ಭಜನಾ ಸಂಸ್ಕೃತಿಯಿಂದ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯವಾಗುತ್ತದೆ : ಕಲ್ಯಾಣಪುರ ಮಠದ ಬಸವಣ್ಣಜ್ಜನವರು

Monday, September 30th, 2024
Basavannajja

ಉಜಿರೆ: ಆಡು ಮುಟ್ಟದ ಸೊಪ್ಪಿಲ್ಲ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾಡದ ಸೇವೆ ಇಲ್ಲ. ಗ್ರಾಮಾಭಿವೃದ್ಧಿ, ಆರೋಗ್ಯ, ಶಿಕ್ಷಣ, ದೇವಸ್ಥಾನಗಳ ಜೀರ್ಣೋದ್ಧಾರ, ಶುದ್ಧನೀರಿನ ಘಟಕಗಳು, ಕೆರೆಗಳ ಪುನಶ್ಚೇತನ, ಮಹಿಳಾ ಸಬಲೀಕರಣ, ಜನಜಾಗೃತಿ ವೇದಿಕೆ ಮೂಲಕ ವ್ಯಸನಮುಕ್ತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಇತ್ಯಾದಿ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ ಎಂದು ಕುಂದಗೋಳ ಕಲ್ಯಾಣಪುರ ಮಠದ ಪೂಜ್ಯ ಬಸವಣ್ಣಜ್ಜನವರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ 26ನೆ ವರ್ಷದ ಭಜನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಭಜನಾ ಸಂಸ್ಕೃತಿಯಿಂದ ನಮ್ಮ ಸನಾತನ […]

ಹೊಸ ವರ್ಷದ ಶುಭಾರಂಭ : ಧರ್ಮಸ್ಥಳದಲ್ಲಿ ಭಕ್ತರ ಗಡಣ

Wednesday, January 1st, 2020
ujire

ಉಜಿರೆ : ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವ ಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು. ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ ಮುಡಿ ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ […]