ರಾಜ್ಯ ಸಂಪುಟದಲ್ಲಿ ಸಚಿವ ಪುನರ್‌ ರಚನೆ; ಕೋಟ ಶ್ರೀನಿವಾಸ ಪೂಜಾರಿ ದೆಹಲಿಗೆ

Tuesday, August 18th, 2020
srinivas Poojary

ಮಂಗಳೂರು : ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿಗಳು ಈಗಾಗಲೇ ಶುರುವಾಗಿದೆ. ಏತನ್ಮಧ್ಯೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರನೇ ದೆಹಲಿಗೆ ತೆರಳಿದ್ದಾರೆ. ಪುನರ್‌ ರಚನೆ ಶೀಘ್ರದಲ್ಲೇ ಆಗಲಿದ್ದು ಉಡುಪಿಯಿಂದ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಸುಳ್ಯದ ಎಸ್‌ ಅಂಗಾರ ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಈಗ ಸಚಿವ ಕೋಟ ಶ್ರೀನಿವಾಸ ಅವರು ದೆಹಲಿಗೆ ತೆರಳಿರುವುದು ಸಚಿವ ಸ್ಥಾನ ಉಳಿಸುವ […]

ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಬುದ್ದಿಮಾತು ಹೇಳಿದ ಕಾರು ಚಾಲಕನ ಕೊಲೆ

Tuesday, July 14th, 2020
Raghuveer Circle

ನವದೆಹಲಿ: ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಹಾಗೆ ಮಾಡಬೇಡಿ ಎಂದಿದ್ದಕ್ಕೆ ಮೂವರು ಹುಡುಗರು ಸೇರಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಬುದ್ದಿಮಾತು ಹೇಳಿದ 25 ವರ್ಷದ ಯುವಕನ ಮೇಲೆ ಮೂವರು ಹುಡುಗರು ಹಲ್ಲೆ ಮಾಡಿ ಸಾಯಿಸಿರುವ ಘಟನೆ ಪಶ್ಚಿಮ ದೆಹಲಿಯ ರಘುಬಿರ್ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮನೀಶ್ ಎಂದು ಗುರುತಿಸಲಾಗಿದ್ದು ಈತ ಖಾಸಗಿ ಕಾರು ಚಾಲಕನಾಗಿದ್ದ. ಈತನನ್ನು ಕೊಂದ ಮೂವರು ಹುಡುಗರು 16-17 ವರ್ಷದವರಾಗಿದ್ದು ಅವರನ್ನು ಬಂಧಿಸಲಾಗಿದೆ. ಘಟನೆ ನಡೆದಿದ್ದು ಜುಲೈ 8ರಂದು. ಮೂವರೂ ಮನೀಶ್ […]

ದೆಹಲಿಗೆ ತೆರಳಿದ್ದ ಉಪ್ಪಿನಂಗಡಿಯ ವ್ಯಕ್ತಿಗೆ ಕೋವಿಡ್-19 ಸೋಂಕು

Friday, April 17th, 2020
covid19

ಮಂಗಳೂರು: ದೆಹಲಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ನಿವಾಸಿ ಯೋರ್ವರಿಗೆ ಕೋವಿಡ್-19 ಸೋಂಕು ಇರುವುದು ಶುಕ್ರವಾರ ದೃಢಪಟ್ಟಿದೆ. ವೈಯಕ್ತಿಕ ಕೆಲಸದ ಹಿನ್ನೆಲೆ ಇತ್ತೀಚೆಗೆ ಈ ಯುವಕ ದೆಹಲಿಗೆ ತೆರಳಿದ್ದ ಎನ್ನಲಾಗಿದೆ. ಕಳೆದ ಮಾ.21ರಂದು ನಿಜಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ವಾಪಾಸ್ ಬಂದಿದ್ದ. ಫೋನ್ ಟವರ್ ಲೊಕೇಶನ್ ಆಧಾರದಲ್ಲಿ ಜಿಲ್ಲಾಡಳಿತ ವ್ಯಕ್ತಿಯನ್ನು ಪತ್ತೆ ಮಾಡಿ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ವ್ಯಕ್ತಿಯನ್ನ ಕ್ವಾರಂಟೈನ್ ಮಾಡಿ ಗಂಟಲ ದ್ರಾವಣ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಬಂದ ವರದಿಯಲ್ಲಿ ಯುವಕನಿಗೆ ಕೋವಿಡ್-19 ಪಾಸಿಟಿವ್ […]

ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪ

Saturday, March 7th, 2020
rajnath-singh

ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಗನ ಮದುವೆಗಾಗಿ ದೆಹಲಿಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು. ರಾಜನಾಥ್ ಸಿಂಗ್ ಅವರ ನಿವಾಸಕ್ಕೆ ತೆರಳಿದ ಸಿಎಂ ಬಿಎಸ್ವೈ, 2021ರ ಏರೋ‌ ಇಂಡಿಯಾ ಶೋಅನ್ನು ಬೆಂಗಳೂರಿನಲ್ಲೇ ನಡೆಸುವಂತೆ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು. ಹಾಗೆಯೇ, ವೆಲ್ಲಾರ ಜಂಕ್ಷನ್ನಲ್ಲಿ ಅವಶ್ಯಕತೆ ಇರುವ ರಕ್ಷಣಾ ಇಲಾಖೆಯ ಭೂಮಿಯನ್ನು ನಮ್ಮ ಮೆಟ್ರೋಗೆ ಹಸ್ತಾಂತರ ಮಾಡಬೇಕು ಅಂತ‌ ಮನವಿ ಮಾಡಿದರು. ಸಿಎಂ ಮನವಿಗೆ […]

ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದಾರೆ ಡೊನಾಲ್ಡ್​ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್

Thursday, February 20th, 2020
melaniya-tramp

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮೆಲಾನಿಯಾ ಟ್ರಂಪ್ ಫೆ.24-25ರಂದು ಭಾರತಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ಸಮಯದಲ್ಲಿ ಮೆಲಾನಿಯಾ ಟ್ರಂಪ್ ದೆಹಲಿಯ ಸರ್ಕಾರಿ ಶಾಲೆಗೆ ಭೇಟಿ ನೀಡಲಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರಂಭಿಸಿರುವ ಹ್ಯಾಪಿನೆಸ್ ಕ್ಲಾಸ್ನಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ. ಫೆ.24ರಂದು ಟ್ರಂಪ್ ಮತ್ತು ಮೆಲಾನಿಯಾ ಟ್ರಂಪ್ ಭಾರತಕ್ಕೆ ಬಂದಿಳಿಯಲಿದ್ದಾರೆ. ಅಂದು ಅಹಮದಾಬಾದ್ನ ಮೊಟೆರಾದಲ್ಲಿರುವ ನೂತನ ಕ್ರಿಕೆಟ್ ಕ್ರೀಡಾಂಗಣವನ್ನು ಉದ್ಘಾಟಿಸಲಿದ್ದು ಅಲ್ಲಿಂದ ಆಗ್ರಾಕ್ಕೆ ತೆರಳಲಿದ್ದಾರೆ. ಆಗ್ರಾದಿಂದ ದೆಹಲಿಗೆ ಬರುವ ಟ್ರಂಪ್ ದಂಪತಿ ರಾಷ್ಟ್ರಪತಿ ಭವನದ […]

ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಎನ್ ಕೌಂಟರ್ : ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ ಪೊಲೀಸರು

Monday, February 17th, 2020
dehali

ಹೊಸದಿಲ್ಲಿ : ಇಂದು ಬೆಳ್ಳಂಬೆಳಗ್ಗೆ ನಡೆದ ಎನ್ ಕೌಂಟರ್ ನಲ್ಲಿ ದೆಹಲಿ ಪೊಲೀಸರು ಇಬ್ಬರು ಕ್ರಿಮಿನಲ್ ಗಳನ್ನು ಹೊಡೆದುರುಳಿಸಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5 ಗಂಟೆ ಸಮಯಕ್ಕೆ ದಿಲ್ಲಿಯ ಪ್ರಹ್ಲಾದ್ ಪುರ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದ್ದು, ರಾಜಾ ಖುರೇಷಿ ಮತ್ತು ರಮೇಶ್ ಬಹದ್ದೂರ್ ಹತ್ಯೆಯಾದವರು. ಈ ಇಬ್ಬರು ಆರೋಪಿಗಳು ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವರು ಎನ್ನಲಾಗಿದೆ. ಇತ್ತೀಚೆಗೆ ದಿಲ್ಲಿಯ ಕರವಾಲ್ ನಗರದಲ್ಲಿ ನಡೆದ ಕೊಲೆ ಪ್ರಕರಣದಲ್ಲೂ ಈ ಆರೋಪಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ವರದಿಯ ಪ್ರಕಾರ, ಪೊಲೀಸರು […]

ದೆಹಲಿಯಲ್ಲಿ ಮತ್ತೊಂದು ಅಗ್ನಿ ಅನಾಹುತ : ಓರ್ವ ವ್ಯಕ್ತಿ ಸಾವು, ಹಲವರು ಗಂಭೀರ

Thursday, January 9th, 2020
dehali

ನವದೆಹಲಿ : ಪೂರ್ವ ದೆಹಲಿಯ ಪತ್ ಪರ್ ಗಂಜ್ ಕೈಗಾರಿಕ ಪ್ರದೇಶದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ. ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು , ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಾರದ ಹಿಂದೆ ದೆಹಲಿಯ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ […]

ದೆಹಲಿ : ಸಮ-ಬೆಸ ಸಂಚಾರ ಪದ್ದತಿ ಮತ್ತೆ ಜಾರಿ : ಅರವಿಂದ್‌ ಕೇಜ್ರಿವಾಲ್‌

Friday, September 13th, 2019
dehali

ಹೊಸದಿಲ್ಲಿ : ವಾಯುಮಾಲಿನ್ಯ ನಿಯಂತ್ರಣಕ್ಕಾಗಿ ದೆಹಲಿಯಲ್ಲಿ ಈ ಹಿಂದೆ ಜಾರಿಗೆ ತರಲಾಗಿದ್ದ ಸಮ-ಬೆಸ ಸಂಚಾರ ಪದ್ದತಿಯನ್ನು ಮತ್ತೆ ಜಾರಿಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಚಳಿಗಾಲದಲ್ಲಿ ವಾಯು ಮಾಲಿನ್ಯ ಪ್ರಮಾಣ ಏರಿಕೆಯಾಗುವ ಹಿನ್ನಲೆಯಲ್ಲಿ ನವೆಂಬರ್‌ 4ರಿಂದ 15ರವರೆಗೆ ಅಂದರೆ ಒಟ್ಟು 12 ದಿನಗಳ ಕಾಲ ಸಮ-ಬೆಸ ಸಂಚಾರ ವ್ಯವಸ್ಥೆ ಮಾಡಲಾಗುವುದು ಎಂದು ಕೇಜ್ರಿವಾಲ್‌ ಹೇಳಿದ್ದಾರೆ. ಇದರ ಪ್ರಕಾರ ನವೆಂಬರ್‌ 4, 6, 8, 10, 12, 14ರಂದು ಸಮ ಸಂಖ್ಯೆ ನೋಂದಣಿಯ ವಾಹನಗಳು ರಸ್ತೆಗಿಳಿಯಬಹುದು. ಪರ್ಯಾಯ […]

ಹೊಸ ವರ್ಷದಿಂದ ಪ್ರೀಪೇಯ್ಡ್​ ವಿದ್ಯುತ್​​… ಪ್ರತಿ ತಿಂಗಳು ಮಾಡಿಸ್ಬೇಕು ರೀಚಾರ್ಜ್

Tuesday, December 25th, 2018
meter

ದೆಹಲಿ: ದೇಶದಲ್ಲಿ ವಿದ್ಯುತ್ ಕಳ್ಳತನದಿಂದ ಸಾವಿರಾರು ಕೋಟಿಯಷ್ಟು ನಷ್ಟ ಉಂಟಾಗುತ್ತಿದೆ. ಇದನ್ನು ತಡೆಗಟ್ಟಲು ವಿದ್ಯುತ್ ಶುಲ್ಕ ಪಾವತಿಯನ್ನು ಇನ್ನಷ್ಟು ಸರಳೀಕರಗೊಳಿಸಲು ಕೇಂದ್ರ ವಿದ್ಯುತ್ ಇಲಾಖೆ ಮುಂದಾಗಿದೆ. ಪ್ರತಿ ತಿಂಗಳು ವಿದ್ಯುತ್ ಶುಲ್ಕವನ್ನು ನಿಗದಿತ ದಿನಾಂಕದೊಳಗೆ ಪಾವತಿಸುವಂತಹ ಸ್ಮಾರ್ಟ್ ಪ್ರೀಪೇಯ್ಡ್ ಮೀಟರ್ಗಳು ಶೀಘ್ರದಲ್ಲೇ ಬರಲಿವೆ. 2019ರ ಏಪ್ರಿಲ್ 1 ರಿಂದ ದೇಶಾದ್ಯಂತ ಈ ಮೀಟರ್ಗಳು ಅಧಿಕೃತವಾಗಿ ಲಭ್ಯವಾಗಲಿದ್ದು, ಮೊಬೈಲ್ ಪ್ರೀಪೇಯ್ಡ್ ಸಿಮ್ಗೆ ರೀಚಾರ್ಜ್ ಮಾಡಿದಂತೆ ವಿದ್ಯುತ್ ಬಳಕೆಗೂ ಮುನ್ನ ಹಣ ಪಾವತಿಸಬಹುದಾಗಿದೆ. ಸ್ಮಾರ್ಟ್ ಮೀಟರ್ಗಳು ಆ ದಿನದ ನಿಗದಿತ […]

ದೇಶದ ನವೋದಯ ಶಾಲೆಗಳಲ್ಲಿ 5 ವರ್ಷಕ್ಕೆ 49 ವಿದ್ಯಾರ್ಥಿಗಳ ಆತ್ಮಹತ್ಯೆ… ದಲಿತ, ಬುಡಕಟ್ಟು ಮಕ್ಕಳೇ ಹೆಚ್ಚು

Monday, December 24th, 2018
navodaya

ದೆಹಲಿ: ಗ್ರಾಮಿಣ ಭಾಗದ ಪ್ರತಿಭಾನ್ವಿತ ಮಕ್ಕಳಿಗೆಂದು ಕೇಂದ್ರ ಸರ್ಕಾರದಿಂದ ನಿರ್ಮಿಸಲಾದ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (ಜೆಎನ್ವಿ) ಕೇವಲ ಐದು ವರ್ಷಗಳಲ್ಲಿ ಕಾಲೇಜು ಕ್ಯಾಂಪಸ್ನಲ್ಲಿ ಸುಮಾರು 49 ಆತ್ಮಹತ್ಯೆ ಪ್ರಕರಣಗಳು ನಡೆದಿದೆ ಎಂದು ಆರ್ಟಿಐ ಮಾಹಿತಿಯೊಂದು ಹೇಳಿದೆ. 2013 ರಿಂದ 2017 ರವರೆಗೆ ನಡೆದ 49 ಆತ್ಮಹತ್ಯೆ ಪ್ರಕರಣಗಳಲ್ಲಿ ಅರ್ಧದಷ್ಟು ದಲಿತ ಮತ್ತು ಬುಡಕಟ್ಟು ಜನಾಂಗಕ್ಕೆ ಸೇರಿರುವ ವಿದ್ಯಾರ್ಥಿಗಳೇ ಇದ್ದಾರೆ. ಇದರಲ್ಲಿ ಹೆಚ್ಚಿನವರು ಹುಡುಗರು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಇಂಗ್ಲಿಷ್ ದೈನಿಕವೊಂದು ಪಡೆದ ದಾಖಲೆಗಳಿಂದ ತಿಳಿದುಬಂದಿದೆ. ಸರ್ಕಾರದ […]