ಟೂತ್‌ಪೇಸ್ಟ್ ಎಂದು ಇಲಿ ಪಾಷಾಣದಲ್ಲಿ ಹಲ್ಲು ಉಜ್ಜಿದ ಮಹಿಳೆ ಸಾವು

Wednesday, September 1st, 2021
rat Poison

ಕಾರ್ಕಳ : ಮಹಿಳೆಯೊಬ್ಬರು ಟೂತ್‌ಪೇಸ್ಟ್ ಬದಲು ಇಲಿ ಪಾಷಾಣದಲ್ಲಿ ಹಲ್ಲು ಉಜ್ಜಿದ ಪರಿಣಾಮ ತೀವ್ರವಾಗಿ ಅಸ್ವಸ್ಥಗೊಂಡ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ  ಕಾರ್ಕಳದ ಕಾಬೆಟ್ಟುವಿನಲ್ಲಿ ನಡೆದಿದೆ. ಮೃತರನ್ನು ಕಲಾವತಿ(61) ಕಾರ್ಕಳ ಕಾಬೆಟ್ಟುವಿನ ನಿವಾಸಿ ಎಂದು ಗುರುತಿಸಲಾಗಿದೆ. ಇವರು ಆಗಸ್ಟ್ 20ರಂದು ಬೆಳಗ್ಗೆ ಮನೆಯಲ್ಲಿ ತಿಳಿಯದೇ ಟೂತ್‌ಪೇಸ್ಟ್ ಬದಲು ಇಲಿ ಪಾಷಾಣದಲ್ಲಿ ಹಲ್ಲು ಉಜ್ಜಿ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಸೆ.1ರಂದು ಬೆಳಿಗ್ಗೆ 7 ಗಂಟೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಮಾದಕ ವಸ್ತುಗಳ ಮಾರಾಟಗಾರರು ಹಾಗೂ ಡೀಲರ್‌ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Wednesday, June 26th, 2019
drug abuse

ಮಂಗಳೂರು : ಮಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಪುರಭವನದಲ್ಲಿ ಬುಧವಾರ  ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ಹಾಗೂ ಕಳ್ಳಸಾಗಾಟ ವಿರೋಧಿ ದಿನಾಚರಣೆ ಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಉದ್ಘಾಟಿಸಿದರು . ಮಾದಕ ವಸ್ತುಗಳ ಮಾರಾಟಗಾರರು ಹಾಗೂ ಡೀಲರ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು. ಯಾವುದೇ ರೀತಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುವವರು ಮತ್ತು ಸೇವಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸನ್ನದ್ಧವಾಗಿದೆ ಎಂದು ಪಾಟೀಲ್ ಎಚ್ಚರಿಸಿದ್ದಾರೆ. ದೇರಳಕಟ್ಟೆ ಕೆ.ಎಸ್. […]

ಪ್ರಮುಖ ಪ್ರಕರಣಗಳನ್ನು ಬಯಲಿಗೆಳೆಯಲು ಸಾರ್ವಜನಿಕರ ಸಹಕಾರ ಸ್ಮರಣೀಯ : ಚಂದ್ರಶೇಖರ್

Monday, June 12th, 2017
CPC

ಮಂಗಳೂರು : ನಿರ್ಗಮನ ಕಮಿಷನರ್ ಚಂದ್ರಶೇಖರ್  ಅಧಿಕಾರ ಹಸ್ತಾಂತರಕ್ಕೆ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಂಗಳೂರು ನನಗೆ ಅಪರಿಚಿತ ಪ್ರದೇಶವಾದರೂ ಕಳೆದ ಒಂದುವರೆ ವರ್ಷದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತನಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡಿದ್ದೇನೆ. ಈ ಸಮಯದಲ್ಲಿ ಅನೇಕ ಮಂದಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸಿದ್ದಾರೆ ಎಂದು ಹೇಳಿದರು. ಅಧಿಕಾರ ಹಸ್ತಾಂತರಕ್ಕೆ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಸೇವೆ ಸಲ್ಲಿಸಿರುವುದು ನನ್ನ ವೃತ್ತಿ ಜೀವನದ ಸ್ಮರಣೀಯ ಮತ್ತು ಸಂತೋಷದ ಸಂಗತಿಯಾಗಿದೆ. ಕೆಲವು ಪ್ರಮುಖ ಪ್ರಕರಣಗಳನ್ನು ಬಯಲಿಗೆಳೆಯಲು ಮಾಧ್ಯಮ […]

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ

Tuesday, January 25th, 2011
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಾರಿಗೆ ಇಲಾಖೆ, ಮಂಗಳೂರು ನಗರ ಪೊಲೀಸ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಆಯೋಜಿಸಿದ 22ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು.  ಕಾರ್ಯಕ್ರಮವನ್ನು ಮಾಹೆ ವಿಶ್ವ ವಿದ್ಯಾ ನಿಲಯದ ವಿಶ್ರಾಂತ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ  ಉದ್ಘಾಟಿಸಿದರು. ಬಳಿಕ ಮಾತನಾಡಿದ ಕುಲಪತಿಗಳಾದ ಡಾ.ಬಿ.ಎಂ.ಹೆಗ್ಡೆ  ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸುವುದರಿಂದ ಅಫಘಾತಗಳನ್ನು ಕಡಿಮೆ ಮಾಡಬಹುದು, ವಿದ್ಯಾರ್ಥಿಗಳಿಗೆ  ಈ  ಬಗ್ಗೆ  ಶಾಲೆಯಲ್ಲಿ ಶಿಕ್ಷಣ ನೀಡುವುದರಿಂದಲೂ ಅಫಘಾತಗಳ ಬಗ್ಗೆ ಹೆಚ್ಚಿನ ಅರಿವು […]