ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಲ್ಲಿ ಉಳಿದಿದ್ದರೆ ಅಲ್ಲಿಂದಲೇ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ

Saturday, May 16th, 2020
suresh-kumar

ಬೆಂಗಳೂರು : ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ  ಅಲ್ಲೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಶನಿವಾರ ಸುತ್ತೋಲೆ ಹೊರಡಿಸಿದೆ. ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು […]

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಬಿಎಸ್​ವೈ, ಶಿಕ್ಷಣ ಸಚಿವ ಸುರೇಶ್​ ಕುಮಾರ್

Wednesday, March 4th, 2020
PUC-Exam

ಬೆಂಗಳೂರು : 2019-20ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ ಪ್ರಾರಂಭವಾಗಲಿದ್ದು, ಮಾರ್ಚ್ 23ರವರೆಗೆ ನಡೆಯಲಿದೆ. ಈ ಬಾರಿ ಪರೀಕ್ಷೆ ವೇಳೆ ಯಾವುದೇ ಗೊಂದಲ, ಎಡವಟ್ಟು ಉಂಟಾಗದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜೊತೆಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಅವರು ಧೈರ್ಯದ ಜೊತೆಗೆ ಶುಭಾಶಯ ಕೋರಿದ್ದಾರೆ. ಪಿಯುಸಿ ಪರೀಕ್ಷೆ ಸಂಬಂಧ ಮಾತನಾಡಿರುವ ಸುರೇಶ್ ಕುಮಾರ ಅವರು, ಪ್ರಶ್ನೆ ಪತ್ರಿಕೆ ಸೋರಿಕೆಯಂತಹ […]

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ

Monday, April 30th, 2018
Ankitha

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆ ಮೊದಲ  ಸ್ಥಾನವನ್ನು ಪಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಳೆದ ವರ್ಷ  ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಶೇ. 91.49 ಫಲಿತಾಂಶವನ್ನು ದಾಖಲಿಸಿರುವ ದಕ್ಷಿಣ ಕನ್ನಡ ಕಳೆದ ವರ್ಷ 89.92 ಫಲಿತಾಂಶವನ್ನು ದಾಖಲಿಸಿತ್ತು. ದ.ಕ. ಜಿಲ್ಲೆ ಈ ಹಿಂದಿನ ಸತತ ಮೂರು ವರ್ಷಗಳಿಂದ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ಸಾಧನೆ  ಮಾಡಿತ್ತು.  ಶೇಕಡಾವಾರು ಫಲಿತಾಂಶದಲ್ಲಿಯೂ ಕಳೆದೆರಡು ವರ್ಷಗಳಿಂದ ಏರಿಕೆಯನ್ನು […]