ಆರ್ ಅಶೋಕ್ ರಣತಂತ್ರ, ದೊಡ್ಡಬಳ್ಳಾಪುರ ನಗರಸಭೆ ಬಿಜೆಪಿ ವಶಕ್ಕೆ

Tuesday, October 26th, 2021
Doddaballapura

ದೊಡ್ಡಬಳ್ಳಾಪುರ  :  ಪ್ರತಿಷ್ಠಿತ ದೊಡ್ಡಬಳ್ಳಾಪುರ ನಗರಸಭೆಯನ್ನು ಕಂದಾಯ ಸಚಿವ ಆರ್ ಅಶೋಕ್ ನೇತೃತ್ವದಲ್ಲಿ, ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿ ಬಿಜೆಪಿ ತೆಕ್ಕೆಗೆ ತೆಗೆದುಕೊಂಡಿದೆ. ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಸುಧಾರಾಣಿ ಅಧ್ಯಕ್ಷರಾಗಿ, ಪರ್ಹಾನ್ ತಾಜ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ನಂತರ ಮಾತನಾಡಿದ ಸಚಿವ ಆರ್ ಅಶೋಕ್ “ದೊಡ್ಡಬಳ್ಳಾಪುರ ಪುರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇಲ್ಲಿ ಕಾಂಗ್ರೆಸ್ ಶಾಸಕರಿದ್ದರೂ ನಾವು ಅಧಿಕಾರ ಹಿಡಿದಿದ್ದೇವೆ. ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ಜಿಲ್ಲೆ ಬಿಜೆಪಿ ವಶವಾಗಲಿದೆ. ಸುಮಾರು ಒಂದು ತಿಂಗಳಿನಿಂದ ಹೊಂದಾಣಿಕೆಯ ಪ್ರಕ್ರಿಯೆಯನ್ನು […]

ವ್ಯಾಪಾರಿಗಳಿಂದ ದಿಢೀರ್ ಪ್ರತಿಭಟನೆ : ನಗರಸಭೆ ವಿರುದ್ಧ ಅಸಮಾಧಾನ

Thursday, February 13th, 2020
market-protest

ಮಡಿಕೇರಿ : ಮಡಿಕೇರಿಯ ಮಾರುಕಟ್ಟೆ ಆವರಣ ಅಶುಚಿತ್ವದಿಂದ ಕೂಡಿದ್ದು, ಮಾಂಸದ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಇದ್ದರೂ ನಗರಸಭೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆರೋಪಿಸಿ ಸಂತೆ ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು. ತರಕಾರಿ ಮತ್ತು ಮಾಂಸದ ಮಾರುಕಟ್ಟೆಗಳ ಅವ್ಯವಸ್ಥೆ ಹಾಗೂ ಅಶುಚಿತ್ವದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಮಾರುಕಟ್ಟೆ ಆವರಣದಲ್ಲಿ ನಗರಸಭೆಯ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಮೀನು ಮತ್ತು ಮಾಂಸ ಮಾರಾಟದ ಪ್ರದೇಶ ಅಭಿವೃದ್ಧಿ ಕಾಣದೆ ಅವೈಜ್ಞಾನಿಕ ವ್ಯವಸ್ಥೆಯಿಂದ ದುರ್ವಾಸನೆ ಬೀರುತ್ತಿದೆ […]

ಕಾಂಗ್ರೆಸ್​ಗೆ ಅಧಿಕಾರ ಸಿಗದಿದ್ದರೂ ಪರವಾಗಿಲ್ಲ..ಎಸ್​ಡಿಪಿಐ ಜೊತೆ ಮೈತ್ರಿಯಿಲ್ಲ: ಯು.ಟಿ‌.ಖಾದರ್

Tuesday, September 4th, 2018
u-t-kadher

ಮಂಗಳೂರು: ಉಳ್ಳಾಲ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಇಲ್ಲಿ ಎಸ್ಡಿಪಿಐ ಜೊತೆಗೆ ಮೈತ್ರಿ ಮಾಡುವುದಿಲ್ಲ ಎಂದು ಸಚಿವ ಯು.ಟಿ‌.ಖಾದರ್ ಹೇಳಿದ್ದಾರೆ. ಉಳ್ಳಾಲ ನಗರಸಭೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಅಧಿಕಾರ ಸಿಗದಿದ್ದರೂ ಪರವಾಗಿಲ್ಲ. ಎಸ್ಡಿಪಿಐ ಜೊತೆಗೆ ಮೈತ್ರಿ ಮಾಡುವುದಿಲ್ಲ ಎಂದರು. ಇತರೆಡೆಗಳಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಕ್ಕೆ ತಕ್ಕಂತೆ ನಿರ್ಧರಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು..ಪಟ್ಟಣ ಪಂಚಾಯತ್​ಗಳಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿ!

Monday, September 3rd, 2018
udupi

ಉಡುಪಿ: ಜಿಲ್ಲೆಯಲ್ಲಿ ನಡೆದ ನಾಲ್ಕು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಉಡುಪಿ ನಗರಸಭೆ, ಕಾರ್ಕಳ ಮತ್ತು ಕುಂದಾಪುರ ಪುರಸಭೆ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯತ್ಗಳಲ್ಲೂ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಮುಖ್ಯವಾಗಿ ಉಡುಪಿ ನಗರಸಭೆಯ 35 ವಾರ್ಡ್ಗಳ ಪೈಕಿ 31 ವಾರ್ಡ್ಗಳನ್ನು ಬಿಜೆಪಿ ಬಾಚಿಕೊಳ್ಳುವ ಮೂಲಕ ಕಾಂಗ್ರೆಸ್ ಕೈಯಿಂದ ನಗರಸಭೆಯನ್ನು ವಶಕ್ಕೆ ಪಡೆದಿದೆ. ಈ ಭಾಗದ ಪ್ರಭಾವಿ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಇದು ದೊಡ್ಡ ಮುಖಭಂಗ ಎಂದೇ ವಿಶ್ಲೇಷಿಸಲಾಗುತ್ತಿದೆ. […]

ನಗರಸಭೆ ಚುನಾವಣೆ: ಯು.ಟಿ.ಖಾದರ್‌ ಆಪ್ತನಿಗೆ ಸೋಲು..ಕಿಡಿಕೇಡಿಗಳಿಂದ ಕಲ್ಲು ತೂರಾಟ!

Monday, September 3rd, 2018
ullala-khader

ಮಂಗಳೂರು: ನಗರ ಸಭೆ ಚುನಾವಣಾ ಫ‌ಲಿತಾಂಶ ಪ್ರಕಟವಾಗಿದ್ದು , ವಿಜೇತ ಪಕ್ಷೇತರ ಅಭ್ಯರ್ಥಿ ಸೇರಿ ಹಲವರ ಅಂಗಡಿಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ನಡೆದಿದೆ. 19 ನೇ ವಾರ್ಡ್‌ನಲ್ಲಿ ಸಚಿವ ಯು.ಟಿ.ಖಾದರ್‌ ಅವರ ಆಪ್ತ, ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಉಸ್ಮಾನ್‌ ಕಲ್ಲಾಪು ಅವರು ಪಕ್ಷೇತರ ಅಭ್ಯರ್ಥಿ ಮುಶ್ತಾಕ್‌ ಎದುರು ಸೋಲು ಅನುಭವಿಸಿದ್ದಾರೆ. ಸೋಲಿನ ಬಳಿಕ ಕಲ್ಲಾಪುವಿನಲ್ಲಿ ಅಹಿತಕರ ಘಟನೆ ನಡೆದಿದ್ದು, ಕಿಡಿಕೇಡಿಗಳು ಅಂಗಡಿ ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು […]