ಕೇರಳ ಪೊಲೀಸರು ಮತ್ತು ಜಿಲ್ಲಾಡಳಿತದ ದೌರ್ಜನ್ಯ ಖಂಡಿಸಿ ಬಿಜೆಪಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ

Tuesday, September 1st, 2020
Bjp protest

ಮಂಜೇಶ್ವರ : ಕೇರಳ ಮತ್ತು ಕರ್ನಾಟಕ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕೆಂದು ಆಗ್ರಹಿಸಿ ಮಂಜೇಶ್ವರ ಬಿಜೆಪಿ ಮಂಡಲ ಸಮಿತಿಯ ನೇತೃತ್ವದಲ್ಲಿ ತಲಪಾಡಿಯಲ್ಲಿ ಗಡಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿಗಳು ಆದ ಶ್ರೀಕಾಂತ್ ಚಾಲನೆ ನೀಡಿದರು. ಮಂಜೇಶ್ವರ ಮಂಡಲ ಸಮಿತಿಯ ಅಧ್ಯಕ್ಷರಾದ ಮಣಿಕಂಠ ರೈ ಅಧ್ಯಕ್ಷತೆ ವಹಿಸಿದ್ದರು. ಕೊರೊನಾ ಪಾಸಿಟಿವ್ ಹೆಚ್ಚಿರುವ ಮಲಪ್ಪುರಂ, ಕಣ್ಣೂರು ಮತ್ತು ಅನ್ಯರಾಜ್ಯಗಳಿಂದ ವ್ಯಾಪಾರ ಸಂಭಂದಿತ ಸರಕು ವಾಹನಗಳಿಗೆ ಯಾವುದೇ ನಿರ್ಬಂಧ ಮಾಡದೆ ಕೇವಲ ದಕ್ಷಿಣಕನ್ನಡ ಜಿಲ್ಲೆಗೆ […]

ಕಾಶ್ಮೀರದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಲು, ಹಿಂದೂಗಳು ಸಂಘಟಿತರಾಗಬೇಕು ! – ರಾಹುಲ ಕೌಲ್

Saturday, August 8th, 2020
Rahul_Kaul

ಮಂಗಳೂರು : ಕಲಂ 370 ರದ್ದು ಪಡಿಸಿದ ನಂತರ ದೇಶದಾದ್ಯಂತ ಹಿಂದೂಗಳಿಗೆ ನೆಮ್ಮದಿ ಸಿಕ್ಕಿದರೂ, ಜಿಹಾದಿ ಭಯೋತ್ಪಾದಕರು ತದನಂತರ 22 ಭಯೋತ್ಪಾದಕ ಚಟುವಟಿಕೆಗಳಲ್ಲಿ ಹಿಂದೂಗಳ ಹತ್ಯೆ ಮಾಡಿದ್ದಾರೆ. 1990 ರಲ್ಲಿ ಕಾಶ್ಮೀರಿ ಹಿಂದೂಗಳ ವಂಶನಾಶದಂತೆ ಇಂದಿಗೂ ನಡೆಯುತ್ತಿದೆ. ಹೀಗಾದರೆ ಹಿಂದೂಗಳ ಪುನರ್ವಸತಿ ಹೇಗಾಗಬಹುದು ? ಇದನ್ನು ತಡೆಗಟ್ಟಲು ಕೇಂದ್ರ ಸರಕಾರವು ‘ಕಾಶ್ಮೀರಿ ಹಿಂದೂಗಳ ವಂಶನಾಶವಾಗಿದೆ’, ಎಂಬುದನ್ನು ಕಾನೂನು ಮಾಡಿ ಪ್ರಪ್ರಥಮವಾಗಿ ಒಪ್ಪಿಕೊಳ್ಳಬೇಕು. ನಾವು ಈ ಬಗ್ಗೆ ‘ಪನೂನ್ ಕಾಶ್ಮೀರ ದೌರ್ಜನ್ಯ ಹಾಗೂ ನರಸಂಹಾರ ನಿರ್ಮೂಲನೆ ವಿಧೇಯಕ 2020’ […]

ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಜೈಲ್ ಭರೋ ಚಳುವಳಿ

Friday, March 6th, 2020
mahila-dinacharane

ಮಂಗಳೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ದೇಶಾದ್ಯಂತ ನಡೆಯುತ್ತಿರುವ ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ, ಸಿಐಟಿಯು ಹಾಗೂ ಜನವಾದಿ ಮಹಿಳಾ ಸಂಘಟನೆಯ ಜಂಟಿ ನೇತ್ರತ್ವದಲ್ಲಿ ನಗರದಲ್ಲಿ 06.03.2020 ರಂದು ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯೆದುರು ಜೈಲ್ ಭರೋ ಚಳುವಳಿಯನ್ನು ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು, “ಮಹಿಳಾ ಮೀಸಲಾತಿ ಮಸೂದೆ ಜಾರಿಗೊಳ್ಳಲಿ,ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ನಿಲ್ಲಲಿ,ಮಹಿಳೆಯರಿಗೂ ಸಮಾನ ವೇತನ ಜಾರಿಯಾಗಲಿ” ಮುಂತಾದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾಧ್ಯಕ್ಷರಾದ […]

ಮಹಿಳಾ ಸಿಬ್ಬಂದಿ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರೋಧಿಸಿ ಮಂಗಳೂರು ಒನ್ ಕೇಂದ್ರದ ಎದುರು ಪ್ರತಿಭಟನೆ

Tuesday, August 30th, 2016
CMC-computers

ಮಂಗಳೂರು: ಸರ್ಕಾರದ ಇ ಆಡಳಿತ ವ್ಯಾಪ್ತಿಗೊಳಪಡುವ ಮಂಗಳೂರು-ಒನ್ ಗುತ್ತಿಗೆ ಪಡೆದಿರುವ ಸಿಎಂಎಸ್ ಕಂಪ್ಯೂಟರ್ಸ್ ಸಂಸ್ಥೆ ಅಧಿಕಾರಿಗಳು ಮಹಿಳಾ ಸಿಬ್ಬಂದಿ ಮೇಲೆ ನಡೆಸುತ್ತಿರುವ ದೌರ್ಜನ್ಯ ವಿರೋಧಿಸಿ ಮಂಗಳೂರು ಒನ್ ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ನೌಕರರ ಹಿತರಕ್ಷಣಾ ವೇದಿಕೆ ಸಲಹೆಗಾರ ಬಿ.ಎಸ್. ಚಂದ್ರು, ಮಂಗಳೂರು ಒನ್ ಮಹಿಳಾ ಸಿಬ್ಬಂದಿ ತಮಗೆ ಆಗುತ್ತಿರುವ ಕಿರುಕುಳದ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ನೀಡಿದ್ದರು. ಇದರಿಂದ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಸಂಸ್ಥೆಯ ಈ ಕ್ರಮವನ್ನು […]

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

Wednesday, August 10th, 2016
Motamma

ಮಂಗಳೂರು: ನರಭಕ್ಷಕರಾಗಿ, ಗೋಮುಖ ವ್ಯಾಘ್ರರಂತೆ ದಲಿತರ ಚರ್ಮ ಸುಲಿಯುತ್ತಿರುವ ಸಂಘ ಪರಿವಾರಕ್ಕೆ ದಲಿತರ ಮೇಲೆ ಹಲ್ಲೆ ಮಾಡಲು ಅಧಿಕಾರ ಕೊಟ್ಟವರು ಯಾರು ಎಂದು ಕಾಂಗ್ರೆಸ್ ಹಿರಿಯ ಮುಖಂಡೆ ಮೋಟಮ್ಮ ಪ್ರಶ್ನಿಸಿದ್ದಾರೆ. ದೇಶಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ನಗರದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರಶ್ನಿಸಿದ ಮೋಟಮ್ಮ, ಧರ್ಮ, ಜಾತಿ, ಭಾಷೆ ಎಲ್ಲವನ್ನೂ ಬದಿಗಿಟ್ಟು ಎಲ್ಲರನ್ನೂ ಸಮನಾಗಿ ರಕ್ಷಿಸುವ ಕಾರ್ಯವನ್ನು ಕೇಂದ್ರ ಸರ್ಕಾರ ಮರೆತಿದೆ. ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಹೆಚ್ಚಿದೆ. […]

ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಕೆ.ಜೆ.ಜಾರ್ಜ್

Sunday, June 23rd, 2013
Home Minister KJ George

ಉಡುಪಿ:  ಮಣಿಪಾಲದಲ್ಲಿ ಜೂನ್ 20 ರಂದು ನಡೆದ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಗೃಹ ಸಚಿವ ಕೆ.ಜೆ.ಜಾರ್ಜ್  ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ಭೇಟಿ ನೀಡಿ ದೌರ್ಜನ್ಯಕ್ಕೊಳಗಾಗಿರುವ ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದು, ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಹೇಳಿದರು. ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಿಲ್ಲ. ಎಂಟು […]