ಕನಿಷ್ಠ ಕೂಲಿಯನ್ನು ಜಾರಿಗೊಳಿಸಲು ಸಿಐಟಿಯು ಧರಣಿ
Tuesday, May 21st, 2019ಮಂಗಳೂರು : ರಾಜ್ಯ ಹೈಕೋರ್ಟ್‌ನ ಆದೇಶದಂತೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸಿಐಟಿಯು ದ.ಕ. ಜಿಲ್ಲಾ ಸಮಿತಿಯು ಮಂಗಳವಾರ ಕದ್ರಿಯಲ್ಲಿರುವ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯ ಎದುರು ಧರಣಿ ನಡೆಸಿತು. ಹೈಕೋರ್ಟ್ ಆದೇಶದಂತೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸಬೇಕು, ಸ್ಕೀಮ್ ನೌಕರರಾದ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರನ್ನೂ ಕನಿಷ್ಠ ಕೂಲಿ ವ್ಯಾಪ್ತಿಗೆ ಒಳಪಡಿಸಬೇಕು, ತಂದೆ ತಾಯಿಗಳನ್ನೊಳಗೊಂಡು 5 ಘಟಕಗಳ ಆಧಾರದಲ್ಲಿ ಕನಿಷ್ಠ ಕೂಲಿ ರೂ.18,000/- ನಿಗದಿಗೊಳಿಸಬೇಕು, ಬೆಲೆಯೇರಿಕೆ ಸೂಚ್ಯಾಂಕ ನಿಗದಿಯಲ್ಲಿನ ಮೋಸ ನಿಲ್ಲಿಸಬೇಕು,10 ರೂ.ಇದ್ದ ಕಾರ್ಮಿಕ ಸಂಘದ […]