Blog Archive

ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ : ಡಿ. ವೀರೇಂದ್ರ ಹೆಗ್ಗಡೆ

Sunday, May 16th, 2021
veerendra Heggade

ಧರ್ಮಸ್ಥಳ  : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಪ್ರಮುಖವಾದ ಮಾಸವಾಗಿದೆ. ಈ ಉಭಯ ಜಿಲ್ಲೆಗಳಲ್ಲಿ ಪ್ರಾಕೃತಿಕವಾಗಿಯೂ ಮೇ ತಿಂಗಳ ಬಳಿಕ 4 ರಿಂದ 5 ತಿಂಗಳು ಮಳೆಗಾಲವಾದುದರಿಂದ ಕೃಷಿಯನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಹತ್ತನಾವಧಿ ಅಂದರೆ ವರ್ಷದಲ್ಲಿ ದೇವಸ್ಥಾನ, ದೈವಸ್ಥಾನ, ಭೂತಸ್ಥಾನ ಮತ್ತು ಕೌಟುಂಬಿಕ ಸಾನಿಧ್ಯಗಳ ನಾಗಾರಾಧನೆ ಇತ್ಯಾದಿ ನಡೆಯುತ್ತದೆ. ಆ ಬಳಿಕ ದೀಪಾವಳಿ ವರೆಗೂ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೆ ವಿಶ್ರಾಂತಿ ಇರುತ್ತದೆ ಮತ್ತು […]

“ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಎರಡು ಡಬಲ್ ಡೆಕ್ಕರ್ ಬಸ್ ಸೇರ್ಪಡೆ

Tuesday, March 9th, 2021
Manjusha

ಧರ್ಮಸ್ಥಳ:   ಧರ್ಮಸ್ಥಳದಲ್ಲಿರುವ “ಮಂಜೂಷಾ” ವಾಹನ ಸಂಗ್ರಹಾಲಯಕ್ಕೆ ಮುಂಬೈನಲ್ಲಿರುವ ಧರ್ಮಸ್ಥಳದ ಭಕ್ತರು ಸಂಗ್ರಹಿಸಿ ಕಳುಹಿಸಿದ ಎರಡು ಡಬಲ್ ಡೆಕ್ಕರ್ ಬಸ್‍ಗಳು ಧರ್ಮಸ್ಥಳಕ್ಕೆ ತಲುಪಿವೆ. ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್‍ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ಮಾಡಿಕೊಟ್ಟಿದ್ದು ಧರ್ಮಾಧಿಕಾರಿ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಅವರಿಬ್ಬರಿಗೂ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.

ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Wednesday, February 24th, 2021
Buss

ಉಪ್ಪಿನಂಗಡಿ:  ವಿದ್ಯಾರ್ಥಿನಿಯೋರ್ವಳಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು  ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿಯಾಗಿದ್ದಾನೆ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ […]

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿಇಬ್ಬರು ಮಹಿಳೆಯರ ಮೃತ ದೇಹ ಪತ್ತೆ

Friday, February 5th, 2021
Dead Body

ಉಜಿರೆ  : ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಗುರುವಾರ ಪತ್ತೆಯಾಗಿವೆ. ಸ್ನಾನ ಘಟ್ಟದ ಸಿಬ್ಬಂದಿ  ಅವರು ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಯಾತ್ರಾರ್ಥಿಗಳು ಬಂದು, ಅವರ ಬಳಿ ಮೃತದೇಹ ಇರುವುದಾಗಿ ತಿಳಿಸಿದ್ದಾರೆ. ಅಂದಾಜು 40 ರಿಂದ 45 ವರ್ಷ ಮತ್ತು 20 ರಿಂದ 25 ವರ್ಷ ಪ್ರಾಯದ ಅಪರಿಚಿತ ಮಹಿಳೆಯರ ಮೃತದೇಹ ಕವುಚಿ ಮಲಗಿದ ಸ್ಥಿತಿಯಲ್ಲಿ ನೀರಿನಲ್ಲಿ ಕಂಡುಬಂದಿತ್ತು.‌ ಈ ಇಬ್ಬರು ಅಪರಿಚಿತ ಮಹಿಳೆಯರು ಯಾವುದೋ ಕಾರಣಕ್ಕೆ ನೀರಿಗೆ ಹಾರಿ ಅಥವಾ ಕಾಲು […]

ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಧರ್ಮಸ್ಥಳ ಭೇಟಿ

Sunday, January 17th, 2021
S Angara

ಉಜಿರೆ : ಸಚಿವರುಗಳಾದ ಜೆ.ಸಿ. ಮಾಧುಸ್ವಾಮಿ ಮತ್ತು ಅಂಗಾರ ಶನಿವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಉಭಯ ಸಚಿವರಿಗೂ ಶುಭ ಹಾರೈಸಿ ಗೌರವಿಸಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

ಧರ್ಮಸ್ಥಳದ ವತಿಯಿಂದ ಶಾಲೆಗಳಿಗೆ ಬೆಂಚು, ಡೆಸ್ಕ್ ವಿತರಣೆ

Tuesday, December 29th, 2020
Dharmasthala Bench

ಉಜಿರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10,200 ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಒಂದು ಕೋಟಿ ಎಪ್ಪತ್ತೆಂಟು ಲಕ್ಷದ ಐವತ್ತು ಸಾವಿರ ರೂ. ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಬೆಂಚು ಮತ್ತು ಡೆಸ್ಕ್ ಗಳನ್ನು ವಿತರಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ ಹೊಸಪೇಟೆ ಜಿಲ್ಲೆಗಳ 287 ಶಾಲೆಗಳಿಗೆ 255೦ ಬೆಂಚು ಮತ್ತು ಡೆಸ್ಕ್ ಗಳನ್ನು ಹಸ್ತಾಂತರಿಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳಲ್ಲಿ 29 ಜಿಲ್ಲೆಗಳ 9213 ಶಾಲೆಗಳಿಗೆ […]

ಧರ್ಮಸ್ಥಳ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 88 ನೆ ಅಧೀವೇಶನ

Tuesday, December 15th, 2020
dharmasthala

ಉಜಿರೆ: ಸಾಹಿತ್ಯ ಸಮಾಜದ ಕನ್ನಡಿಯಂತಿದ್ದು ಸಮಾಜದ ರಕ್ಷಣೆ ಮತ್ತು ಪೋಷಣೆಗೆ ಸಾಹಿತ್ಯ ಅಗತ್ಯ  ಎಂದು ಬೆಂಗಳೂರಿನ ಹಿರಿಯ ವಿದ್ವಾಂಸ ಡಾ. ಎಸ್. ರಂಗನಾಥ್ ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 88ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತ್ಯಕ್ಕೆ ಔಷಧೀಯ ಗುಣವೂ ಇದ್ದು ಜೀವನ ಮೌಲ್ಯಗಳ ಆಕರವಾಗಿದೆ. ಸಾಹಿತ್ಯ, ಸಂಗೀತ ಮತ್ತು ಕಲೆಯ ಸ್ಪರ್ಶ ಇಲ್ಲದ ಮನುಷ್ಯ ಕೋಡು, ಬಾಲವಿಲ್ಲದ ಪ್ರಾಣಿಯಂತೆ ಆಗುತ್ತಾನೆ. ಸಾಹಿತ್ಯದಿಂದ ಸಮಾಜ ಸುಧಾರಣೆಯೊಂದಿಗೆ ಮಾನವೀಯ ಮೌಲ್ಯಗಳ ಉದ್ದೀಪನ ಹಾಗೂ […]

ಧರ್ಮಸ್ಥಳದಲ್ಲಿ 13 ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಾರೋಪ

Monday, December 14th, 2020
Dharmasthala Sahitya

ಧರ್ಮಸ್ಥಳ : ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪೂರ್ವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡುತ್ತಾ ಇಂತಹ ಕಾರ್ಯಕ್ರಮಗಳಿಂದ ಕನ್ನಡ ಭಾಷೆ, ಸಂಸ್ಕೃತಿ ಗಟ್ಟಿಯಾಗುತ್ತದೆ ಎಂದರು .ಈ ಜಗತ್ತಿನಲ್ಲಿ 6500ರಿಂದ 7000ದವರೆಗೆ ಭಾಷೆಗಳಿವೆ .ಭಾರತದಲ್ಲಿಯೇ 2500ಭಾಷೆಗಳಿವೆ.ಭಾಷಾ ಶ್ರೀಮಂತಿಕೆ ಇರುವ ದೇಶ ನಮ್ಮದು.ಬದುಕಿನ ಜೊತೆ ಭಾಷೆ ಹುಟ್ಟುತ್ತದೆ ,ಬೆಳೆಯುತ್ತದೆ.ಶ್ರೇಷ್ಠ ಭಾಷೆ ,ಕನಿಷ್ಠ ಭಾಷೆ ಎಂಬ ತಾರತಮ್ಯ ಸಲ್ಲದು.ಹತ್ತು ಜನ ಮಾತನಾಡಿದರೂ ಆ ಭಾಷೆಗೆ ವೈಶಿಷ್ಟ್ಯತೆ ಇದೆ .ಭಾಷೆ ಎಂದೂ ಸಾಯೊಲ್ಲ .ಆದರೆ ಸಾಯಿಸುವಂತಹ ಹುನ್ನಾರ ನಡೆಯಬಹುದು ಅಷ್ಟೇ ಎಂದರು. ಭಾಷೆ […]

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರಿಂದ ದೀಪಾವಳಿ ಸಂದೇಶ

Saturday, November 14th, 2020
veerendra Heggade

ಧರ್ಮಸ್ಥಳ  : ಬೆಳಕಿನ ಹಬ್ಬ ದೀಪಾವಳಿ ಸುಜ್ಞಾನದ ಪ್ರತೀಕ. ದೀಪಾವಳಿ ಹಬ್ಬವನ್ನು ಎಲ್ಲರೂ ಶ್ರದ್ಧಾ-ಭಕ್ತಿಯಿಂದ ಸರಳವಾಗಿ ಆಚರಿಸೋಣ. ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಂಪ್ರದಾಯ ಬದ್ಧವಾಗಿ ಸಂಸ್ಕೃತಿ ರಕ್ಷಣೆಯೊಂದಿಗೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವುದು ಎಲ್ಲರ ಕರ್ತವ್ಯವೂ, ಹೊಣೆಗಾರಿಕೆಯೂ ಆಗಿದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಇಳಿಮುಖವಾಗುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಆದಷ್ಟು ಶೀಘ್ರ ಕೊರೊನಾ ಸಂಪೂರ್ಣ ನಿರ್ಮೂಲನೆಯಾಗಿ ಎಲ್ಲರೂ ಆರೋಗ್ಯ ಭಾಗ್ಯವನ್ನು ಹೊಂದಿ ಭಯ ಮುಕ್ತ ವಾತಾವರಣದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುವಂತಾಗಲಿ […]

ಕೆ.ಎಸ್.ಟಿ.ಡಿ.ಸಿ. ಯಿಂದ ತಿರುಪತಿ, ಕೊಲ್ಲೂರು, ಧರ್ಮಸ್ಥಳ, ಹಂಪೆ ಪ್ರತಿದಿನ ಬಸ್ ಸೇವೆ

Friday, November 13th, 2020
kstdc

ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರವಾಸಿಗರಿಗೆ ಹಾಗೂ ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದ ಈ ಕೆಳಗಿನ ಧಾರ್ಮಿಕ ಸ್ಥಳಗಳಿಗೆ ರಾತ್ರಿ ಸಾರಿಗೆಗಳನ್ನು (Point to Point Operation) ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದ್ದು, ಸುಸ್ಸಜ್ಜಿತ ಎ.ಸಿ ಡಿಲೆಕ್ಸ್ ವಾಹನಗಳಲ್ಲಿ ಪ್ರತಿದಿನ ರಾತ್ರಿ ಬೆಂಗಳೂರಿನಿಂದ ಈ ಕೂಡಲೇ ಜಾರಿಯಲ್ಲಿ ಬರುವಂತೆ ಕಾರ್ಯಾಚರಣೆಗೆ ಕ್ರಮಕೈಗೊಳ್ಳಲಾಗಿದೆ. ಧಾರ್ಮಿಕ ಸ್ಥಳಗಳ ವಿವರ ಏಕಮುಖ ಪ್ರಯಾಣ ದರ ರೂ. ಬೆಂಗಳೂರಿನಿಂದ ಹೊರಡುವ ವೇಳೆ ಯಾತ್ರಾ ಸ್ಥಳಗಳಿಂದ ಹೊರಡುವ ವೇಳೆ 1. […]