ಕತುವಾ ಬಾಲಕಿ ಅತ್ಯಾಚಾರದ ವಿರುದ್ಧ ಮಂಗಳೂರಿನಲ್ಲಿ ಮೌನ ಪ್ರತಿಭಟನೆ
Monday, April 16th, 2018ಮಂಗಳೂರು: ಕತುವಾದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ದ.ಕ. ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಸಲಾಯಿತು. ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಾಯಿಗೆ ಬಟ್ಟೆ ಕಟ್ಟಿಕೊಂಡು ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಇಬ್ಬರು ಪುಟಾಣಿಗಳು ಪಾಲ್ಗೊಂಡು ಘಟನೆ ವಿರೋಧಿಸಿದ ಭಿತ್ತಿಪತ್ರವನ್ನು ಹಿಡಿದು ಗಮನ ಸೆಳೆದರು.