ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು

Friday, October 16th, 2020
Manish Shetty

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]

ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ, ಐವರು ವಶಕ್ಕೆ

Friday, October 9th, 2020
Kusuma

ಮಂಗಳೂರು : ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಮಂಗಳೂರು ದಕ್ಷಿಣ ಎಸಿಪಿ ನೇತೃತ್ವದ ಪೊಲೀಸ್ ತಂಡ ಶಂಕಿತ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಕಣಂತೂರು ಬೆಳ್ಳೇರಿ ಸಮೀಪ  ಸೆ. 25ರಂದು 50 ವರ್ಷದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಗ್ಯಾಸ್ ಸ್ಟೌವ್ ತೆರೆದ ಸ್ಥಿತಿಯಲ್ಲಿ ಮತ್ತು ಮನೆಯ ಕರ್ಟೈನ್ಗೆ ಬೆಂಕಿ ಹಾಕಿರುವ ದುಷ್ಕರ್ಮಿಗಳು, ಪ್ರಕರಣ ತಿರುಚುವ ಪ್ರಯತ್ನ ಮಾಡಿದ್ದರು. ಇದರಿಂದಾಗಿ ಪೊಲೀಸರ ತನಿಖೆಗೆ […]

ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯ ಮರ್ಮಾಂಗವನ್ನು ಕತ್ತರಿಸಿ ಅಮಾನವೀಯ ಕೃತ್ಯ

Saturday, February 15th, 2020
mandya

ಮಂಡ್ಯ : ದುಷ್ಕರ್ಮಿಗಳು ಕಾಲೇಜು ವಿದ್ಯಾರ್ಥಿಯೊಬ್ಬನ ಮರ್ಮಾಂಗವನ್ನು ಕತ್ತರಿಸಿರುವ ಅಮಾನವೀಯ ಕೃತ್ಯ ಪಾಂಡವಪುರ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿಯು ಕೆ.ಆರ್.ಪೇಟೆ ಕಾಲೇಜು ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗಲು ಪಾಂಡವಪುರ ತಾಲೂಕಿನ ಸೀತಾಪುರ ಗೇಟ್ ಬಳಿ ನಿಂತಿದ್ದ. ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿದ್ಯಾರ್ಥಿಯನ್ನು ಎಲ್ಲಿಗೆ ಹೋಗ ಬೇಕು ಎಂದು ಕೇಳಿದ್ದರು. ಆಗ ವಿದ್ಯಾರ್ಥಿಯು, ನಾನು ಕೆ.ಆರ್.ಪೇಟೆಗೆ ಹೋಗಬೇಕು ಎಂದು ಹೇಳಿದ್ದರು. ಆದಕ್ಕೆ ದುಷ್ಕರ್ಮಿಗಳು, ‘ಬಾ ನಮ್ಮ ಜೊತೆ. ನಾವು ಆ ಕಡೆನೇ ಹೋಗುತ್ತಿದ್ದೇವೆ ಎಂದು ಕಾರಿನಲ್ಲಿ […]

ಬೆಳ್ತಂಗಡಿ : ಶಾಲಾ ಬಾವಿಯ ನೀರು ಕುಡಿದು 8 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥ

Monday, December 2nd, 2019
belthangady

ಬೆಳ್ತಂಗಡಿ : ಶಾಲೆಯ ಬಾವಿ ನೀರು ಕುಡಿದು ಎಂಟು ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡ ಘಟನೆ ತಾಲೂಕಿನ ಶಿಬಾಜೆ ಪೆರ್ಲ ಎಂಬಲ್ಲಿರುವ ಸರಕಾರಿ ಉನ್ನತೀಕರಿಸಿದ ಶಾಲೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ. ಅಸ್ವಸ್ಥಗೊಂಡಿರುವ ವಿದ್ಯಾರ್ಥಿಗಳ ಪೈಕಿ ಗಂಭೀರಾವಸ್ಥೆಯಲ್ಲಿರುವ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಬಾವಿ ನೀರಿಗೆ ಯಾರೋ ದುಷ್ಕರ್ಮಿಗಳು ವಿಷ ಬೆರೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 7ನೇ ತರಗತಿ ವಿದ್ಯಾರ್ಥಿ ಚೇತನ್ ಕುಮಾರ್(13), 8ನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್(14), ಯೋಗೀಶ್ (14), ರಾಧಾಕೃಷ್ಣ(14), 6ನೇ […]

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಜೀವಂತ ಸುಟ್ಟ ದುಷ್ಕರ್ಮಿಗಳು

Friday, November 29th, 2019
Priyanka

ಹೈದರಾಬಾದ್ : ಪಶುವೈದ್ಯೆಯೊಬ್ಬರ ಮೆಲೆ ಅತ್ಯಾಚಾರ ನಡೆಸಿ ಬಳಿಕ ಅವರನ್ನು ಜೀವಂತ ಸುಟ್ಟುಹಾಕಿರುವ ಬೀಭತ್ಸ ಘಟನೆ ಹೈದರಾಬಾದ್ ಹೊರವಲಯದಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಅತ್ಯಾಚಾರಕ್ಕೊಳಗಾಗಿ ಬಳಿಕ ಕೊಲೆಯಾದ ಮಹಿಳೆ 27 ವರ್ಷದ ಪ್ರಿಯಾಂಕ ರೆಡ್ಡಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪ್ರಿಯಾಂಕ ಅವರು ತನ್ನ ಕ್ಲಿನಿಕ್ ನಿಂದ ವಾಪಾಸಾಗುತ್ತಿದ್ದ ಸಂದರ್ಭದಲ್ಲಿ ಹೈದರಾಬಾದ್ ನಗರದ ಹೊರವಲಯದಲ್ಲಿರುವ ತೊಂಡುಪಲ್ಲಿ ಟೋಲ್ ಪ್ಲಾಝಾದ ಬಳಿ ತಲುಪಿತ್ತದ್ದಂತೆಯೇ ಅವರ ಸ್ಕೂಟರ್ ನ ಟಯರ್ ಪಂಕ್ಚರ್ ಆಗಿರುವುದು ಅವರ ಗಮನಕ್ಕೆ ಬಂದಿದೆ. ತಕ್ಷಣವೇ ಪ್ರಿಯಾಂಕ ಅವರು […]

‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ

Friday, December 8th, 2017
serial-actor

ಬೆಂಗಳೂರು:‘ನಾಗಿಣಿ’ ಧಾರವಾಹಿ ಪ್ರಮುಖ ಪಾತ್ರಧಾರಿ ದಿಕ್ಷೀತ್ ಶೆಟ್ಟಿ ಮೇಲೆ ದಾಳಿ ನಡೆಸಲಾಗಿದೆ. ವಿಜಯನಗರದ ಮಾರುತಿ ಮಂದಿರದ ಬಳಿ ತಡರಾತ್ರಿ ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಸೆಲ್ಫಿ ತೆಗೆಸಿಕೊಳ್ಳುವ ನೆಪದಲ್ಲಿ ಕಿರುತೆರೆ ನಟನನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮೂವರು ಕಿರುತೆರೆ ನಟನನ್ನು ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಸೆಲ್ಫಿ ತೆಗೆಸಿಕೊಳ್ಳಲು ನಿರಾಕರಿಸಿದ್ದಕ್ಕೆ ನಟನ ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿ ವಿಕೃತಿ ಮೆರೆದಿದ್ದಾರ ಈ ಬಗ್ಗೆ ನಟ ದೀಕ್ಷಿತ್ ಶೆಟ್ಟಿ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು […]

ದುಷ್ಕರ್ಮಿಗಳ ತಂಡದಿಂದ ಮನೆಯವರನ್ನು ಕಟ್ಟಿ ಹಾಕಿ ನಿಧಿಗಾಗಿ ಶೋಧ

Tuesday, January 24th, 2017
Karopady

ಮಂಗಳೂರು: ಇನ್ನೊವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮನೆಯವರನ್ನು ಕಟ್ಟಿ ಹಾಕಿ ನಿಧಿಗಾಗಿ ಶೋಧ ನಡೆಸಿದ ಘಟನೆ ಇಂದು ನಸುಕಿನ ಜಾವ ಬಂಟ್ವಾಳ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ನಡೆದಿದೆ. ಕರೋಪಾಡಿಯ ವಿಘ್ನರಾಜ್ ಭಟ್ ಎಂಬುವರ ಮನೆಗೆ ನುಗ್ಗಿದ್ದ 9 ಜನರ ತಂಡ ಮನೆಯವರಲ್ಲಿ ನಿಧಿ ಎಲ್ಲಿದೆ ಎಂದು ವಿಚಾರಿಸಿ ಅವರನ್ನು ಕಟ್ಟಿ ಹಾಕಿದೆ. ಅವರ ಮನೆಯ ಹೊರಭಾಗದಲ್ಲಿ ಮನೆಯ ಗೇಟಿನ ಬಳಿ ನೆಲವನ್ನು ಅಗೆದು ನಿಧಿಗೆ ಹುಡುಕಾಡಿದ್ದಾರೆ. ಆದರೆ ನಿಧಿ ಸಿಗದೆ ವಾಪಸ್‌ ತೆರಳಿದ್ದಾರೆ. ದುಷ್ಕರ್ಮಿಗಳು ಕನ್ನಡ, […]

ಅಡಿಕೆ ವ್ಯಾಪಾರಿಯೊಬ್ಬರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು: 5ಲಕ್ಷ ರೂ ಹಾಗೂ ಮೊಬೈಲ್‌ ದೋಚಿ ಪರಾರಿ

Tuesday, January 24th, 2017
Sulya1

ಸುಳ್ಯ: ಅಡಿಕೆ ವ್ಯಾಪಾರಿಯೊಬ್ಬರು ತಮ್ಮ ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಪಿಸ್ತೂಲ್‌ ಮತ್ತು ತಲವಾರ್‌ ತೋರಿಸಿ ಕಾರಲ್ಲಿದ್ದ 5ಲಕ್ಷ ರೂ ಹಾಗೂ ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿರುವ ಘಟನೆ ಐವರ್ನಾಡಿ ಬಳಿ ನಡೆದಿದೆ. ಅಡಿಕೆ ವ್ಯಾಪಾರಿ ಅಬ್ದುಲ್ ಖಾದರ್ ಎಂಬುವರು ತನ್ನ ಮಿತ್ರ ಶಫೀಕ್ ಮತ್ತು ಕೆಲಸದವರೊಂದಿಗೆ ಇಂದು ಬೆಳಗ್ಗೆ ಬೆಳ್ಳಾರೆಯಿಂದ ಗುತ್ತಿಗಾರಿಗೆ ತನ್ನ ಕಾರಲ್ಲಿ ಹೊರಟಿದ್ದರು. ಈ ವೇಳೆ ಕಾರು ಐವರ್ನಾಡು ತಲುಪುತ್ತಿದ್ದಂತೆ ಹಿಂದಿನಿಂದ ಹಿಂಬಾಲಿಸಿಕೊಂಡು ಬಂದ ಕಾರೊಂದು ಇವರ ಕಾರಿನ ಮುಂದೆ ಬಂದು ಅಡ್ಡ […]

ಇಬ್ಬರು ಯುವಕರಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿ

Tuesday, December 20th, 2016
two-youth-

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರಿಗೆ ಚೂರಿ ಇರಿದು ಇಬ್ಬರು ಯುವಕರಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ. ರೋಡ್‌‌‌ನಿಂದ ಪೊಳಲಿ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಇರುವ ಕಲ್ಪನೆ ಎಂಬಲ್ಲಿ ಬೈಕ್‌‌‌ನಲ್ಲಿ ಸಾಗುತ್ತಿದ್ದ ಮಲ್ಲೂರಿನ ಜುನೈದ್ ಮತ್ತು ಶಾಂತಿಯಂಗಡಿ ನಿವಾಸಿ ಸಿನಾನ್ ಎಂಬುವರ ಮೇಲೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿ ಬಂದ ಮೂವರು ಇರಿದು ಪರಾರಿಯಾಗಿದ್ದು, […]

ತಲಪಾಡಿಯ ತಚ್ಚಣಿಯಲ್ಲಿ ಮಹಿಳೆಗೆ ಪಿಸ್ತೂಲು ತೋರಿಸಿ ಹಲ್ಲೆ

Wednesday, July 10th, 2013
Talapady shotout

ಮಂಗಳೂರು: ಕೇರಳ ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ ಕೇಶವ್.ಬಿ ಅವರ ಮನೆಯೊಳಗೆ ಮಂಗಳವಾರ ಬೆಳಿಗ್ಗೆ 8.00 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಗೆ ಪಿಸ್ತೂಲು ತೋರಿಸಿ ಬೆದರಿಸಿ ಅವರಿಗೆ ಹಲ್ಲೆ ನಡೆಸಿದ ಘಟನೆ ತಲಪಾಡಿಯ ತಚ್ಚಣಿ ಸಮೀಪದ ಮಂಡಿ ಕಟ್ಟೆಯಲ್ಲಿ ನಡೆದಿದೆ. ದುಷ್ಕರ್ಮಿಗಳಿಬ್ಬರ ಪೈಕಿ ಓರ್ವ ಏಕಾಏಕಿ ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿದ್ದ  ಸಾಧನಾ ಕೇಶವ್ ಅವರಿಗೆ ಪಿಸ್ತೂಲು ತೋರಿಸಿ ಬೆದರಿಸಿದ್ದನು. ಮನೆಯೊಳಗೆ `ಯಾರಿದ್ದಾರೆಂದು’ ಪ್ರಶ್ನಿಸಿದ ಬಳಿಕ ಅವರ ಮೊಬೈಲಿನಿಂದ ತಾನು […]