ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಮನೆಗೆ ಬಸವರಾಜ ಬೊಮ್ಮಾಯಿ

Thursday, July 28th, 2022
CMBellare

ಮಂಗಳೂರು : ದುಷ್ಕರ್ಮಿಗಳಿಂದ ಕೊಲೆಯಾದ ಪ್ರವೀಣ್ ನೆಟ್ಟಾರು ಅವರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ಸಂಜೆ ಆಗಮಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ […]

ದುಷ್ಕರ್ಮಿಯಿಂದ ಮೂವರು ಮಹಿಳೆಯರ ಮೇಲೆ ತಲವಾರು ದಾಳಿ, ಓರ್ವ ಮಹಿಳೆ ಗಂಭೀರ

Monday, September 20th, 2021
jail-road-assult

ಮಂಗಳೂರು : ನಗರದ ಜೈಲ್ ಬಳಿಯ ಡಯಟ್ ಸಂಸ್ಥೆಯ ಒಳಗೆ ನುಗ್ಗಿದ ದುಷ್ಕರ್ಮಿಯೋರ್ವ ಮೂವರು ಮಹಿಳೆಯರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದವರನ್ನು ರೀನ, ಗುಣವತಿ, ನಿರ್ಮಲ ಎಂದು ಗುರುತಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲವಾರು ಮಾದರಿಯ ಆಯುಧದಿಂದ ಏಕಾಏಕಿಯಾಗಿ ಸಂಸ್ಥೆಯೊಳಗೆ ನುಗ್ಗಿದ ವ್ಯಕ್ತಿ ಹಲ್ಲೆ ನಡೆಸಿದ್ದು, ನಿರ್ಮಲ ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ತಿಳಿಸಿದ್ದಾರೆ.  

ಫೈನಾನ್ಸಿಯರ್ ನನ್ನು ಕಚೇರಿ ಒಳಗಡೇನೇ ಹತ್ಯೆ ಮಾಡಿದ ದುಷ್ಕರ್ಮಿಗಳು

Saturday, July 31st, 2021
Ajendra

ಕುಂದಾಪುರ:  ಪಾಲುದಾರಿಕೆಯಲ್ಲಿ ಫೈನಾನ್ಸ್‌ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಹಣಕಾಸು ವಿಚಾರಕ್ಕಾಗಿ  ಕೊಲೆ ಮಾಡಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಳಾವರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಯಡಾಡಿ ಮತ್ಯಾಡಿ ನಿವಾಸಿ ಅಜೇಂದ್ರ ಶೆಟ್ಟಿ (33 ವ) ಎಂದು ಗುರುತಿಸಲಾಗಿದೆ. ಅಜೇಂದ್ರ ಶೆಟ್ಟಿ ಇವರು ಕಾಳಾವರ ನಂದಿಕೇಶ್ವರ ಕಾಂಪ್ಲೆಕ್ಸ್‌ ನಲ್ಲಿ ಅನೂಪ್‌ ನೊಂದಿಗೆ ಪಾಲುದಾರಿಕೆಯಲ್ಲಿ ಫೈನಾನ್ಸ್‌ ವ್ಯವಹಾರ ನಡೆಸಿಕೊಂಡಿದ್ದರು. ಅಜೇಂದ್ರನು ರಾತ್ರಿ ಮನೆಗೆ ಬಾರದ ಕಾರಣ ಆತನಿಗೆ ಫೋನ್ ಮಾಡಿದಾಗ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತರಿಗೆ ಫೊನ್ […]

ಶಿವಭಾಗ್ ಬಳಿ ಬೀದಿನಾಯಿಗೆ ಗುಂಡು ಹೊಡೆದು ಕೊಂದ ದುಷ್ಕರ್ಮಿ

Friday, July 2nd, 2021
dog

ಮಂಗಳೂರು : ದುಷ್ಕರ್ಮಿಯೋರ್ವ ನಗರದ ಶಿವಭಾಗ್ ಸಮೀಪದ  ಆಭರಣ ಜ್ಯುವೆಲ್ಲರ್ಸ್ ಬಳಿ ಬೀದಿನಾಯಿಗೆ ಗುಂಡು ಹೊಡೆದು ಕೊಂದು ಹಾಕಿರುವ ಘಟನೆ  ಗುರುವಾರ ತಡರಾತ್ರಿ ನಡೆದಿದೆ. ಘಟನೆಯ ನಂತರ ಸ್ಥಳಕ್ಕೆ ತೆರಳಿದ್ದ ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ನಾಯಿಯನ್ನು ಆ್ಯಂಬುಲೆನ್ಸ್ ಮೂಲಕ ನಗರದ ಜೈಲು ರಸ್ತೆಯ ಪಶು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ನಾಯಿಯ ದೇಹದಲ್ಲಿ ಬುಲೆಟ್ ಲಭಿಸಿದೆ ಎಂದು ಹೇಳಿದ್ದಾರೆ. ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಮಾ ರಮೇಶ್, ಇದೊಂದು ಅಮಾನವೀಯ ಕೃತ್ಯ. ಈ ಘಟನೆ […]

ಪೊಲೀಸರಿಗೆ ಮಾಹಿತಿ ನೀಡಿದ್ದೆ ಸ್ಟುಡಿಯೋ ಮಾಲೀಕ ನ ಕೊಲೆ ಯತ್ನಕ್ಕೆ ಕಾರಣವಾಯಿತೇ ?

Wednesday, October 28th, 2020
dinesh Shetty

ಬಂಟ್ವಾಳ : ಮೂವರು ದುಷ್ಕರ್ಮಿಗಳ ತಂಡ ಫರಂಗಿಪೇಟೆಯಲ್ಲಿ  ಫೊಟೋಗ್ರಾಫರ್ ಒಬ್ಬರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ. ಫರಂಗಿಪೇಟೆಯಲ್ಲಿರುವ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ತಲವಾರು ದಾಳಿ ನಡೆಸಿದ್ದಾರೆ. ದಿನೇಶ ಅವರ ಹೊಟ್ಟೆಯಭಾಗಕ್ಕೆ ಮೊದಲು ಇರಿಯಲಾಗಿದೆ. ಹಲ್ಲೆಯನ್ನು ತಡೆಯಲೆತ್ನಿಸಿದ್ದಾಗ ಕೈ ಬೆರಳು ತುಂಡಾಗಿದೆ ಮತ್ತು ತಲೆಯ ಹಿಂಬದಿಗೆ ಗಂಭೀರ ಗಾಯಗಳಾಗಿದೆ. ಗಂಭೀರ ಸ್ಥಿತಿಯಲ್ಲಿ  ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಎಜೆ  […]