ಸಂತ ಫಿಲೋಮಿನ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Tuesday, October 10th, 2023
veekshith

ಮಂಗಳೂರು : ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಾಖಲಾಗಿದೆ. ಪುತ್ತೂರಿನ ಸಂತ ಫಿಲೋಮಿನಾಸ್ ಕಾಲೇಜಿನ ದ್ವಿತೀಯ ಪಿಯುಸಿ ಓದುತ್ತಿದ್ದ ವೀಕ್ಷಿತ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುತ್ತೂರಿನ ಕುರಿಯ ಎಂಬಲ್ಲಿನ ನಿವಾಸಿಯಾಗಿರುವ ವೀಕ್ಷಿತ್ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ ಜಿಲ್ಲೆ ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನ

Wednesday, July 21st, 2021
II Puc

ಮಂಗಳೂರು:  ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಪಪೂ ಶಿಕ್ಷಣ ಇಲಾಖೆ ಎಲ್ಲರನ್ನೂ ಉತ್ತೀರ್ಣ ಮಾಡಿದೆ. ದ.ಕ ಜಿಲ್ಲೆಯಲ್ಲಿ 600ರಲ್ಲಿ 600 ಅಂಕ ಪಡೆದ 445 ಮಂದಿ ವಿದ್ಯಾರ್ಥಿಗಳು ಇರುವ ಹಿನ್ನೆಲೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ ತನ್ನದಾಗಿಸಿಕೊಂಡಿದೆ. ಸತತ ಎರಡನೇ ಬಾರಿ ದ.ಕ ಜಿಲ್ಲೆ ಈ ಸಾಧನೆ ಮಾಡಿದಂತಾಗಿದೆ. ಕಳೆದ ವರ್ಷದ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲೂ ದ.ಕ ಜಿಲ್ಲೆಯ ಮೊದಲ ಸ್ಥಾನ ಪಡೆದಿತ್ತು,  ದ.ಕ ಜಿಲ್ಲೆಯಲ್ಲಿ ಖಾಸಗಿ ಹೊರತುಪಡಿಸಿ, […]

ಪಿಯುಸಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ : ಸುರೇಶ್ ಕುಮಾರ್

Tuesday, July 20th, 2021
Suresh Kumar

ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪ್ರಸರಣ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಮಂಗಳವಾರ ಪಿಯುಸಿ ಫಲಿತಾಂಶಗಳನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿ ಮಾತನಾಡಿದ ಅವರು, ಪದವಿ ಕಾಲೇಜುಗಳಿಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. […]

ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ, ಎಲ್ಲರೂ ಗ್ರೇಡಿಂಗ್ ಮೇಲೆ ಪಾಸ್

Friday, June 4th, 2021
Suresh Kumar

ಬೆಂಗಳೂರು: ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು  ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಮುಂಜಾಗ್ರತೆ ತೆಗೆದುಕೊಂಡು ಕಳೆದ ವರ್ಷ ಪರೀಕ್ಷೆ ನಡೆಸಿದ್ದೆವು. ಒಂದು ವರ್ಗ […]

ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Tuesday, July 14th, 2020
PU Karnataka

ಬೆಂಗಳೂರು: ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದರು ಈ ವರ್ಷ ಒಟ್ಟಾರೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಪ್ರಮಾಣ ಶೇಕಡಾ 61.80 ಆಗಿದೆ. ಕಳೆದ ವರ್ಷಕ್ಕಿಂತ ಶೇಕಡಾ 0.7ರಷ್ಟು ಫಲಿತಾಂಶ ಹೆಚ್ಚಾಗಿದ್ದು ಕಳೆದ ವರ್ಷ ಶೇಕಡಾ 61.73 ಫಲಿತಾಂಶ ಬಂದಿತ್ತು. ಶೇಕಡಾ 68.73ರಷ್ಟು ಫಲಿತಾಂಶ ಗಳಿಸಿ ಹುಡುಗಿಯರೇ ಮೇಲಗೈ ಸಾಧಿಸಿದ್ದಾರೆ. ರಾಜ್ಯದಲ್ಲಿ ತೇರ್ಗಡೆ ಹೊಂದಿದ ಒಟ್ಟಾರೆ ಹುಡುಗರ ಸಂಖ್ಯೆ […]

ಕೊರೋನಾ : ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಮುಂದಕ್ಕೆ

Sunday, March 22nd, 2020
suresh-kumar

ಬೆಂಗಳೂರು: ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಕೊನೇ ಪರೀಕ್ಷೆ (ಇಂಗ್ಲಿಷ್‌) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್‌ ಕುಮಾರ್ ತಿಳಿಸಿದ್ದಾರೆ. ಕೊರೋನಾ ಸೋಂಕಿನ ಪರಿಣಾಮ ದಿಗ್ಬಂಧನ ಹೇರಲಾಗಿರುವ ರಾಜ್ಯದ 9 ಜಿಲ್ಲೆಗಳಿ ಪೈಕಿಯಲ್ಲಿ ನಾಲ್ಕು ಜಿಲ್ಲೆಗಳು ಗಡಿ ಜಿಲ್ಲೆಗಳಾಗಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಒಬ್ಬ ವಿದ್ಯಾರ್ಥಿಯ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್‌ 1ರ ನಂತರ ಉಳಿದಿರುವ ಒಂದು ಪರೀಕ್ಷೆಯನ್ನು ಯಾವ ದಿನಾಂಕದಂದು ನಡೆಸಬೇಕು ಎಂಬುದನ್ನು […]

ಬಂಟ್ವಾಳ : ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ವವಿತ್ತು; ಪತ್ರ ಬರೆದಿಟ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

Saturday, March 7th, 2020
nandan

ಬಂಟ್ವಾಳ : ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ಶುಕ್ರವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ. ವಗ್ಗ ಕಾರಿಂಜಕೋಡಿ ನಿವಾಸಿ ಅರವಿಂದ ರಾವ್ ಅವರ ಪುತ್ರ ಬಂಟ್ವಾಳ ಖಾಸಗಿ ಕಾಲೇಜಿನ ವಿಜ್ಞಾನ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿ ನಂದನ್ (17) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಎಸೆಸ್ಸೆಲ್ಸಿಯಲ್ಲಿ ಶೇ. 94 ಅಂಕ ಪಡೆದಿದ್ದ. ಪಿಯುಸಿಯಲ್ಲೂ ಅಷ್ಟೇ ಪ್ರತಿಭಾವಂತನಾಗಿದ್ದ. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಭೌತಶಾಸ್ತ್ರ ಪರೀಕ್ಷೆ ಬರೆದಿದ್ದ. […]

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Wednesday, April 17th, 2019
pratiksha

ಮೂಡುಬಿದಿರೆ : ವಿದ್ಯಾರ್ಥಿನಿಯೋರ್ವಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಮೂಡುಬಿದಿರೆಯಲ್ಲಿ ನಡೆದಿದೆ. ಮಾಂಟ್ರಾಡಿಯ ಹಿನ್ನಲ ಫಲ್ಕೆ ಮನೆಯ ಜಯ ಶೆಟ್ಟಿಯವರ ಪುತ್ರಿ ಪ್ರತೀಕ್ಷಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಮೂಡುಬಿದಿರೆಯ ಟ್ಯುಟೋರಿಯಲ್‌ನಲ್ಲಿ ಕಲಿತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯ ಬಳಿಕ ಪ್ರತೀಕ್ಷಾ ಪುಣೆಯಲ್ಲಿರುವ ತನ್ನ ಚಿಕ್ಕಪ್ಪನ ಮನೆಗೆ ತೆರಳಿದ್ದಳು. ಏ 15ರ ಸೋಮವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷೆಯಲ್ಲಿ ಪ್ರತೀಕ್ಷಾ ಅನುತ್ತೀರ್ಣಳಾಗಿದ್ದಳು. ಅನುತೀರ್ಣಗೊಂಡ ಹಿನ್ನೆಲೆ ನೊಂದ ವಿದ್ಯಾರ್ಥಿನಿ […]

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ… 3700 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನರ್ಹ

Wednesday, February 28th, 2018
2nd-puc

ಬೆಂಗಳೂರು: ರಾಜ್ಯದಾದ್ಯಂತ ದ್ವಿತೀಯ ಪಿಯು ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದು, ಮಾರ್ಚ್17 ರವರೆಗೆ ನಡೆಯಲಿದೆ. ಈ ಮಧ್ಯೆ ಒಟ್ಟು ವಿದ್ಯಾರ್ಥಿಗಳ ಪೈಕಿ ಅಂದಾಜು 3700 ವಿದ್ಯಾರ್ಥಿಗಳು ಈ ಭಾರಿ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ. ಹೌದು ಹಾಜರಾತಿ ಕೊರತೆಯಿಂದ ಈ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳುವ ಹಕ್ಕು ಕಳೆದುಕೊಳ್ಳಲಿದ್ದಾರೆ. ಈಗಾಗಲೇ ಮೊದಲ ಹಂತದಲ್ಲಿ 1,700 ವಿದ್ಯಾರ್ಥಿಗಳಿಗೆ ಕನಿಷ್ಠ ಹಾಜರಾತಿ ಕೊರತೆ ಇರೋದರಿಂದ ನಿಮಗೆ ಪರೀಕ್ಷೆಗೆ ಕುಳಿತುಕೊಳ್ಳುವುದು ಸಾಧ್ಯವಾಗುವುದಿಲ್ಲ ಎಂದು ಕಾಲೇಜಿನ ಆಡಳಿತ ಮಂಡಳಿಗಳು ಮಾಹಿತಿ ನೀಡಿದೆ. ಹೀಗಾಗಿ ಇಂಥವರ ಪ್ರವೇಶ ಪತ್ರ ಕೂಡ […]

ಮಾರ್ಚ್‌ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

Wednesday, December 13th, 2017
PUC-Exam

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. 2018ರ ಮಾರ್ಚ್ 1ರಂದು ಪರೀಕ್ಷೆ ಆರಂಭಗೊಳ್ಳಲಿದ್ದು, ಮಾರ್ಚ್‌ 17ಕ್ಕೆ ಪರೀಕ್ಷೆ ಮುಗಿಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.