ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡಲು ಜಿಲ್ಲಾಧಿಕಾರಿ ಶಿಫಾರಸ್ಸು
Saturday, November 17th, 2018ಮೈಸೂರು: ದೇವರಾಜ ಮಾರುಕಟ್ಟೆ ಮತ್ತು ಲ್ಯಾನ್ಸ್ಡೌನ್ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೈಸೂರು ಪಾರಂಪರಿಕ ಪ್ರದೇಶ ಅಭಿವೃದ್ಧಿ ಮತ್ತು ಸಂರಕ್ಷಣಾ ತಜ್ಞರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಮೈಸೂರು ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಜನದಟ್ಟಣೆಯನ್ನು ನಿವಾರಿಸಲು ರಸ್ತೆಗಳನ್ನು ಅಗಲೀಕರಿಸುವ ಸಂಬಂಧ ಅಲ್ಲಿರುವ ಪಾರಂಪರಿಕ ಕಂಬಗಳನ್ನು ಸ್ಥಳಾಂತರಿಸುವ ಬಗ್ಗೆ ಚರ್ಚಿಸಲಾಯಿತು. ಸಮಿತಿ ಸದಸ್ಯರು ತುರ್ತಾಗಿ ಸ್ಥಳ ಪರಿಶೀಲನೆ ಮಾಡಿ ವರದಿ ನೀಡುವಂತೆ […]