ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು ಎಂದು ದೊಂದಿ ಹಿಡಿದು ಪ್ರತಿಭಟನೆ

Wednesday, June 23rd, 2021
Electric Bill

ಮಂಗಳೂರು : ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ ,ನೀರಿಗೂ ಕೂಡಾ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಈ ಲಾಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ […]

ರೈತ ವಿರೋಧಿ ಮಸೂದೆಯನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ದೊಂದಿ ಬೆಳಕಿನ ಪ್ರತಿಭಟನೆ

Friday, September 25th, 2020
YouthCongress

ಮಂಗಳೂರು : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆಯನ್ನು ಖಂಡಿಸಿ ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರಲ್ಲಿ ದೊಂದಿ ಬೆಳಕಿನ ಪ್ರತಿಭಟನೆ ಶುಕ್ರವಾರ ಸಂಜೆ  ನಡೆಯಿತು. ಪ್ರತಿಭಟನೆಗೆ ಅನುಮತಿವಿಲ್ಲದ ಕಾರಣ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಇದೇ ವೇಳೆ ಪೊಲೀಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಕಾರಣ ಕಾಂಗ್ರೆಸ್ ಮುಖಂಡರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ನಂತರ ಬಂಧಿತರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.