ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ 2 ಕೋಟಿ ದಂಡ ವಿಧಿಸಿದ ನ್ಯಾಯಾಲಯ

Tuesday, June 22nd, 2021
Devegowda

ಬೆಂಗಳೂರು  : ನಂದಿ ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಎಂಟರ್‌ ಪ್ರೈಸಸ್‌ (ನೈಸ್‌) ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಆಧಾರ ರಹಿತ ಆರೋಪ ಮಾಡಿದ್ದಾರೆ ಎಂದು ಸಂಸ್ಥೆ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ ದೇವೇಗೌಡರಿಗೆ ಹಿನ್ನಡೆಯಾಗಿದೆ. ದೇವೇಗೌಡರು ತಾವು ಮಾಡಿದ್ದ ಆರೋಪವನ್ನು ಸಮರ್ಥಿಸಿಕೊಳ್ಳುವಲ್ಲಿ ವಿಫಲರಾಗಿದ್ದು, ಮಾಜಿ ಪ್ರಧಾನಿಗೆ ಬೆಂಗಳೂರು ಸಿಟಿ ಸಿವಿಲ್‌ ನ್ಯಾಯಾಲಯವು 2 ಕೋಟಿ ರೂಪಾಯಿ ದಂಡ ವಿಧಿಸಿದೆ. ದೇವೇಗೌಡರು 2011ರಲ್ಲಿ ಖಾಸಗಿ ಸುದ್ದಿ ಮಾಧ್ಯಮಕ್ಕೆ ನೀಡಿದ್ದ ಸಂದರ್ಶನದಲ್ಲಿ ನೈಸ್‌ ಸಂಸ್ಥೆಯ ವಿರುದ್ದ ಆರೋಪ ಮಾಡಿದ್ದರು. ನೈಸ್‌ ಸಂಸ್ಥೆಯು […]

ದ.ಕ ಜೆಡಿಎಸ್​​​ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೊಹಮ್ಮದ್ ಕುಂಞಿ ರಾಜೀನಾಮೆ

Tuesday, October 8th, 2019
mohhamad

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುಹಮ್ಮದ್ ಕುಂಞಿ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದರು. ಕಳೆದ ನಾಲ್ಕು ವರ್ಷದಿಂದ ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಕಾರ್ಯ ನಿರ್ವಹಿಸಿದ್ದೇನೆ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಲಾಗಿದೆ. ಅನಾರೋಗ್ಯದ ಕಾರಣ ಮತ್ತು ವೈಯಕ್ತಿಕ ಕಾರಣಗಳಿಂದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಇನ್ನು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ […]

ಪ್ರಧಾನಿ ನರೇಂದ್ರ ಮೋದಿ ಭೇಟಿ ಸಾಧ್ಯವಾಗಿಲ್ಲ: ದೇವೇಗೌಡ

Friday, October 5th, 2018
narendra-modi

ಬೆಂಗಳೂರು: ಕೊಡಗು ಪ್ರವಾಹ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಅವಕಾಶ ಕೇಳಿದ್ದೆ. ರಷ್ಯಾ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿ ಸಾಧ್ಯವಾಗಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದರು. ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಭೇಟಿಗೆ ಪ್ರಧಾನಿ ಸೂಚಿಸಿದರು. ಹೀಗಾಗಿ, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದೇವೆ. ಸಾಕಷ್ಟು ಪ್ರಮಾಣದಲ್ಲಿ ಪ್ರವಾಹದಿಂದ ಹಾನಿಯಾಗಿದೆ. ಕೇಂದ್ರ ಸರ್ಕಾರದ ತಂಡ […]

ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಭೂಕುಸಿತ, ಪ್ರಾಕೃತಿಕ ತೊಂದರೆಗಳಿಗೆ ಶಾಶ್ವತ ಪರಿಹಾರ: ಎಚ್‌ ಡಿ ಕುಮಾರಸ್ವಾಮಿ

Tuesday, August 14th, 2018
h-d-revanna

ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಭೂಕುಸಿತ, ಪ್ರಾಕೃತಿಕ ತೊಂದರೆಗಳು ಗಮನಕ್ಕೆ ಬಂದಿದ್ದು, ಇದಕ್ಕೆ ಶಾಶ್ವತ ಪರಿಹಾರ ನೀಡುವ ಕುರಿತು ಗಮನಹರಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಕುಕ್ಕೆ ಸುಬ್ರಮಣ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಟುಂಬಸ್ಥರು ಮಂಗಳವಾರ ಸುಬ್ರಮಣ್ಯ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ, ಅಭಿಷೇಕ, ತುಲಾಭಾರ ಸೇವೆ ನೆರವೇರಿಸಿದರು. ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರಿಂದ ಆಶ್ಲೇಷ ಬಲಿ ಸೇವೆ ನೆರವೇರಿಸಿದರು. ಬಳಿಕ ಮಾತನಾಡಿದ ಕುಮಾರಸ್ವಾಮಿ ರಾಜ್ಯದಲ್ಲಿ ಮಳೆಯ ಕೊರತೆ ಇಲ್ಲ, […]

ತಿರುಪತಿಯಲ್ಲಿ ಗೌಡರ ಕುಟುಂಬ..ತಿಮ್ಮಪ್ಪನ ದರ್ಶನ ಪಡೆದ ಸಿಎಂ!

Friday, July 27th, 2018
kumarswamy

ವಿಜಯವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸಮೇತರಾಗಿ ದೇವೇಗೌಡರು ತಮ್ಮ ಕುಟುಂಬಸ್ಥರೊಂದಿಗೆ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ದೇವರ ಸನ್ನಿಧಿಗೆ ಬಂದು, ವೆಂಕಟೇಶ್ವರನ ದರ್ಶನ ಪಡೆದರು. ದೇವೇಗೌಡರ ಪತ್ನಿ ಚೆನ್ನಮ್ಮ, ಹಾಗೂ ರೇವಣ್ಣ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ಗೌಡರ ಇತರ ಕುಟುಂಬ ಸದಸ್ಯರು ದೇವರ ಕೃಪೆಗೆ ಪಾತ್ರರಾದರು. ತಿಮ್ಮಪ್ಪನ ದರ್ಶನದ ಬಳಿಕ ಗೌಡರ ಕುಟುಂಬಸ್ಥರಿಗೆ ಅರ್ಚರು ಪ್ರಸಾದ, ತೀರ್ಥ ವಿತರಿಸಿದರು. ಇದಕ್ಕೂ ಮುನ್ನ […]

ಗ್ರಹಣದ ಮುನ್ನಾದಿನ ತಿರುಪತಿಗೆ ತೆರಳಲಿದೆ ದೇವೇಗೌಡರ ಕುಟುಂಬ..!

Tuesday, July 24th, 2018
revanna

ಬೆಂಗಳೂರು: ಜುಲೈ 27 ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ, ಗ್ರಹಣದ ಮುನ್ನಾದಿನ (ಜುಲೈ 26) ರಂದು ಗುರುವಾರ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಎನ್ನಲಾಗ್ತಿದೆ. ಈಗಾಗಲೇ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಹೆಚ್. ಡಿ. ಕುಮಾರಸ್ವಾಮಿ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದರು. ಅದೇ ರೀತಿ ಸಿಎಂ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರೊಂದಿಗೆ ತಿರುಪತಿ ತೆರಳಿ, ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ […]

ಎ. ಕೃಷ್ಣಪ್ಪ ಸಾವಿಗೆ ದೇವೇಗೌಡರೇ ಕಾರಣ… ಕಿಡಿ ಹೊತ್ತಿಸಿದ ಮಾಜಿ ಸಂಸದರ ಆರೋಪ

Tuesday, July 17th, 2018
krishnappa

ತುಮಕೂರು: ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಜೆಡಿಎಸ್ ಅಭ್ಯರ್ಥಿ ಎ.ಕೃಷ್ಣಪ್ಪ ಮೃತಪಟ್ಟಿದ್ದರು. ಅವರ ಸಾವಿನ ಏನ್ ಕಾರಣ ಅನ್ನೋದರ ಕುರಿತು ಮಾಜಿ ಸಂಸದ ಜಿ.ಎಸ್ ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ. ಹೌದು.., ಇಂದು ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರೇ ಎ ಕೃಷ್ಣಪ್ಪ ಸಾವಿಗೆ ಕಾರಣವೆಂದು ದೂರಿದ್ದಾರೆ. “ನನ್ನ ಮನೆ ಹಾಳಾಗೋಯ್ತು, ದೇವೇಗೌಡರು ನನ್ನ ಮನೆ ಹಾಳು ಮಾಡಿದರು ಎಂದು ಎ.ಕೃಷ್ಣಪ್ಪ ನನ್ನಲ್ಲಿ ಅಳಲು ತೋಡಿಕೊಂಡಿದ್ದರು. ಹೀಗಾಗಿ ಅವರ […]

ಯಾವುದೇ ನಾಯಕರ ಮನೆ ಬಾಗಿಲಿಗೆ ಹೋಗಿ ಸಚಿವ ಮಾಡಿ ಅಂತ ಕೇಳಿಲ್ಲ: ರಾಮಲಿಂಗಾರೆಡ್ಡಿ

Wednesday, June 13th, 2018
ramlinga-reddy

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಹಿನ್ನೆಲೆ ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಮೊದಲಿಗೆ ಎಲ್ಲ ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸಿದರು. ಈ ವೇಳೆ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲ ಪಕ್ಷಗಳು ಗೆಲ್ಲುವ ದೃಷ್ಟಿಯಿಂದ ಅಭ್ಯರ್ಥಿ ಹಾಕ್ತಾರೆ. ನಾವು ಗೆಲ್ಲುವ ಉದ್ದೇಶದಿಂದ ಸ್ಪರ್ಧೆ ಮಾಡಿದ್ವಿ ಅಂತ ಹೇಳಿದರು. ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಹಾಗೂ ಜಯನಗರ ಕ್ಷೇತ್ರದ ಪ್ರತಿ ಕಾಂಗ್ರೆಸ್ ನಾಯಕರಿಗೆ, ಸ್ಥಳೀಯ ಕಾರ್ಪೋರೇಟರ್‌ಗೆ ಧನ್ಯವಾದಗಳನ್ನ ತಿಳಿಸಿ, ಕೊಟ್ಟ ಆಶ್ವಾಸನೆ ಈಡೇರಿಸುತ್ತೇವೆ. ನಮ್ದೇ ಸಮೀಶ್ರ ಸರ್ಕಾರ […]

‘ರೈತರ ಬಗ್ಗೆ ಅಪ್ಪ-ಮಕ್ಕಳಿಗೆ ಕಾಳಜಿ ಇದ್ದರೆ ಕಾಂಗ್ರೆಸ್‌ಗೆ ಸಾಲಮನ್ನಾ ಷರತ್ತು ವಿಧಿಸಬೇಕಿತ್ತು’

Saturday, June 9th, 2018
yedyurappa

ಬೆಂಗಳೂರು: ರೈತರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಅಪ್ಪ-ಮಕ್ಕಳು ಸಾಲಮನ್ನಾ ಮಾಡುವ ಷರತ್ತನ್ನು ಕಾಂಗ್ರೆಸ್ ಮುಂದಿಡಬೇಕಿತ್ತು. ಅದರ ಬದಲು ಅಧಿಕಾರ ಉಳಿಸಿಕೊಳ್ಳಲು ಬೇಕಾದ ಷರತ್ತು ಹಾಕಿದ್ದಾರೆ ಎಂದು ದೇವೇಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು. ಅಪ್ಪ-ಮಕ್ಕಳಿಗೆ ನಿಜವಾಗಲೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ ರೈತರ ಸಾಲಮನ್ನಾ ಮಾಡಿದರೆ ಮಾತ್ರ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ಕಾಂಗ್ರೆಸ್‌ಗೆ […]

ಜಯನಗರ ಕ್ಷೇತ್ರದ ಚುನಾವಣೆ: ‘ಕೈ’ ಅಭ್ಯರ್ಥಿಯನ್ನ ಬೆಂಬಲಿಸಲು ದೇವೇಗೌಡರ ಸೂಚನೆ

Tuesday, June 5th, 2018
devegowda

ಬೆಂಗಳೂರು: ಬಿಜೆಪಿ ಶಾಸಕ ಬಿ.ಎನ್. ವಿಜಯಕುಮಾರ್ ಅವರ ನಿಧನ ಹಿನ್ನೆಲೆಯಲ್ಲಿ ಮುಂದೂಡಿದ್ದ ಜಯನಗರ ವಿಧಾನಸಭೆ ಚುನಾವಣೆ ಜೂನ್ 11 ರಂದು ನಡೆಯಲಿದ್ದು, ಮಹತ್ವದ ಬೆಳವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಕಣದಿಂದ ಹಿಂದೆ ಸರಿದಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಸೂಚನೆ ಮೇರೆಗೆ ಕಣದಿಂದ ಹಿಂದೆ ಸರಿದಿರುವ ಕಾಳೇಗೌಡರಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಗೌಡರು ಸೂಚನೆ ನೀಡಿದ್ದಾರೆ. ಅದೇ ರೀತಿ ಈ ಚುನಾವಣೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ದೇವೇಗೌಡ ಸೂಚನೆ ನೀಡಿದ್ದಾರೆ.