ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ ಜಿಲ್ಲೆ ಈ ಬಾರಿಯೂ ರಾಜ್ಯದಲ್ಲಿ ಮೊದಲ ಸ್ಥಾನ

Wednesday, July 21st, 2021
II Puc

ಮಂಗಳೂರು:  ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದೇ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ಪಪೂ ಶಿಕ್ಷಣ ಇಲಾಖೆ ಎಲ್ಲರನ್ನೂ ಉತ್ತೀರ್ಣ ಮಾಡಿದೆ. ದ.ಕ ಜಿಲ್ಲೆಯಲ್ಲಿ 600ರಲ್ಲಿ 600 ಅಂಕ ಪಡೆದ 445 ಮಂದಿ ವಿದ್ಯಾರ್ಥಿಗಳು ಇರುವ ಹಿನ್ನೆಲೆಯಲ್ಲಿ ಜಿಲ್ಲೆ ರಾಜ್ಯದಲ್ಲಿ ಮೊದಲ ಸ್ಥಾನ ತನ್ನದಾಗಿಸಿಕೊಂಡಿದೆ. ಸತತ ಎರಡನೇ ಬಾರಿ ದ.ಕ ಜಿಲ್ಲೆ ಈ ಸಾಧನೆ ಮಾಡಿದಂತಾಗಿದೆ. ಕಳೆದ ವರ್ಷದ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲೂ ದ.ಕ ಜಿಲ್ಲೆಯ ಮೊದಲ ಸ್ಥಾನ ಪಡೆದಿತ್ತು,  ದ.ಕ ಜಿಲ್ಲೆಯಲ್ಲಿ ಖಾಸಗಿ ಹೊರತುಪಡಿಸಿ, […]

ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದವರ ಸಂಖ್ಯೆ 20ಕ್ಕೇರಿಕೆ

Thursday, July 1st, 2021
black fungus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಬಲಿಯಾದ ಸಂಖ್ಯೆ 20ಕ್ಕೇರಿದೆ. ಇದರಲ್ಲಿ ದ.ಕ.ಜಿಲ್ಲೆಯ 5 ಮತ್ತು ಹೊರಜಿಲ್ಲೆಯ 15 ಮಂದಿ ಸೇರಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ ಗೆ ಓರ್ವ ಬಲಿಯಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 26 ಸಕ್ರಿಯ ಪ್ರಕರಣಗಳಿವೆ. ಅದರಲ್ಲಿ 7 ದ.ಕ. ಜಿಲ್ಲೆಗೆ ಮತ್ತು 19 ಮಂದಿ ಹೊರಜಿಲ್ಲೆಗೆ ಸೇರಿದವರಾಗಿದ್ದಾರೆ. ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡವರ ಸಂಖ್ಯೆ 36ಕ್ಕೇರಿದೆ.

ಕೊರೋನ ಸೋಂಕು ಜೂನ್ 12 : ದ.ಕ. ಜಿಲ್ಲೆ 618 – 4 ಸಾವು, ಉಡುಪಿ ಜಿಲ್ಲೆ 258 – 2 ಸಾವು, ಕಾಸರಗೋಡು ಜಿಲ್ಲೆ – 475

Saturday, June 12th, 2021
corona-virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ  618 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.92 ಇದೆ. ಇದರೊಂದಿಗೆ ಈವರೆಗೆ ಜಿಲ್ಲೆಯಲ್ಲಿ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 83,311ಕ್ಕೇರಿದೆ. ಶನಿವಾರ 4 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 976ಕ್ಕೇರಿದೆ.   ಶನಿವಾರ 524 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖರಾದವರ ಸಂಖ್ಯೆ 75,273ಕ್ಕೇರಿದೆ. ಜಿಲ್ಲೆಯಲ್ಲಿ 7,062 ಸಕ್ರಿಯ ಪ್ರಕರಣವಿದೆ. ಜಿಲ್ಲೆಯಲ್ಲಿ ಈವರಗೆ 8,92,095 ಮಂದಿಯ ದ್ರವ […]

ದ.ಕ. ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 45 ಕ್ಕೆ ಏರಿಕೆ, ಇಬ್ಬರು ಬಲಿ

Saturday, June 12th, 2021
Black Fungus

ಮಂಗಳೂರು : ದ.ಕ. ಜಿಲ್ಲೆಯಲ್ಲಿ  ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳ ಸಂಖ್ಯೆ  45 ಕ್ಕೆ ಏರಿದೆ.  ಶನಿವಾರ ಹೊಸತಾಗಿ 2 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಬಲಿಯಾಗಿದ್ದಾರೆ. ಪತ್ತೆಯಾದ ಎರಡು ಹೊಸ ಪ್ರಕರಣವು ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ್ದಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬ್ಲ್ಯಾಕ್ ಫಂಗಸ್ ಗೆ ಇಬ್ಬರು ಬಲಿಯಾಗಿದ್ದು  ಒಬ್ಬರು ಚಿಕ್ಕಮಗಳೂರಿನವರು ಮತ್ತು ಇನ್ನೊಬ್ಬರು ಹಾಸನ ಜಿಲ್ಲೆಗೆ ಸೇರಿದವರಾಗಿದ್ದಾರೆ.  ದ.ಕ.ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 12 ಮಂದಿಯ ಸಹಿತ ಬ್ಲ್ಯಾಕ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಆದೇಶ

Thursday, May 13th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಾರಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗಿದ್ದು, ಈಗಾಗಲೇ ಸರಕಾರ ಹೊರಡಿಸಿರುವ ಮೇ 10ರಿಂದ ಮೇ 24ರ ತನಕದ ಲಾಕ್ ಡೌನ್ ಮುಂದುವರೆಯಲಿದೆ. ಆ ಮಾರ್ಗಸೂಚಿಯೇ ಮುಂದುವರೆಯಲಿದೆ. ಅದನ್ನು ಹೊರತು ಪಡಿಸಿ ಉಳಿದಂತೆ ಯಾವುದೇ ಪ್ರತ್ಯೇಕ ವಾರಾಂತ್ಯ ಕರ್ಫ್ಯೂ ಇಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಹಾಗೂ ರವಿವಾರದಂದು ಬೆಳಗ್ಗೆ 9 […]

ದಕ್ಷಿಣ ಕನ್ನಡದಲ್ಲಿ18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭ

Tuesday, May 11th, 2021
vaccination

ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರ 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಆರಂಭಗೊಂಡಿದೆ. ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡವರಿಗೆ ಪ್ರಥಮ ಹಂತವಾಗಿ ನಗರದ ವೆನ್ಲಾಕ್ ಆಸ್ಪತ್ರೆ ಹಾಗೂ ನಾಲ್ಕು ತಾಲ್ಲೂಕು ಆಸ್ಪತ್ರೆ ಗಳಲ್ಲಿ ಮಂಗಳವಾರ ಲಸಿಕೆ ನೀಡಲಾಗುತ್ತಿದೆ. ಮಂಗಳವಾರ ವೆನ್ಲಾಕ್ ನಲ್ಲಿ  250 ಮಂದಿ 18 ರಿಂದ 44 ವರ್ಷದವರಿಗೆ ಆನ್ ಲೈನ್  ನೋಂದಣಿ ಪಡೆದವರಿಗೆ ಲಸಿಕೆ ನೀಡಲಾಗುತ್ತಿದ್ದು ಯುವಕರು ಉತ್ಸಾಹದಿಂದ ಕೇಂದ್ರಕ್ಕೆ ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ಕೋವಿಡ್ ಲಸಿಕೀಕರಣದ ಜಿಲ್ಲಾ […]

ದ.ಕ. ಜಿಲ್ಲೆಯಲ್ಲಿ ರವಿವಾರ 1,694 ಮಂದಿಗೆ ಕೊರೋನ ಸೋಂಕು ದೃಢ, 2 ಸಾವು, ಉಡುಪಿ ಜಿಲ್ಲೆಯಲ್ಲಿ 692 ಸೋಂಕಿತರು, 5 ಸಾವು,

Sunday, May 9th, 2021
Corona Virus

ಮಂಗಳೂರು : ದ.ಕ. ಜಿಲ್ಲೆಯಲ್ಲಿ ರವಿವಾರ 1,694 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 854 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರವಿವಾರ 2 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 785ಕ್ಕೇರಿದೆ. ಜಿಲ್ಲೆಯಲ್ಲಿ ಈವರೆಗೆ 56,376 ಮಂದಿ ಕೊರೋನ ಸೋಂಕಿಗೊಳಗಾಗಿದ್ದು, ಈ ಪೈಕಿ 43,034 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,557 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 52,519 ಮಂದಿಯಿಂದ 54,86,130 ರೂ. ದಂಡ ವಸೂಲು ಮಾಡಲಾಗಿದೆ. ಸುಳ್ಯ […]

ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ, ಮೇ 15ರ ಬಳಿಕ ಸಂಪೂರ್ಣ ಬಂದ್

Thursday, May 6th, 2021
Rajendra

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮೇ 7 ರಿಂದ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಈ ಅವಧಿಯಲ್ಲಿ ಅಗತ್ಯ ಸೇವೆಗಳು ಬೆಳಿಗ್ಗೆ 6 ರಿಂದ  9 ರವರೆಗೆ ಮಾತ್ರ ಲಭ್ಯವಿದೆ ಮತ್ತು ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ.  ಮೇ 15ರ ಬಳಿಕ ಮದುವೆ ಸಮಾರಂಭಗಳಿವೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತದ ಗುರುವಾರದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಶನಿವಾರ ಹಾಗೂ ರವಿವಾರದಂದು ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ಎಲ್ಲಾ ಚಟುವಟಿಕೆಗಳು ಸ್ತಬ್ಧವಾಗಿರಲಿವೆ. ಈ ಅವಧಿಯಲ್ಲಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಗಳ ಸೇವೆ ಲಭ್ಯ ಇರಲಿದೆ. […]

ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು, ಮೂವರು ಬಲಿ

Wednesday, April 28th, 2021
Corona

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಂಗಳವಾರ 486 ಕೊರೋನ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಇದರೊಂದಿಗೆ 42,065 ಪಾಸಿಟಿವ್ ಪ್ರಕರಣಗಳು ಕಂಡು ಬಂದಂತಾಗಿದೆ. ಮಂಗಳವಾರ 225 ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳುವುದರೊಂದಿಗೆ ಈವರೆಗೆ 37,024 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಮಂಗಳವಾರ  ಕೊರೋನಕ್ಕೆ ಮೂವರು ಬಲಿಯಾಗಿದ್ದಾರೆ. ಇದರಲ್ಲಿ ಮಂಗಳೂರಿನ ಇಬ್ಬರು ಮತ್ತು ಸುಳ್ಯ ತಾಲೂಕಿನ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 751ಕ್ಕೇರಿದೆ. ಕೇರಳದ ಮಲಪ್ಪುರಂ ನಿವಾಸಿ ಗರ್ಭಿಣಿ ವೈದ್ಯೆರೊಬ್ಬರು ಚಿಕಿತ್ಸೆಗಾಗಿ ಮಂಗಳೂರಿನ […]

ಗ್ರಾಮ ಪಂಚಾಯತ್ ಚುನಾವಣೆ ನಾಮ ಪತ್ರ ಸಲ್ಲಿಕೆ ಆರಂಭ

Monday, December 7th, 2020
GP election

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ನಾಮ ಪತ್ರ ಸಲ್ಲಿಕೆ ಸೋಮವಾರದಿಂದ ಆರಂಭ ಗೊಡಿದ್ದು ಡಿಸೆಂಬರ್ 11 ರಂದು ಕೊನೆಗೊಳ್ಳಲಿದೆ. ಡಿಸೆಂಬರ್ 12 ಪರಿಶೀಲನೆ. ಡಿಸೆಂಬರ್ 14 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ.  ದ.ಕ.ಜಿಲ್ಲೆಯ 220 ಗ್ರಾಪಂಗಳ‌ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು,  ಇವಿಎಂ ಬಳಕೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ತಿಳಿಸಿದ್ದಾರೆ. ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ […]