ಸೌಲಭ್ಯ ನಿವೇಶನದ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಮನವಿ

Tuesday, August 3rd, 2021
Veera-Shaiva

ಹುಬ್ಬಳ್ಳಿ : ಇಂದು ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಅವರಿಗೆ ನಾಗರಿಕ ಸೌಲಭ್ಯ ನಿವೇಶನದ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾದ ಗುರುರಾಜ ಹುನಸಿಮರದ ಹಾಗೂ ಉಳವಪ್ಪ ದಾಸನೂರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷ ಬಸನಗೌಡ ಪಾಟೀಲ, ಶ್ರೀಶೈಲ್ ಸುರೆಬಾನ, ಕಾಂಚನಗಂಗಾ ಅಣ್ಣಿಗೇರಿ, ವಿರುಪಾಕ್ಷಪ್ಪ ಸವಡಿ, ಕಾರ್ಯದರ್ಶಿ ಶಿವಶರಣ ಕಲಬಶೇಟ್ಟರ, ಶಶಿಶೇಖರ ಡಂಗನವರ, ಮೈಲಾರಿ ಉಪ್ಪಿನ, ಹರೀಶ ಹಳ್ಳಿಕೇರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ವರದಿ […]

ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Thursday, July 29th, 2021
Bommai

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು. ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ […]

ಕ್ಯಾಶ್‍ಬ್ಯಾಕ್ ಆಫರ್ : 1.08 ಲಕ್ಷ ರೂಪಾಯಿ ಕಳಕೊಂಡ ಮಹಿಳೆ

Saturday, June 19th, 2021
cash back

ಹುಬ್ಬಳ್ಳಿ : ಕ್ಯಾಶ್‍ಬ್ಯಾಕ್ ಹಣ ಜಮೆ ಮಾಡುತ್ತೇನೆ ಎಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯ ಒಟಿಪಿ  ಮಾಹಿತಿ ಪಡೆದು ಅಕ್ರಮವಾಗಿ 1.08 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡ ಘಟನೆ ಧಾರವಾಡದಿಂದ ವರದಿಯಾಗಿದೆ ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಮೂಲದ ಸ್ಮೀತಾ ಅವರಿಗೆ ಬರ್ಕಾ ಶರ್ಮಾ ಎಂಬ ಹೆಸರಿನ ಅಪರಿಚಿತ ಮಹಿಳೆಯೊಬ್ಬರು ಕರೆ ಮಾಡಿ. ನಾನು ಮುಂಬೈ ಕ್ಯಾಶ್ ಪೇ ಬ್ಯಾಂಕ್ ವಿಭಾಗದಿಂದ ಕರೆ ಮಾಡುತ್ತಿದ್ದೇನೆ. ನಿಮ್ಮ ಕ್ರೇಡಿಟ್ ಕಾರ್ಡ್ ಕ್ಯಾಶ್ ಬ್ಯಾಕ್ ಪಾಯಿಂಟ್ಸ್ […]

ಧಾರವಾಡ ಜಿಲ್ಲಾ ನ್ಯಾಯಾಧೀಶರಿಗೆ ಮತ್ತು ನ್ಯಾಯಾಲಯ ಸಿಬ್ಬಂದಿಗೆ ಲಸಿಕೆ ಅಭಿಯಾನ

Friday, May 28th, 2021
Vaccination

ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಾಲಯದ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡಲಾಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ ಅವರು ಲಸಿಕೀಕರಣದ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನ ಹಿರಿಯ ನ್ಯಾಯಾಧೀಶ ಹಾಗೂ ಸಿಜೆಎಂ ಸಂಜಯ ಗುಡಗುಡಿ, ವ್ಯೆದ್ಯಾಧಿಕಾರಿಗಳಾದ ಡಾ. ಕೆ.ಎನ್. ತನುಜಾ, ಡಾ.ಕವಿತಾ ಮತ್ತು ಅವರ ಸಿಬ್ಬಂದಿ ಹಾಜರಿದ್ದು ಅಭಿಯಾನವನ್ನು ಯಶಸ್ವಿಗೂಳಿಸಿದರು. 120ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ನ್ಯಾಯಾಧೀಶರು ಮೊದಲ ಡೋಸ್ ಲಸಿಕೆ ಪಡೆದರು.

2.5 ಎಕರೆ ಜಾಗದಲ್ಲಿ ಅರಣ್ಯೀಕರಣ : ಶೆಟ್ಟರ

Thursday, January 28th, 2021
Shetter

ವರದಿ : ಶಂಭು, ಮೆಗಾಮೀಡಿಯಾ ನ್ಯೂಸ್, ಹುಬ್ಬಳ್ಳಿ ಬ್ಯೂರೋ. ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ವೇಗವಾಗಿ ಬೆಳೆಯುತ್ತಿರುವ ನಗರಗಳಾಗಿದ್ದು, ಜನಸಂಖ್ಯೆಯ ಅನುಗುಣವಾಗಿ ಹಸಿರು ಜಾಗ ಅಭಿವೃದ್ಧಿಪಡಿಸುವುದು ಅವಶ್ಯಕವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ ಶೆಟ್ಟರ ಹೇಳಿದರು. ಹು-ಧಾ ಸ್ಮಾರ್ಟ್ ಸಿಟಿ ವತಿಯಿಂದ ನಗರದ ತೋಳನಕೆರೆ ಭಿವೃದ್ಧಿಪಡಿಸಲಾಗುತ್ತಿದ್ದು, 2.5 ಎಕರೆ ವಿಸ್ತೀರ್ಣತೆಯನ್ನು ಹೊಂದಿದ್ದು ಇದರಲ್ಲಿ 1/2 ಎಕರೆ ನಗರ ಅರಣ್ಯ ಮತ್ತು 1/2 ಎಕರೆ ಟ್ರೀಪಾರ್ಕ್ ಹಾಗೂ 1/2 ಎಕರೆ […]

ಗೋವಾ ಪ್ರವಾಸ ಹೋರಾಟ ಮಿನಿ ಬಸ್ ಅಪಘಾತ, 11 ಮಹಿಳೆಯರ ದುರ್ಮರಣ, ಸಾವಿನ ಸಂಖ್ಯೆ ಏರಿಕೆ

Friday, January 15th, 2021
Goa Tour

ಧಾರವಾಡ :  ದಾವಣಗೆರೆಯಿಂದ ಮುಂಜಾನೆ ಮೂರು ಗಂಟೆಗೆ ಹೊರಟಿದ್ದ ಮಿನಿಬಸ್ ಧಾರವಾಡ ಸಮೀಪ ಟಿಪ್ಪರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ 6 ಜನ ಸಾವನ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಐದು ಮಂದಿ ಅಸುನೀಗಿದರು. ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದಾವಣಗೆರೆಯ ವಿದ್ಯಾನಗರ, ಎಂಸಿಸಿ ಎ ಬ್ಲಾಕ್ ಮತ್ತು ಎಂಸಿಸಿ ಬಿ ಬ್ಲಾಕ್ ನಿವಾಸಿಯ ಕೆಲ ಮಹಿಳೆಯರು ಒಂದೆಡೆ ಸೇರಿ ಎಂಜಾಯ್ ಮಾಡಲು ಗೋವಾದ ಪಣಜಿಗೆ ಖಾಸಗಿ ಮಿನಿ ಬಸ್ವೊಂದನ್ನು ಬುಕ್ ಮಾಡಿ ಪ್ರವಾಸ  ಕೈಗೊಂಡಿದ್ದರು. ಇಂದು ಬೆಳಗ್ಗೆ ಸರಿಸುಮಾರು 3 ಗಂಟೆ […]

ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ

Sunday, September 6th, 2020
basavaraj

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ನಗರದಲ್ಲಿ ಮಹಾನಗರ ಪಾಲಿಕೆ ಅಡಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಹೇಳಿದರು. ನಗರದಲ್ಲಿ ನಡೆಯುತ್ತಿರುವ ವಿವಿದ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಗೋಕುಲ ಕೈಗಾರಿಕಾ ವಸಹಾತು ಪ್ರದೇಶದಲ್ಲಿ 18.5ಕೋಟಿ ವೆಚ್ಚದಲ್ಲಿ ಮುಖ್ಯರಸ್ತೆ, 8.5 ಕೋಟಿ ವೆಚ್ಚದಲ್ಲಿ ಉಪರಸ್ತೆಗಳನ್ನು ಕಾಂಕ್ರೀಟ್ ನಿಂದ ನಿರ್ಮಿಸಲಾಗುತ್ತಿದೆ. ಕಾಮಗಾರಿ ಪ್ರಗತಿ ಹಂತದಲ್ಲಿ ಇದ್ದು, ಅಕ್ಟೋಬರ್ ವೇಳೆಗೆ […]

ಧಾರವಾಡ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Tuesday, August 11th, 2020
karave

ಧಾರವಾಡ : ಜಿಲ್ಲೆಯ ಬೇಗೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಸಾವು ಧಾರವಾಡ ಜಿಲ್ಲೆ ಜನತೆಗೆ ಹೆಣ್ಣು ಮಕ್ಕಳನ್ನು ಕಾಪಾಡುವ ಭಯದ ವಾತಾವರಣ ಬಂದಿದೆ, ಆರೋಪಿಗೆ ಶೀಘ್ರವೇ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ನೇಹ ಬಳಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದೆ. ಅಪರಾಧಿಯನ್ನು ಮಾತ್ರ ಬಂಧಿಸಿದ್ದೀರಿ ಆದರೆ ಅಪರಾಧಿ ಬಶೀರ ನ ಸಂಬಂಧಿಕರು ಪೂಜಾಳಾ ಕುಟುಂಬಕ್ಕೆ ಜೀವ ಬೆದರಿಕೆ ಹಾಗೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. […]

ಹುಬ್ಬಳ್ಳಿ : 24ರ ನಂತರ ಲಾಕ್ ಡೌನ್ ಗೆ ಪ್ಲಾನ್

Tuesday, July 21st, 2020
hubballi

ಹುಬ್ಬಳ್ಳಿ : ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಲಾಕ್ ಡೌನ್ ಮಾಡಿದ್ರು ಸಹ ದಾರಿಗೆ ಬರದ ಕೋವಿಡ್ ಗೆ ಜಿಲ್ಲಾಡಳಿತ ತಲೆ ಕೆಡಿಸಿಕೊಂಡಿದೆ. ಅಲ್ಲದೆ ಮತ್ತೊಂದು ಸುತ್ತಿನ ಲಾಕ್ ಡೌನ್ ಮಾಡಲು ಈಗಾಗಲೇ ಸದ್ದಿಲ್ಲದೆ ಪ್ಲಾನ್ ಮಾಡಿದೆ. ಹೌದು…ರಾಜ್ಯದಲ್ಲಿ ನಿತ್ಯ ಕೊರೊನಾ ಹಾವಳಿ ಹೆಚ್ಚಾಗಿದ್ದು, ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ..ಈ ಹಿನ್ನೆಲೆ ಈಗಾಗಲೇ ಲಾಕ್ ಡೌನ್ ಘೋಷಣೆ ಸಹ ಮಾಡಿದೆ.ಆದ್ರೆ ಇಷ್ಟೆಲ್ಲಾ ಮಾಡಿದ್ರು ಸಹ ಕೊರೋನಾ ರಣಕೇಕೆ ಮಾತ್ರ ನಿಂತಿಲ್ಲ. […]

ಹುಬ್ಬಳ್ಳಿ : ಕೋರೊನಾ ನಿಯಂತ್ರಣಕ್ಕೆ ಸ್ವಯಂ ಸೇವಕರ ನೇಮಕಾತಿ

Monday, July 20th, 2020
corona warriors

ಹುಬ್ಬಳ್ಳಿ : ಕೊರೊನಾ ಮಹಾಮಾರಿ ತಡೆಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಹೊಸ ತಂತ್ರ ಕಂಡುಕೊಂಡಿದೆ. ನಗರದ ಯುವ ಹಾಗೂ ಉತ್ಸಾಹಿ ಸ್ವಯಂ ಸೇವಕರ ತಂಡ ಕಟ್ಟಿಕೊಂಡು ಕೋವಿಡ್-19 ನಿಯಂತ್ರಣಕ್ಕೆ ಮುಂದಾಗಿದೆ. ಸೋಂಕು ತಡೆ ಸಲುವಾಗಿ ಧಾರವಾಡ ಜಿಲ್ಲಾಡಳಿತ ಹಾಗೂ ಪಾಲಿಕೆಯೊಂದಿಗೆ ಕೈಜೋಡಿಸುವ ಸಲುವಾಗಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ಸೇವಕರ ತಂಡ ರಚಿಸಲಾಗುತ್ತಿದೆ. ಪಾಲಿಕೆಯ ಎಲ್ಲ ವಾರ್ಡ್ ಮಟ್ಟದ ಕಾರ್ಯಪಡೆಗಳನ್ನು ರಚಿಸಿ, ಜನರಲ್ಲಿ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಜೈವಿಕ ತ್ಯಾಜ್ಯ ವಿಲೇವಾರಿ ಕುರಿತು […]