Blog Archive

ಫೆ. 9 ರಿಂದ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Wednesday, January 30th, 2019
Masthakabhisheka

ಉಜಿರೆ: ಧರ್ಮಸ್ಥಳದಲ್ಲಿ ಫೆ. 9 ರಿಂದ 18ರ ವರೆಗೆ ನಡೆಯಲಿರುವಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ಧತೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ಧರ್ಮಸ್ಥಳದ ಶ್ರೀ ಸನ್ನಿಧಿಅತಿಥಿಗೃಹದಲ್ಲಿ ನಡೆಯಿತು. ಸಚಿವಯು.ಟಿ.ಖಾದರ್‌ಎಲ್ಲಾ ಇಲಾಖಾ ಅಧಿಕಾರಿಗಳಿಂದ ಪ್ರಗತಿ ಬಗ್ಗೆ ಸವಿವರ ಮಾಹಿತಿ ಪಡೆದು ಫೆ.೧೦ ರೊಳಗೆ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು. ನೇತ್ರಾವತಿ ಸ್ನಾನಘಟ್ಟದಿಂದಧರ್ಮಸ್ಥಳದವರೆಗೆ, ಬಾಹುಬಲಿ ಬೆಟ್ಟ ಸಂಪರ್ಕರಸ್ತೆ, ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದರಸ್ತೆಯಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಫೆಬ್ರವರಿ ಪ್ರಥಮ ವಾರದಲ್ಲಿ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕಎಂಜಿನಿಯರ್ ಶಿವಪ್ರಸಾದ ಅಜಿಲ ತಿಳಿಸಿದರು. ಮಸ್ತಕಾಭಿಷೇಕ […]

ಫೆ.9 ರಿಂದ 18ರವರೆಗೆ ಧರ್ಮಸ್ಥಳದ ಬಾಹುಬಲಿಗೆ ವೈಭವದ ಮಹಾಮಸ್ತಕಾಭಿಷೇಕ

Wednesday, January 2nd, 2019
Masthkabhisheka

ಧರ್ಮಸ್ಥಳ:ತ್ಯಾಗತಪಸ್ಸು ಮತ್ತು ಮೋಕ್ಷದ ಪ್ರತೀಕವಾದ ಬಾಹುಬಲಿ ಜೈನಧರ್ಮದ ಸಮಸ್ಥ ಮೌಲ್ಯಗಳ ಪ್ರತಿರೂಪ. ರಾಜಭೋಗಜೀವನ ತ್ಯಜಿಸಿ ಮೋಕ್ಷದಋಜು ಮಾರ್ಗವನ್ನು ಆರಿಸಿಕೊಂಡು ಆಧ್ಯಾತ್ಮಿಕ ಉತ್ತುಂಗಕ್ಕೇರಿದ ಬಾಹುಬಲಿಯ ಜೀವನ ಇಂದಿಗೂ ಎಲ್ಲಾ ಜೈನಧರ್ಮೀಯರಿಗೆ ಆದರ್ಶ ಪ್ರಾಯವಾದದ್ದು. ರಾಜ್ಯದೊಂದಿಗೆ ಉಟ್ಟ ಬಟ್ಟೆಯನ್ನೂ ತ್ಯಜಿಸಿದ ಬಾಹುಬಲಿ ಆಡಂಬರ, ಅಭಿಷೇಕ ಇವೆಲ್ಲವುಗಳ ಪರಿಧಿಯನ್ನು ಮೀರಿ ನಿಂತವರು. ಆದರೂ ಅವರ ಪರಮೋಚ್ಛತ್ಯಾಗ- ತಪಸ್ಸಿನ ಗುಣಗಳನ್ನು ಆರಾಧಿಸುವ ಭಕ್ತರು 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನೆರವೇರಿಸುವ ಸಂಪ್ರದಾಯವನ್ನು ಪಾಲಿಸುತ್ತಾ ಬಂದಿದ್ದಾರೆ. ಗಗನ ಸದೃಶ ಮೂರ್ತಿಯತಲೆಯಿಂದ ಕಾಲಿನೆಡೆಗೆ ಹರಿದು ಬರುವ ಅಭಿಷೇಕ ದ್ರವ್ಯಗಳು […]

ಉತ್ತಮ ಆರೋಗ್ಯ ಆರ್ಥಿಕ ಪ್ರಗತಿಗಾಗಿ ದುಶ್ಚಟ ಮುಕ್ತರಾಗಬೇಕು

Tuesday, December 25th, 2018
dharmasthala alcohol

ಉಜಿರೆ: ಉತ್ತಮ ಆರೋಗ್ಯ, ಸಂಸಾರದಲ್ಲಿ ನೆಮ್ಮದಿ, ಸಾಮಾಜಿಕ ಗೌರವ ಹಾಗೂ ಆರ್ಥಿಕ ಪ್ರಗತಿಗಾಗಿ ದುಶ್ಚಟ ಮುಕ್ತರಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ವ್ಯಸನಮುಕ್ತರಾಗಿ ನೂರು ದಿನಗಳನ್ನು ಪೂರೈಸಿದ ಮೂರು ಸಾವಿರ ವ್ಯಸನಮುಕ್ತರಿಗೆ ಹಿತ ವಚನ ನೀಡಿದರು. ವ್ಯಸನ ಮುಕ್ತ ಜೀವನ ನಡೆಸಲು ಜನಜಾಗೃತಿ ವೇದಿಕೆ ಪ್ರೇರಣೆ, ಮಾರ್ಗದರ್ಶನ ನೀಡುತ್ತದೆ. ದುಶ್ಚಟದಿಂದಾಗಿ ಕೋಟ್ಯಾಂತರ ಹಣ ಪೋಲಾಗುತ್ತಿದೆ. ಇರುವ ಜೀವನದಲ್ಲಿ ಸುಖ, ನೆಮ್ಮದಿ […]

ವಿಜ್ನಾನ ಕಾರ್ಯಯೋಜನೆ ಸಮಾವೇಶ

Wednesday, December 12th, 2018
sdm-college

ಧರ್ಮಸ್ಥಳ: ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳಾದ 8 ನೇ ತರಗತಿಯ ಧಾರಿಣೀ ಹಾಗು ಧರಿತ್ರಿ ಭಿಡೆ ಇವರ ತಂಡವು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ನಾನ ಕಾರ್ಯಯೋಜನೆ ಸಮಾವೇಶದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ

Monday, December 10th, 2018
dharmastala

ಉಜಿರೆ: ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಶುಕ್ರವಾರ ರಾತ್ರಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು. ಬೀಡಿನಿಂದ (ಹೆಗ್ಗಡೆಯವರ ನಿವಾಸ) ಮಹೋತ್ಸವ ಸಭಾ ಭವನಕ್ಕೆ ಭವ್ಯ ಮೆರವಣಿಗೆ ಬಳಿಕ ಅಷ್ಟವಿಧಾರ್ಚನೆ ಪೂಜೆ ನಡೆಯಿತು.ಸರಳಾ, ಸೌಮ್ಯ, ಸಾವಿತ್ರಿ, ಮಂಜುಳಾ ಹಾಗೂ ಅಭಿಜ್ಞಾ ಪೂಜಾ ಮಂತ್ರ ಪಠಣ ಮಾಡಿದರು. ಸ್ಥಳೀಯ ಶ್ರಾವಕರು ಹಾಗೂ ಶ್ರಾವಿಕೆಯರ ಅಷ್ಟ ವಿಧಾರ್ಚನೆ ಪೂಜೆಯಲ್ಲಿ ಭಾಗವಹಿಸಿದರು. ಸನ್ಮಾನ: ಬಹುಮುಖಿ ಸಮಾಜ ಸೇವೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ. ಸುರೇಂದ್ರ ಕುಮಾರ್ ಅವರನ್ನು ಜೈನ […]

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ: ಸರ್ವಧರ್ಮ ಸಮ್ಮೇಳನದ 86ನೇ ಅಧಿವೇಶನ ಉದ್ಘಾಟನೆ

Thursday, December 6th, 2018
dharmastala

ಮಂಗಳೂರು: ದಾನವನ್ನು‌‌ ಯಾವತ್ತೂ ಪರಿಶುದ್ಧ ಮನಸ್ಸಿನಿಂದ, ಯಾವುದೇ ಫಲಾಪೇಕ್ಷೆ ಇಲ್ಲದೆ ನೀಡಬೇಕು. ದೇವರ ಅನುಗ್ರಹದಿಂದ ಗಳಿಸಿದ ಸಂಪತ್ತನ್ನು ಪರರ ಹಿತಕ್ಕಾಗಿ ದಾನ ಮಾಡಬೇಕು. ಇದರಿಂದ ಜೀವನದಲ್ಲಿ ಪರಿವರ್ತನೆ ಸಾಧ್ಯ ಎಂದು ಗುಜರಾತ್ ದ್ವಾರಕಾ ಸೂರ್ಯ ಪೀಠದ ಜಗದ್ಗುರು ಶ್ರೀ ಕೃಷ್ಣದೇವನಂದಗಿರಿ ಮಹಾರಾಜ್ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದ ಅಂಗವಾಗಿ ನಡೆದ ಸರ್ವಧರ್ಮ ಸಮ್ಮೇಳನದ 86ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳದಲ್ಲಿ ನಡೆಯುವ ದಾನ, ಧರ್ಮ, ಸ್ವಚ್ಛತಾ ಕೈಂಕರ್ಯ, ಗೋ ಸೇವೆ ಮುಂತಾದ ಕಾರ್ಯಗಳನ್ನು […]

ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸ ಸಂಭ್ರಮದ ಲಕ್ಷ ದೀಪೋತ್ಸವ

Wednesday, December 5th, 2018
dharmastala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಸಂಭ್ರಮದ ಲಕ್ಷ ದೀಪೋತ್ಸವ ನಡೆಯುತ್ತಿದ್ದು, ಈ ದೀಪಗಳ ಉತ್ಸವದ ಸಡಗರವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಡಾ‌. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ವಿವಿಧ ವಿಧಿ-ವಿಧಾನಗಳು ನೆರವೇರಿತು. ಹೊಸಕಟ್ಟೆ ಉತ್ಸವದ ಪ್ರಯುಕ್ತ ಶ್ರೀ ಮಂಜುನಾಥ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿ ವಸಂತಮಹಲ್ನ ಹೊಸಕಟ್ಟೆಗೆ ಸಾವಿರಾರು ಭಕ್ತ ವೃಂದದೊಂದಿಗೆ ಮೆರವಣಿಗೆ ಮಾಡಲಾಯಿತು. ದೀಪೋತ್ಸವದ ಅಂಗವಾಗಿ ಸರ್ವಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ, ವಸ್ತು ಪ್ರದರ್ಶನವನ್ನು‌ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ […]

ಧರ್ಮಸ್ಥಳದಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ: ವೆಬ್‌ಸೈಟ್‌ಗೆ ಚಾಲನೆ

Sunday, November 18th, 2018
mastakabhisheka website

ಉಜಿರೆ: ಶ್ರವಣಬೆಳಗೊಳದದಲ್ಲಿ ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾಗಿದ್ದ ಶ್ರೀಪಾಲ್ ಗಂಗ್ವಾಲ್ ಧರ್ಮಸ್ಥಳದಲ್ಲಿ 2019 ರ ಫೆಬ್ರವರಿ 9 ರಿಂದ 18vರ ವರೆಗೆ ನಡೆಯಲಿರುವ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ವೆಬ್‌ಸೈಟ್‌ಗೆ ಭಾನುವಾರ ಚಾಲನೆ ನೀಡಿ ಶುಭ ಹಾರೈಸಿದರು. ವೆಬ್‌ಸೈಟ್: www.bahubali.live ಇದರಲ್ಲಿ ಮಸ್ತಕಾಭಿಷೇಕದ ಸವಿವರ ಮಾಹಿತಿ ಲಭ್ಯವಿದೆ. ಅಲ್ಲದೆ ಧರ್ಮಸ್ಥಳದಲ್ಲಿ ಬಾಹುಬಲಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇತರ ಎಲ್ಲಾ ಮಾಹಿತಿ ಲಭ್ಯವಿದೆ. ಕಾಲಕಾಲಕ್ಕೆ ಸುದ್ದಿಯನ್ನು ಇದರಲ್ಲಿ ಅಳವಡಿಸಲಾಗುವುದು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಪ್ರಧಾನ ಸಂಚಾಲಕ ಡಿ. […]

ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಲ್ಲದೆ ಶಿಕ್ಷಣ, ವೈದ್ಯಕೀಯ ಕ್ಷೇತ್ರದಲ್ಲೂ ಪ್ರಸಿದ್ಧವಾಗಿದೆ: ನಿರ್ಮಲಾ ಸೀತಾರಾಮನ್

Tuesday, October 30th, 2018
nirmala

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಭಾರತೀಯ ಜೀವ ವಿಮಾ ನಿಗಮದ ಸಹಯೋಗದೊಂದಿಗೆ ಗುಂಪು ವಿಮೆ ಪ್ರಗತಿ ರಕ್ಷಾ ಕವಚ ಯೋಜನೆಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ನಿನ್ನೆ ಸಂಜೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ಧರ್ಮಸ್ಥಳದ ಧರ್ಮಾಧಿಕಾರಿಯವರು ನ್ಯಾಯ ದೇವತೆ ಇದ್ದಂತೆ. ಧರ್ಮಸ್ಥಳವು ಒಂದು ಧಾರ್ಮಿಕ ಕ್ಷೇತ್ರವಾಗಿ ಮಾತ್ರ ಪ್ರಸಿದ್ಧವಲ್ಲ. ಶಿಕ್ಷಣ ಕ್ಷೇತ್ರ, ವೈದ್ಯಕೀಯ, ಗ್ರಾಮಾಭಿವೃದ್ಧಿಯ ಮೂಲಕವೂ ಧರ್ಮಸ್ಥಳ ಕ್ಷೇತ್ರ ತನ್ನದೇ ಆದ […]

ಕಾಡಿನಲ್ಲಿ ಅಕ್ರಮವಾಗಿ ಮರ ಸಾಗಾಟ: ಓರ್ವನ ಬಂಧನ

Friday, October 26th, 2018
arrested

ಮಂಗಳೂರು: ಕಾಡಿನಲ್ಲಿ ಅಕ್ರಮವಾಗಿ ಮರ ಕಡಿದು ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ, ವಾಹನ ಸಹಿತ ಮರಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಧರ್ಮಸ್ಥಳದ ಪುದುವೆಟ್ಟು ಎಂಬಲ್ಲಿ ನಡೆದಿದೆ. ಅಬ್ಬಾಸ್ ಎಂಬಾತ ಬಂಧಿತ ಆರೋಪಿ. ಇತರ ಮೂವರು ಪರಾರಿಯಾಗಿದ್ದಾರೆ. ಇವರು ಕಾಡಿನಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ ಮರಗಳನ್ನು ಕಡಿದು ವಾಹನದಲ್ಲಿ ಸಾಗಾಟ ಮಾಡುವ ಪ್ರಯತ್ನದಲ್ಲಿದ್ದಾಗ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ರಾತ್ರಿಯಿಡೀ ಕಾದು ಬೆಳಗಿನ ಜಾವ ಮೂರು ಗಂಟೆ ಹೊತ್ತಿಗೆ ಅಕ್ರಮ ಮರ ಸಾಗಾಟದ ಯತ್ನವನ್ನು ಅರಣ್ಯ […]