ಕುಕ್ಕೆ ಸುಬ್ರಹ್ಮಣ್ಯದ ದುಡ್ಡಿನಲ್ಲಿ ನಾಲ್ಕು ವರ್ಷಗಳಿಂದ ಇನ್ನೋವಾ ಕಾರಿನಲ್ಲಿ ತಿರುಗುತ್ತಿದ್ದ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು

Tuesday, November 7th, 2023
kuuke-subrahmanya

ಮಂಗಳೂರು : ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಲ್ಕು ವರ್ಷಗಳ ಹಿಂದೆ ದೇವಸ್ಥಾನದ ಬಳಕೆಗೆಂದು ಖರೀದಿಸಿದ್ದ ಇನ್ನೋವಾ ಕ್ರಿಸ್ಟಾ ಕಾರನ್ನು ಬೆಂಗಳೂರಿನ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ದೇವಳದ ಖರ್ಚಿನಲ್ಲೇ ಬೆಂಗಳೂರಿನಲ್ಲಿ ಉಪಯೋಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ 2019ರಲ್ಲಿ ಹೊಸ ಇನ್ನೋವಾ ಕಾರನ್ನು ಖರೀದಿಸಲಾಗಿತ್ತು. ಆರಂಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರೇ ಈ ಕಾರನ್ನು ಬಳಕೆ ಮಾಡುತ್ತಿದ್ದರು. ಎರಡೇ ತಿಂಗಳಲ್ಲಿ ಈ ಕಾರು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ಬೆಂಗಳೂರಿನ ಇಲಾಖಾ ಆಯುಕ್ತರ ಕಚೇರಿಗೆ ಕಳುಹಿಸಿಕೊಡಲು ಸೂಚನೆ […]

ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗಲು ಅರ್ಜಿ ಆಹ್ವಾನ

Friday, June 12th, 2020
narahari-betta

ಮಂಗಳೂರು :  ದ.ಕ ಜಿಲ್ಲೆಯ ಪ್ರವರ್ಗ ‘ಬಿ’ ಮತ್ತು ‘ಸಿ’ ಗೆ ಸೇರಿದ ದೇವಸ್ಥಾನಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಜೂನ್ 30 ರಂದು ಸಂಜೆ 5.30ಗಂಟೆಯೊಳಗೆ ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಮಂಗಳೂರು ಇವರಿಗೆ ಸಲ್ಲಿಸಬೇಕು. ನಿಗಧಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ನಿಗಧಿತ ಅರ್ಜಿ ನಮೂನೆಯು ಸಹಾಯಕ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ […]

ಗಾಂಧಿ- 150 ಅಭಿಯಾನಕ್ಕೆ ಮಂಗಳೂರಿನಲ್ಲಿ ಸ್ವಾಗತ

Monday, October 15th, 2018
gandhi 150

ಮಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧಿ ಅಭಿಯಾನ- 150 ಜಾಥಾ ಸೋಮವಾರ ಮಂಗಳೂರಿಗೆ ಆಗಮಿಸಿತು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಟ್ಟ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತದ ಪರವಾಗಿ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಪ್ರಮೀಳಾ ಅವರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಾಂಧೀಜಿಯವರ ಸಂದೇಶಗಳು ಸರ್ವಕಾಲಕ್ಕೂ ಸಲ್ಲುವಂತದ್ದಾಗಿದೆ. ಈ ನಿಟ್ಟಿನಲ್ಲಿ ಇದನ್ನು ನಿರಂತರವಾಗಿ ಪಾಲಿಸುತ್ತಾ ಬರಬೇಕು ಎಂದು ಹೇಳಿದರು. ದಕ್ಷಿಣ […]