ಏರ್ ಇಂಡಿಯಾ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಚಿನ್ನಾಭರಣ ಸಹಿತ ವಶಕ್ಕೆ ಪಡೆದಿರುವ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಆರೋಪಿ ಸುಮಾರು 9.65 ಲಕ್ಷ ರೂ. ಮೌಲ್ಯದ ಸುಮಾರು 252.98 ಗ್ರಾಂ ಚಿನ್ನ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ. ಚಿನ್ನವನ್ನು ಮಕ್ಕಳ ಆಟಿಕೆಗಳಲ್ಲಿರಿಸಿ ಸಾಗಾಟ ನಡೆಸುತ್ತಿದ್ದ ಎಂದು ತಿಳಿದು ಬಂದಿದ್ದು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.  

ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಯಲ್ಲಿ ?

Tuesday, June 11th, 2019
ima-jewellery

ಬೆಂಗಳೂರು: ಪ್ರತಿಷ್ಠಿತ ಐಎಂಎ ಜ್ಯುವೆಲ್ಲರ್ಸ್ ಮಾಲೀಕ ಮುಹಮ್ಮದ್ ಮನ್ಸೂರ್ ಖಾನ್ ದುಬೈಗೆ ಪರಾರಿಯಾಗಿರುವ ಕುರಿತು ಸಂಶಯ ವ್ಯಕ್ತವಾಗಿದೆ. ಹೂಡಿಕೆ ಹೆಸರಿನಲ್ಲಿ ಸಹಸ್ರಾರು ಜನರಿಗೆ ವಂಚಿಸಿರುವ ಆತ ಕಳೆದ ತಿಂಗಳಾಂತ್ಯದಲ್ಲಿ ದುಬೈಗೆ ತೆರಳಿರುವುದಾಗಿ ಸ್ವತಃ ಹೂಡಿಕೆದಾರರೇ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಹೂಡಿಕೆದಾರರು ಮಂಗಳವಾರ ಕೂಡ ಸಹಸ್ರಾರು ಸಂಖ್ಯೆಯಲ್ಲಿ ದೂರು ನೀಡಲು ಬಂದಿದ್ದ ದೃಶ್ಯ ಶಿವಾಜಿನಗರದ ಶಾದಿ ಮಹಲ್ ನಲ್ಲಿ ಕಂಡುಬಂತು. ಪ್ರತಿಯೊಬ್ಬರ ಕಥೆಯೂ ಕರುಣಾಜನಕವಾಗಿದ್ದು, ಭವಿಷ್ಯದ ಬದುಕು ಕಟ್ಟಿಕೊಳ್ಳಲು ಹೂಡಿಕೆ ಮಾಡಿದವರು ಇದೀಗ ದಿಕ್ಕು ತೋಚದಂತಾಗಿದ್ದಾರೆ. […]

ದುಬೈ ಪವರ್ ಲಿಪ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ‌ರಿಗೆ ಬೆಸ್ಟ್ ಲಿಫ್ಟರ್ ಪ್ರಶಸ್ತಿ

Wednesday, October 31st, 2018
sports

ಮಂಗಳೂರು: ದುಬೈನಲ್ಲಿ ಜರುಗಿದ ಏಷ್ಯಾನ್ ಪವರ್ ಲಿಪ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದು ಬೆಸ್ಟ್ ಲಿಫ್ಟರ್ ಪ್ರಶಸ್ತಿ ಪಡೆದ ಅಂತರ್ ರಾಷ್ಟ್ರೀಯ ಕ್ರೀಡಾಪಟು ಹೇಮಚಂದ್ರ, (ಪತ್ರಾಂಕಿತ ವ್ಯವಸ್ಥಾಪಕರು, ಸಮಾಜ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು) ಇವರನ್ನು ವಿಕಾಸ್ ಕುಮಾರ್ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು. ಈ ವೇಳೆ ಮಾತಾನಾಡಿದ ಆಯುಕ್ತರು, ಏಷ್ಯಾನ್ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆಲ್ಲುವ ಮೂಲಕ ಹೇಮಚಂದ್ರ […]

ಪೈಲೆಟ್ ಗೆ ಅನಾರೋಗ್ಯ ಸ್ಪೈಸ್ ಜೆಟ್ ವಿಮಾನ ರನ್ ವೇ ಯಲ್ಲೇ ಬಾಕಿ

Thursday, August 2nd, 2018
spice-jet

ಮಂಗಳೂರು : ದುಬೈಗೆ ತೆರಳಬೇಕಾಗಿದ್ದ 188 ಪ್ರಯಾಣಿಕರು ಅಸೌಖ್ಯದ ಕಾರಣ ಪೈಲಟ್ ಬಾರದ ಹಿನ್ನಲೆಯಲ್ಲಿ ವಿಮಾನದಲ್ಲಿ ರಾತ್ರಿ ಕಳೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪೈಲೆಟ್ ಬಾರದ ಕಾರಣ ದುಬೈಗೆ ಹಾರಬೇಕಿದ್ದ ಸ್ಪೈಸ್ ಜೆಟ್ ವಿಮಾನ ರನ್ ವೇ ಯಲ್ಲೇ ಬಾಕಿಯಾಗಿದೆ. ನಿನ್ನೆ ತಡ ರಾತ್ರಿ 12.45ಕ್ಕೆ ಮಂಗಳೂರಿನಿಂದ ದುಬೈಗೆ ಸ್ಪೈಸ್ ಜೆಟ್ -ಎಸ್ ಜಿ59 ವಿಮಾನ ಹಾರಬೇಕಿತ್ತು . 188 ಪ್ರಯಾಣಿಕರು ವಿಮಾನ ಏರಿ ಕುಳಿತ ಬಳಿಕ  ಪೈಲೆಟ್ ಗೆ ಅನಾರೋಗ್ಯ ಕಾಡಿದೆ. […]

ದುಬೈಯಲ್ಲಿ ವಿಶ್ವ ತುಳು ಸಮ್ಮೇಳನ

Monday, July 23rd, 2018
veerendra-heggde

ಮಂಗಳೂರು : ಅರಬ್ ಸಂಸ್ಥಾನದಲ್ಲಿ ನವಂಬರ್ 23 ಮತ್ತು 24 ರಂದು ದುಬಾಯಿಯ ಅಲ್‌ನಾಸರ್ ಲೀಸರ್ ಲ್ಯಾಂಡ್‌ಐಸ್‌ರಿಂಕ್ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವ ತುಳು ಸಮ್ಮೇಳನ ಜರಗಲಿದ್ದು, ಸಮ್ಮೇಳನದ ಕುರಿತು ಸಂಘಟನೆಯ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ದುಬಾಯಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಕಾರ್ಯಕ್ರಮದ ರೂಪುರಶಗಳನ್ನು ವಿವರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದರು. ಸಮ್ಮೇಳನ ತಯಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ವೀರೆಂದ್ರ ಹೆಗ್ಗಡೆ ಅವರು ಎರಡು ದಿನಗಳ ಕಾಲ ನಡೆಯುವ ವಿಶ್ವ ತುಳು ಸಮ್ಮೇಳನಕ್ಕೆ ಉಪಯುಕ್ತ […]

ಸಾಕ್ಸ್‌‌, ಬ್ಯಾಗ್‌ನಲ್ಲಿ 25 ಲಕ್ಷ ವಿದೇಶಿ ಕರೆನ್ಸಿ… ಮಂಗಳೂರಲ್ಲಿ ಸಿಕ್ಕಿಬಿದ್ದ ಖದೀಮ

Saturday, February 17th, 2018
currency

ಮಂಗಳೂರು: ಸಾಕ್ಸ್ ಹಾಗೂ ಬ್ಯಾಗ್‌ನಲ್ಲಿ ವಿವಿಧ ದೇಶಗಳ ನಗದು ಇಟ್ಟುಕೊಂಡು ದುಬೈಗೆ ಸಾಗಿಸಲು ಯತ್ನಿಸುತ್ತಿದ್ದವನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕಾಸರಗೋಡಿನ ಸದ್ಯ ಮಂಗಳೂರು ನಿವಾಸಿಯಾಗಿರುವ ಸಿರಾಜುದ್ದೀನ್ ಪಲ್ಲಿಕ್ಕೆಕುನ್ ಆಲಿ (39) ಬಂಧಿತ. ಬಂಧಿತನಿಂದ ಯುಎಸ್ ಡಾಲರ್‌‌, ಕುವೈತ್‌‌ ದಿನಾರ್, ಸ್ವಿಸ್ ಫ್ರಾಂಕ್, ಯುರೋಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ನಗದಿನ ಮೌಲ್ಯ 25,82,686 ರೂ. ಆಗಿದೆ. ಆರೋಪಿ ಮಂಗಳೂರಿನಿಂದ ದುಬೈಗೆ ಹೋಗಲು ಸಿದ್ಧಗೊಳ್ಳುತ್ತಿದ್ದಾಗ, ತಮಗೆ ದೊರೆತ ಖಚಿತ ಮಾಹಿತಿಯಂತೆ […]