ವೇಣೂರು: ಮಹಾಮಸ್ತಕಾಭಿಷೇಕ ಸಮಾಪನ

Saturday, March 2nd, 2024
Dinesh-Gundurao

ಮಂಗಳೂರು : ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ. ಧರ್ಮಪ್ರಭಾವನೆಯೊಂದಿಗೆ ಆರೋಗ್ಯಪೂರ್ಣ ಜೀವನಕ್ಕೆ ನಿರಂತರ ಪ್ರೇರಣೆ, ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಶುಕ್ರವಾರ ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತದಲ್ಲಿ ಜೈನರ ಜೀವನಶೈಲಿ, ವ್ರತ-ನಿಯಮಗಳು, ನಾಯಕತ್ವ ಗುಣ, […]