ಕಾಂಗ್ರೆಸ್ ಅವಧಿಯಲ್ಲಿ ಆರಂಭಿಸಿದ ಕೆಲಸಗಳನ್ನೇ ಬಿಜೆಪಿ ಶಾಸಕರು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ : ವಿಪಕ್ಷ ನಾಯಕ

Monday, October 19th, 2020
Ravoof

ಮಂಗಳೂರು : ನಗರದ 8 ಮಾರುಕಟ್ಟೆಗಳಿಗೆ 2017ರಲ್ಲಿಯೇ ಟೆಂಡರ್ ಕರೆದು ಕಾರ್ಯಾದೇಶ ನೀಡಲಾಗಿತ್ತು ಅಳಕೆ ಮಾರುಕಟ್ಟೆ ಶಿಲಾನ್ಯಾಸ ಮಾತ್ರ ಹಿಂದಿನ ಅವಧಿಯಲ್ಲಿ ನಡೆದಿರುವುದು ಎಂಬುದಾಗಿ ಮಂಗಳೂರು ದಕ್ಷಿಣ ಶಾಸಕರು ನೀಡಿರುವ ಹೇಳಿಕೆ ಅಪ್ಪಟ್ಟ ಸುಳ್ಳು’’ ಎಂದು ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಅಬ್ದುಲ್ ರವೂಫ್ ಹೇಳಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರಾದವರು  ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡಬಾರದು ಅಳಕೆ ಮಾರುಕಟ್ಟೆ ಮಾತ್ರವಲ್ಲದೆ ಸುರತ್ಕಲ್, ಕಾವೂರು, ಉರ್ವಾ, ಜೆಪು, ಬಿಜೈ, ಕಂಕನಾಡಿ ಹಾಗೂ ಕದ್ರಿ ಸೇರಿ […]

ನಗರೋತ್ಥಾನ ಕಾಮಗಾರಿ: ತ್ವರಿತಗೊಳಿಸಲು ಸಚಿವರ ಸೂಚನೆ

Tuesday, March 10th, 2015
dc meeting

ಮಂಗಳೂರು : ಮುಖ್ಯಮಂತ್ರಿಗಳ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮ ನಗರೋತ್ಥಾನ ಯೋಜನೆ-2ರಡಿ ಜಿಲ್ಲೆಯ ಎಲ್ಲಾ ಪಟ್ಟಣ ಪ್ರದೇಶಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅರಣ್ಯ ಮತತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರೋತ್ಥಾನ ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡುತ್ತಿದ್ದರು. ಯೋಜನೆಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಆದರೆ ಜಿಲ್ಲೆಯಲ್ಲಿ ಕಾಮಗಾರಿಯ ನಿಗದಿತ ಕಾಲಾವಧಿ ಮುಗಿದಿದ್ದರೂ, ಹಲವು ಕಾಮಗಾರಿಗಳು ಇನ್ನೂ ಪ್ರಾರಂಭಗೊಂಡಿಲ್ಲ ಎಂದು ಅವರು […]