ಇಲಿಪಾಷಾಣ ಸೇವಿಸಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೃತ್ಯು
Friday, March 12th, 2021ಮಂಗಳೂರು : ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಇಲಿಪಾಷಾಣ ಸೇವಿಸಿ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆಯಿಂದ ವರದಿಯಾಗಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆ ಗೆ ಕರೆತರಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಳೆನ್ನಲಾಗಿದೆ. ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿನಿ (13 ) ಎಂಬಾಕೆ ಮೃತ ವಿದ್ಯಾರ್ಥಿನಿ. ಈಕೆ ವಾರದ ಹಿಂದೆ ಅಂಗಡಿಯೊಂದರಿಂದ ಇಲಿಪಾಷಾಣ ಖರೀದಿಸಿ, ಸೇವಿಸಿ ಶಾಲೆಗೆ ತೆರಳಿದ್ದಳೆನ್ನಲಾಗಿದೆ. ಶಾಲೆಯಲ್ಲಿ ಈಕೆ ಅಸ್ವಸ್ಥಗೊಂಡಾಗ […]