‘ವೀರ ಕಂಬಳ’ ಸಿನಿಮಾ ಕ್ಕೆ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ
Monday, January 2nd, 2023
ಧರ್ಮಸ್ಥಳ : ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದ್ದು ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಥೆ, ತುಳುನಾಡಿನ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ. ಈ ಸಿನಿಮಾ ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ […]