ದಸರಾ ಸ್ವಾಗತಿಸಲು ಮೈಸೂರು ನಗರಕ್ಕೆ ದೀಪಾಲಂಕಾರ!

Sunday, October 18th, 2020
Mysuru Dasara

ಮೈಸೂರು: ಮೈಸೂರು ಅರಮನೆಯಲ್ಲಿ ಈ ಬಾರಿ ದಸರಾ ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಇದುವರೆಗೆ ಕಾಣುತ್ತಿದ್ದ ಸಂಭ್ರಮವೂ ಇಲ್ಲದಾಗಿದೆ. ಆದರೆ ದಸರಾ ನಡೆಯುತ್ತಿದೆ ಎಂಬುದನ್ನು ನಗರಕ್ಕೆ ಮಾಡಿರುವ ದೀಪಾಲಂಕಾರಗಳು ಮಾತ್ರ ಹೇಳುತ್ತಿವೆ. ಮೈಸೂರಿಗೂ ದೀಪಾಲಂಕಾರಕ್ಕೂ ಬಿಡಿಸಲಾರದ ನಂಟಿದೆ. ಮೈಸೂರಿಗೆ ವಿದ್ಯುದ್ದೀಪಗಳು ಬರುವ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಸ್ಥಳಗಳಲ್ಲಿ ಹರಳೆಣ್ಣೆ ಮತ್ತು ಸೀಮೆ ಎಣ್ಣೆಯ ಬುಡ್ಡಿದೀಪಗಳನ್ನು ಹಚ್ಚಲಾಗುತ್ತಿತ್ತು. ಬೀದಿಯಲ್ಲಿರುವ ಮರ ಅಥವಾ ಕಲ್ಲಿನ ಕಂಬಗಳಲ್ಲಿ ಇಡಲಾಗುತಿದ್ದ ದೀಪಕ್ಕೆ ಅದರ ಉಸ್ತುವಾರಿಗೆ ನೇಮಿಸಿದ್ದ ನೌಕರ […]

ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ : ಶಪಥ ಮಾಡಿದ ಹೆಚ್.ವಿಶ್ವನಾಥ್

Saturday, November 16th, 2019
H.Vishwanath

ಮೈಸೂರು : ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮತ್ತೆ ಮೈಸೂರು ವಿಭಜನೆಯ ಕೂಗು ಎತ್ತಿದ್ದು, ಹುಣಸೂರನ್ನು ಪ್ರತ್ಯೇಕ ಜಿಲ್ಲೆ ಮಾಡುವ ಕುರಿತು ಶಪಥ ಮಾಡಿದ್ದಾರೆ. ಹುಣಸೂರಿನಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಅಖಾಡಕ್ಕಿಳಿದ ಮೊದಲ ದಿನವೇ ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರ ಪ್ರಸ್ತಾಪ ಮಾಡಿದ್ದಾರೆ. ನಾನು ಹುಣಸೂರಿನಿಂದ ಗೆದ್ದು ಮಂತ್ರಿಯಾಗುತ್ತೇನೆ. ಹುಣಸೂರು ತಾಲೂಕನ್ನು ಹೊಸ ಜಿಲ್ಲೆಯಾಗಿ ಮಾಡುತ್ತೇನೆ. ಇದು ನನ್ನ ಶಪಥ ಎಂದು ಭರವಸೆ ನೀಡಿದ್ದಾರೆ. ನನ್ನದು ಬರೀ ಮಾತು, ಟೀಕೆಯಲ್ಲ. ನಾನು ಕನಸುಗಾರ ಪ್ರತ್ಯೇಕ ಜಿಲ್ಲೆಯ […]

ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

Saturday, August 21st, 2010
ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ:

ಮಂಗಳೂರು : ದಿವಂಗತ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಹುಟ್ಟು ಹಬ್ಬ ಆಚರಣೆ ಶುಕ್ರವಾರ ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ರಮಾನಾಥ ರೈ 21ನೇ ಶತಮಾನದಲ್ಲಿ ಭಾರತವನ್ನು ಅಭಿವೃದ್ದಿಯ ಪಥಕ್ಕೆ ಕೊಂಡುಹೋಗಬೇಕೆಂದು ಕನಸು ಕಂಡವರು ರಾಜಿವ್ ಗಾಂಧಿ , ಇವರು ಆಕಸ್ಮಿಕ ಸನ್ನಿವೇಷದಿಂದ ರಾಜಕೀಯಕ್ಕೆ ಪ್ರವೇಶ ಮಾಡಿದರು, ಸಾಕ್ಷಾರತಾ ಆಂದೋಲನಕ್ಕೆ ಕಾರಣ ರಾಜೀವ್ ಗಾಂಧಿಯವರಾಗಿದ್ದಾರೆ. ಮೀಸಲಾತಿಯ ಮೂಲಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ತಂದವರು ರಾಜೀವ್ ಗಾಂಧಿಯವರಾಗಿದ್ದು […]