ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರವರೆಗೆ ದರ್ಶನಕ್ಕೆ ಅವಕಾಶ, ವಾರಾಂತ್ಯ ಭಕ್ತಾಧಿಗಳಿಗೆ ನಿರ್ಬಂಧ

Tuesday, September 7th, 2021
Kateel Kukke Dharmasthala

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರದೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ, ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿಗಳೂ, ಜಿಲ್ಲಾ […]

ಕಟೀಲು ದುರ್ಗಾಪರಮೇಶ್ವರಿಯ ಯಕ್ಷಗಾನ ಕಲಾವಿದರಿಗೆ ಈ ಬಾರಿಯೂ ಬಾಗಿಲು ಬಂದ್!

Wednesday, June 27th, 2018
kateelu

ಮಂಗಳೂರು: ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮೇಳದಿಂದ ಕಳೆದ ಬಾರಿ ಕೈಬಿಡಲಾದ ಏಳು ಮಂದಿಗೆ ಈ ಬಾರಿಯೂ ಅವಕಾಶ ಸಿಕ್ಕಿಲ್ಲ. ಕಟೀಲು ದೇವಸ್ಥಾನದಲ್ಲಿ ಆರು ಮೇಳಗಳಿದ್ದು, ಇದರಲ್ಲಿ ಐದನೇ ಮೇಳದಲ್ಲಿ ಪ್ರಸಿದ್ಧ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರನ್ನು ಒಂದನೇ ಮೇಳಕ್ಕೆ ವರ್ಗಾಯಿಸಲಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಐದನೇ ಮೇಳದ ಕಲಾವಿದರು ಮೇಳಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಏಳು ಕಲಾವಿದರನ್ನು ಹೊರತುಪಡಿಸಿ ಇತರ ಕಲಾವಿದರನ್ನು ಮೇಳಕ್ಕೆ ಸೇರಿಸಲಾಗಿತ್ತು. ಆದರೆ ಏಳು ಮಂದಿ ಕಲಾವಿದರನ್ನು ಮೇಳಕ್ಕೆ ಸೇರಿಸಿಕೊಂಡಿರಲಿಲ್ಲ. […]

ಫೇಸ್‌ಬುಕ್‌ ಪೇಜ್‌ನಲ್ಲಿ ದುರ್ಗಾಪರಮೇಶ್ವರಿಯ ಅವಹೇಳನ

Thursday, November 2nd, 2017
facebook page

ಮಂಗಳೂರು: ಫೇಸ್‌ಬುಕ್‌ನಲ್ಲಿ ಮತ್ತೆ ನಾಡಿನ ಮನೆ, ಮನದ ದೇವತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ವಿರುದ್ಧ ಅವಹೇಳನಕಾರಿ ಪೋಸ್ಟ್‌ನ್ನು ಹಾಕಲಾಗಿದೆ. ಫೇಸ್‌ಬುಕ್‌ ಪೇಜ್‌ನಲ್ಲಿ ರಾಮ, ಸೀತೆ, ಕಟೀಲು ದುರ್ಗಾಪರಮೇಶ್ವರಿ, ಸ್ವಾಮಿ ಕೊರಗಜ್ಜ ಹೀಗೆ ಎಲ್ಲಾ ದೇವಿ-ದೇವರುಗಳ ವಿರುದ್ಧ ಅಸಹ್ಯಕರ ಹಾಗೂ ವಿಕೃತ ಪೋಸ್ಟ್‌ಗಳನ್ನು ಮಂಗಳೂರು ವ್ಯಕ್ತಿಯೋರ್ವನ ಹೆಸರಿನಿಂದ ಹಾಕಲಾಗಿದೆ. ಈ ಹಿಂದೆಯೂ ಇಂತಹದ್ದೇ ವಿವಾದಾತ್ಮಕ ಹಾಕಿದ್ದವರ ವಿರುದ್ಧ ಹಿಂದೂ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದ್ದರು. ಆಗ ಡವರ್ಜ್ ಮೊಹಿದೀನ್ ಹಾಗೂ ಶಫಿ ಬಿ.ಎಂ ಎಂಬುವರನ್ನು ಬಂಧಿಸಲಾಗಿತ್ತು. ಈ ಘಟನೆ ಮರೆಯುವ […]