ಕಲ್ಲಡ್ಕ ರಾಷ್ಟ್ರೀಯ ಹೆದ್ಧಾರಿ ಒಂದು ವಾರದೊಳಗೆ ದುರಸ್ತಿ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ

Monday, June 10th, 2024
Dinesh -Gundurao

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದುಹೋಗಿರುವ ಎಲ್ಲಾ ರಾಷ್ಟ್ರೀಯ ಹೆದ್ಧಾರಿಗಳನ್ನು ಸಮರ್ಪಕ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮಳೆಗಾಲದಲ್ಲಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿ ಮಾತನಾಡಿದರು. ಬಿಸಿ.ರೋಡ್-ಕಲ್ಲಡ್ಕ-ಮಾಣಿ ರಾಷ್ಟ್ರೀಯ ಹೆದ್ಧಾರಿಯಲ್ಲಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆಯ ನೀರು ಹರಿದು […]

ಬಿರುಕು ಬಿಟ್ಟ ಮರವೂರು ಸೇತುವೆ ದುರಸ್ತಿ ಜುಲೈಯಲ್ಲಿ ಪೂರ್ಣ

Friday, June 25th, 2021
Maravooru Bridge

ಮಂಗಳೂರು : ಇತ್ತೀಚೆಗೆ ಬಾರಿ ಮಳೆಯಿಂದ ಬಿರುಕು ಬಿಟ್ಟಿರುವ ಮರವೂರು ಸೇತುವೆಯ ದುರಸ್ತಿ ಕಾರ್ಯವನ್ನು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್‌ ಕೋಟ್ಯಾನ್‌‌ ಅವರು ಜೂನ್‌ 24ರ ಗುರುವಾರ ಪರಿಶೀಲಿಸಿದರು. ದುರಸ್ತಿ  ಕೆಲಸ ಭರದಿಂದ ನಡೆಯುತ್ತಿದ್ದು, ಗುತ್ತಿಗೆದಾರರು ಹಾಗೂ ಎಂಜಿನಿಯರ್‌‌ ಜುಲೈಯಲ್ಲಿ ಕೊನೆಯಲ್ಲಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೇತುವೆಯ ದುರಸ್ತಿಯಾದ ಕೂಡಲೇ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಪಕ್ಕದಲ್ಲಿ ಹೊಸ ಸೇತುವೆಯ ಕಾಮಗಾರಿಯೂ ನಡೆಯುತ್ತಿದ್ದು, ಪೂರ್ಣವಾದ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ, ಹಳೆಯ ಸೇತುವೆಯ ಸಂಪೂರ್ಣ ದುರಸ್ತಿ ಮಾಡುವ ಯೋಜನೆ ಇದೆ” ಎಂದು […]

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸಿಗರಿಂದ ಬೃಹತ್ ಪಾದಯಾತ್ರೆ ಪ್ರತಿಭಟನೆ

Wednesday, September 11th, 2019
paadayatre

ಬಂಟ್ವಾಳ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಆಗ್ರಹಿಸಿ ಬಂಟ್ವಾಳ ಕಾಂಗ್ರೆಸ್ ವತಿಯಿಂದ ಬುಧವಾರ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಪ್ರತಿಭಟನೆ ನಡೆಯಿತು. ಮೆಲ್ಕಾರ್ ಜಂಕ್ಷನ್ ನಿಂದ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಬಿ.ಸಿ.ರೋಡ್ ಮಿನಿ ವಿಧಾನಸೌಧದ ವರೆಗೆ ಪಾದಾಯಾತ್ರೆಯ ಮೂಲಕ ಆಗಮಿಸಿ ಹೆದ್ದಾರಿ ದುರಸ್ತಿಗಾಗಿ ತಹಶೀಲ್ದಾರ್ ಅವರ ಮೂಲಕ ಸರಕಾರವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಜಿ.ಪಂ, ತಾ.ಪಂ ಸದಸ್ಯರು, ಕಾಂಗ್ರೆಸ್ ನ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು […]