Blog Archive

ಬಿಜೆಪಿ ಜಯಭೇರಿ: ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯೆ

Monday, December 18th, 2017
devegouda

ಬೆಂಗಳೂರು: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಬಿಜೆಪಿಯನ್ನು ಅಭಿನಂದಿಸಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡುತ್ತಿದ್ದ ದೇವೇಗೌಡ್ರು, ನನ್ನ ರಾಜಕೀಯ ಜೀವನದಲ್ಲಿ ಇದುವರೆಗೆ ಹದಿನಾಲ್ಕು ಚುನಾವಣೆಯನ್ನು ನೋಡಿದ್ದೇನೆ. ಆದರೆ ಗುಜರಾತ್ ಚುನಾವಣೆಯಷ್ಟು ಕೀಳು ಮಟ್ಟದ ಪ್ರಚಾರವನ್ನು ಇದುವರೆಗೂ ನೋಡಿರಲಿಲ್ಲ ಎಂದು ಗೌಡ್ರು ವಿಷಾದ ವ್ಯಕ್ತ ಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೇ ಬೇರೆ, ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯೇ ಬೇರೆ, ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶ […]

ಡಿ.10ರಂದು ತುಮಕೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ

Thursday, December 7th, 2017
jds

ಮಂಗಳೂರು :  ತುಮಕೂರಿನ ಸರಕಾರಿ ಶಾಲಾ ಮೈದಾನದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಡಿ.10ರಂದು ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಎಂ.ಕೆ. ಅಬ್ದುಲ್ ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು. ಸಮಾವೇಶದಲ್ಲಿ ಸುಮಾರು ಮೂರು ಲಕ್ಷ ಜೆಡಿಎಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ದ.ಕ. ಮತ್ತು ಉಡುಪಿ […]

‘ಸುಪ್ರೀಂ ತೀರ್ಪಿನಿಂದ ರಾಜ್ಯಕ್ಕೆ ಮತ್ತಷ್ಟು ಶಿಕ್ಷೆ… ಪ್ರಧಾನಿ ಮಧ್ಯಪ್ರವೇಶ ಮಾಡಲೇಬೇಕು’

Monday, September 12th, 2016
devegoda

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಟೀಕಿಸಲ್ಲ. ಆದರೆ ಇಂದು ಸುಪ್ರೀಂ ಕರ್ನಾಟಕಕ್ಕೆ ಮತ್ತಷ್ಟು ಶಿಕ್ಷೆ ನೀಡಿದೆ. ರಾಜ್ಯ ಸರ್ಕಾರದ ಮೇಲ್ಮನವಿಗೆ ನ್ಯಾಯ ಸಿಗುವ ಬದಲು ಶಿಕ್ಷೆ ಸಿಕ್ಕಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾವೇರಿ ವಿವಾದ ಸಂಬಂಧ ಸುಪ್ರೀಂ ತೀರ್ಪಿನ ನಂತರ ನಗರದ ಖಾಸಗಿ ಹೋಟೆಲ್‌ನಲ್ಲಿ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಸುಪ್ರೀಂ ಆದೇಶ ಪಾಲಿಸಿ ಎಂದು ನಾನೇ ಹೇಳಿ ನಾರಿಮನ್, ಅನಿಲ್ ದಿವಾನ್ ಹಾಗೂ ಪ್ರಧಾನಿ ಬಳಿ ಹೋಗಿ ಚರ್ಚಿಸಿದ್ದೇನೆ. ಜನ […]

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಿ ಮಹಮ್ಮದ್ ಕುಂಞಿ ಆಯ್ಕೆ

Monday, June 23rd, 2014
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಿ ಮಹಮ್ಮದ್ ಕುಂಞಿ ಆಯ್ಕೆ

ಮಂಗಳೂರು: ಎಂ.ಬಿ ಸದಾಶಿವ ಅವರು ತಮ್ಮ ವೈಯಕ್ತಿಕ ಕಾರಣಗಳಿಂದ ಜೆಡಿಎಸ್ ನ ದ.ಕ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಜಿಲ್ಲಾ ಜೆಡಿಎಸ್ ನ ಕಾರ್ಯಾಧ್ಯಕ್ಷ ರಾಗಿದ್ದ ಬಿ. ಮಹಮ್ಮದ್ ಕುಂಞಿ ಇವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರ ಆದೇಶದ ಮೇರೆಗೆ ಉಸ್ತುವಾರಿ ಅಧ್ಯಕ್ಷ, ಮಾಜಿ ಶಾಸಕ ಎಂ.ಎಸ್. ನಾರಾಯಣ ರಾವ್ ಲಿಖಿತ ಆದೇಶ ನೀಡಿದ್ದಾರೆ. ಬಿ. ಮಹಮ್ಮದ್ ಕುಂಞಿ ಅವರು […]

ಸಿದ್ದರಾಮಯ್ಯ ಸಮಾಜವನ್ನು ಅಚ್ಚುಕಟ್ಟಾಗಿ ಒಡೆಯುತ್ತಿದ್ದಾರೆ

Tuesday, March 11th, 2014
HD-Deve-Gowda

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಜಾತಿ ಸಮಾವೇಶವನ್ನೂ ಬಾಕಿ ಉಳಿಸಿಲ್ಲ. ಸಮಾಜವನ್ನು ಒಡೆಯುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಹಿಂದುಳಿದ ವರ್ಗಗಳಲ್ಲಿನ ಸಣ್ಣ ಸಮಾಜಗಳನ್ನೂ ಭಾಗ ಮಾಡಿದ್ದಾರೆ. ಮಠಗಳಿಗೆ ಸಮಾಜದ ಹೆಸರಿನಲ್ಲಿ 50 ಲಕ್ಷ, ಒಂದು ಕೋಟಿ ಹಣ ನೀಡಿ ಅವರನ್ನೂ ವಿಭಜನೆ ಮಾಡಿದ್ದಾರೆ. ಇವರ ಉದ್ದೇಶ ಒಂದೇ- ಸಮಾಜ ಒಡೆಯುವುದು. ಹಿಂದುಳಿದವರನ್ನು ಬಾಳುವುದಕ್ಕೂ ಬಿಡುತ್ತಿಲ್ಲ. ಈ ಎಲ್ಲ ಸಮಾಜಗಳನ್ನು ಛಿದ್ರ ಛಿದ್ರ ಮಾಡಲು ಮುಂದಾಗಿದ್ದಾರೆ… ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಸರ್ವನಾಶ ಮಾಡುತ್ತೇನೆ ಎಂದಿದ್ದಾರೆ. ಅವರ ಬಳಿ ಅಧಿಕಾರ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]