ಸಹಕಾರಿ ಕ್ಷೇತ್ರದ ಪ್ರಗತಿ, ಸಾಧನೆ ಶ್ಲಾಘನೀಯವಾಗಿದೆ : ಡಿ. ವೀರೇಂದ್ರ ಹೆಗ್ಗಡೆ

Tuesday, June 25th, 2024
Sahakari

ಉಜಿರೆ: ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆಯಿಂದ ವ್ಯವಹಾರ ಮಾಡುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಹಕಾರಿ ಸಂಘಗಳಲ್ಲಿ ಶೇ. ನೂರು ಸಾಲ ವಸೂಲಾತಿ ಆಗುತ್ತಿದ್ದು ಸಹಕಾರಿ ಕ್ಷೇತ್ರದ ಪ್ರಗತಿ, ಸಾಧನೆ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳ ಗ್ರಾಮದ ಕಲ್ಲೇರಿಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟಿಸಿ ಶುಭ ಹಾರೈಸಿದರು. ಸಮಾಜದ ಎಲ್ಲಾ ಸ್ತರದ ಜನರು ಸಹಕಾರಿ ರಂಗದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮಾಜದ […]

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Monday, November 29th, 2021
Dharmasthala-Deepothsava1

ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]

ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಲೋಕಾರ್ಪಣೆ

Sunday, November 28th, 2021
Dristi

ಉಜಿರೆ: ನಾನು ಯಾವುದೇ ರೀತಿಯ ಕೃತಕ ಮುಖವಾಡವಿಲ್ಲದೆ ಸ್ವಾಭಾವಿಕವಾಗಿ, ಸಹಜವಾಗಿ ಬದುಕುತ್ತಿದ್ದೇನೆ. ಇಂದಿನ ಪುಸ್ತಕ ಬಿಡುಗಡೆ ಸಮಾರಂಭವು ಕನ್ನಡಿಯ ಎದುರು ನಿಂತು ನನ್ನನ್ನು ನಾನು ಅವಲೋಕನ ಮಾಡುವಂತೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾನುವಾರ ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಡಾ. ಎಮ್. ಪ್ರಭಾಕರ ಜೋಶಿ ಬರೆದ ಲೇಖನಗಳ ಸಂಕಲನ ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಾವು ನಿತ್ಯವೂ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ

Sunday, October 24th, 2021
Veerendra Heggade

ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್  ಕೊಡುಗೆ, ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಧರ್ಮಸ್ಥಳದಲ್ಲಿ ಗಾಂಧಿ ಸ್ಮೃತಿ ಮತ್ತು ವ್ಯಸನ ಮುಕ್ತ ಸಾಧಕರ ಸಮಾವೇಶ

Saturday, October 2nd, 2021
Dharmasthala

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಮನ ಪರಿವರ್ತನೆ ಮೂಲಕ ಮದ್ಯ ವ್ಯಸನ ಮುಕ್ತ ಸಮಾಜ ರೂಪಿಸುವಲ್ಲಿ ಮಾಡಿದ ಸೇವೆ, ಸಾಧನೆ ಶ್ಲಾಘನೀಯವಾಗಿದೆ. ದೃಢ ಸಂಕಲ್ಪದಿಂದ ಮಾತ್ರ ವ್ಯವಸನ ಮುಕ್ತವಾದ ಆರೋಗ್ಯಪೂರ್ಣ ಸಮಾಜ ರೂಪಿಸಲು ಸಾಧ್ಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಹೇಳಿದರು. ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಗಾಂಧಿ ಸ್ಮೃತಿ ಹಾಗೂ ವ್ಯಸನ ಮುಕ್ತ ಸಾಧಕರನ್ನು ಅಭಿನಂದಿಸಿ […]

ಕೇಂದ್ರ ಸರ್ಕಾರದ ಸಚಿವ ಸರ್ಬಾನಂದ ಸೋನೊವಾಲ್ ಧರ್ಮಸ್ಥಳಕ್ಕೆ ಭೇಟಿ

Sunday, September 26th, 2021
Sonowal

ಧರ್ಮಸ್ಥಳ : ಕೇಂದ್ರ ಸರ್ಕಾರದ ಆಯುಷ್ ಇಲಾಖಾ ಸಚಿವ ಸರ್ಬಾನಂದ ಸೋನೊವಾಲ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ, ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾನ್ಯ ಸಚಿವರನ್ನು ಗೌರವಿಸಿದರು. ಉಡುಪಿಯಲ್ಲಿ ಎಸ್.ಡಿ.ಎಂ. ಆಯುರ್ವೇದ ಆಸ್ಪತ್ರೆಯಲ್ಲಿ ರತ್ನಶ್ರೀ ಆರೋಗ್ಯಧಾಮವನ್ನು ಉದ್ಘಾಟಿಸಿದ ಬಳಿಕ ಸಚಿವರು ಧರ್ಮಸ್ಥಳಕ್ಕೆ ಭೇಟಿ ನೀಡಿ, ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಗೂ ಭೇಟಿ ನೀಡಿದ ಸಚಿವರು ಆಸ್ಪತ್ರೆಯಲ್ಲಿರುವ ವಿಶೇಷ ಸೌಲಭ್ಯಗಳು, ಶಿಸ್ತು, ಸ್ವಚ್ಛತೆ ಮತ್ತು ಸೌಜನ್ಯಪೂರ್ಣ ಸೇವೆ ಬಗ್ಯೆ ಮೆಚ್ಚುಗೆ ವ್ಯಕ್ತಪಡಿಸಿದರು. […]

ನಾರಾವಿ ಬಸದಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಭೇಟಿ

Wednesday, September 22nd, 2021
Veerendra Hegde

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬುಧವಾರ ನಾರಾವಿಯಲ್ಲಿರುವ ಭಗವಾನ್ ಶ್ರೀ ಧರ್ಮನಾಥ ಸ್ವಾಮಿಗೆ ಬಸದಿಗೆ ಹೋಗಿ ದೇವರ ದರ್ಶನ ಮಾಡಿದರು. ಬಳಿಕ ಬಸದಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಆರ್ಯಿಕಾ ಚಿಂತನಮತಿ ಮಾತಾಜಿ ಮತ್ತು ಕ್ಷಲ್ಲಿಕ ಸುಶ್ರೇಯಾಮತಿ ಮಾತಾಜಿ ಅವರ ದರ್ಶನ ಮಾಡಿ ಆಶೀರ್ವಾದ ಪಡೆದರು. ಚಾತುರ್ಮಾಸ್ಯ ಸಮಿತಿಯ ಎನ್. ಪ್ರೇಮ್ ಕುಮಾರ್, ಹೊಸ್ಮಾರು, ಶಿಶುಪಾಲ ಜೈನ್, ಪ್ರಕಾಶ್ ಕುಮಾರ್, ಶಶಿಕಾಂತ ಜೈನ್, ಸನ್ಮತ್ ಕುಮಾರ್, ನಾಗಕುಮಾರ ಶೆಟ್ಟಿ, ಜಯವರ್ಮ ಬುನ್ನು, ಅಶೋಕ ಕುಮಾರ್, ಒರಿಮಾರು, ರಾಜೇಂದ್ರ […]

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರಶಸ್ತಿ ಪ್ರದಾನ

Saturday, August 28th, 2021
Asia One

ಉಜಿರೆ: “ಏಷ್ಯಾ ವನ್” ಜಾಗತಿಕ ಪತ್ರಿಕೆಯು ಏಷ್ಯಾ ಖಂಡದ ಸಾಮಾಜಿಕ ನಾಯಕರನ್ನು ಗುರುತಿಸುವುದರೊಂದಿಗೆ ತನ್ನ 14ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಿನಾಂಕ: 27-08-2021 ಶುಕ್ರವಾರದಂದು ಆನ್‌ಲೈನ್ ಮೂಲಕ ಆಯೋಜಿಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪ್ರತಿಷ್ಠಿತ “ಏಷ್ಯಾ ಖಂಡದ ಶ್ರೇಷ್ಠ ನಾಯಕರು” ಎಂಬ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಬಿಗ್ ಬಾಸ್ ವಿಜೇತ ಪಾವಗಡ ಮಂಜು ಧರ್ಮಸ್ಥಳದಲ್ಲಿ

Tuesday, August 24th, 2021
pavagada-Manju

ಉಜಿರೆ : ಬಿಗ್ ಬಾಸ್ ವಿಜೇತ ಪಾವಗಡ ಮಂಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಅವರನ್ನು ಗೌರವಿಸಿ ಉಜ್ವಲ ಭವಿಷ್ಯವನ್ನು ಹಾರೈಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ತಂದೆ ಹನುಮಂತರಾಯಪ್ಪ, ತಾಯಿ ಲಕ್ಷ್ಮಮ್ಮ, ತಮ್ಮ ರಾಘವ ಮತ್ತು ತಂಗಿ ಮಾನಸ ಉಪಸ್ಥಿತರಿದ್ದರು. ಪಾವಗಡ ಮಂಜು ಕಲರ್ಸ್ ಕನ್ನಡದ ಮಜಾ ಭಾರತದಲ್ಲಿ ಕಲಾವಿದರಾಗಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ತಮ್ಮ ಕುಟುಂಬದವರೊಂದಿಗೆ […]