Blog Archive

ದೇಶೀಯ ವಸ್ತುಗಳನ್ನು ಮಾರ್ಕೆಟಿಂಗ್ ಮಾಡುವುದೂ ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ಒಂದು : ನರೇಂದ್ರ ಮೋದಿ

Saturday, August 15th, 2020
Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದ ಬಳಿಕ ಐತಿಹಾಸಿಕ ಕೆಂಪುಕೋಟೆಯಲ್ಲಿ ಆಗಸ್ಟ್ 15 ರ ಶನಿವಾರ ಧ್ವಜಾರೋಹಣ ನೆರವೇರಿಸಿದರು. ಬಳಿಕ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ನೆನೆಯುವ ದಿನ. ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ […]

ಅಯೋಧ್ಯೆ ರಾಮ ಮಂದಿರಕ್ಕೆ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ

Wednesday, August 5th, 2020
Ayodhya

ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಬುಧವಾರ ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರದಾನಮಂತ್ರಿ ನರೇಂದ್ರ ಮೋದಿಯವರು ಹಸ್ತದಿಂದ ಭೂಮಿಪೂಜೆ ನೆರವೇರಲಿದೆ. ಇದರೊಂದಿಗೆ ಪ್ರಧಾನಿಯವರು ತಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ರಾಮಮಂದಿರ ನಿರ್ಮಾಣ ವಾಗ್ಧಾನವನ್ನು ಸಕಾರಗೊಳಿಸಲಿದ್ದಾರೆ. ಮಧ್ಯಾಹ್ನ 12.44.08 ಗಂಟೆಯಿಂದ 12.44.40 ಗಂಟೆಯ 32 ಸೆಕೆಂಡುಗಳ ಶುಭಮುಹೂರ್ತ ನಿಗದಿಯಾಗಿದ್ದು, ಇಷ್ಟು ಅವಧಿಯಲ್ಲಿಯೇ ಮೋದಿಯವರು ಬೆಳ್ಳಿ ಇಟ್ಟಿಗೆ ಇರಿಸಿ ಸಾಂಕೇತಿಕ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಈ ಬೆಳ್ಳಿ ಇಟ್ಟಿಗೆ ಸಾಂಕೇತಿಕವಾದ ಕಾರಣ ಬಳಿಕ, ಅದನ್ನು ಭೂಮಿಪೂಜಾ […]

ಮೋದಿ ಸರ್ಕಾರದಿಂದ ಬಡವರ ಹಿತರಕ್ಷಣೆ – ನಳಿನ್‌ಕುಮಾರ್ ಕಟೀಲ್ ಹೇಳಿಕೆ

Tuesday, June 30th, 2020
Nalin Kumar Kateel

ಮಂಗಳೂರು : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ನವಂಬರ್ ಅಂತ್ಯದವರೆಗೆ ವಿಸ್ತರಿಸುವ ಮೂಲಕ  ಕರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಬಡವರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಮಹತ್ವದ ನೆರವು ಒದಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ದೇಶದ ಆರ್ಥಿಕ ಚಟುವಟಿಕೆ ಬಲಪಡಿಸಲು 20 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು ಇದೀಗ ಹಬ್ಬಗಳನ್ನು ಗಮನದಲ್ಲಿರಿಸಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಹಾಗೂ ಇತರ ಯೋಜನೆಗಳನ್ನು ದೀಪಾವಳಿ […]

ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಕೆ

Tuesday, April 14th, 2020
Narendra-modi

ನವದೆಹಲಿ: ದೇಶದಾದ್ಯಂತ ಕೊರೋನಾ ಹತ್ತಿಕ್ಕಲು ಮೇ 3ರವರೆಗೂ ಲಾಕ್’ಡೌನ್ ಮುಂದುವರಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ. ಮಹಾಮಾರಿ ಕೊರೋನಾ ವೈರಸ್ ನಿಗ್ರಹಕ್ಕಾಗಿ ಮಾರ್ಚ್ 24 ರಂದು ಘೋಷಣೆ ಮಾಡಿದ್ದ ಸುದೀರ್ಘ 21 ದಿನಗಳ ಭಾರತ ಲಾಕ್ ಡೌನ್ ಮಂಗಳವಾರ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಇಂದು ಜನತೆಯನ್ನುದ್ದೇಶಿಸಿ ಮಾತನಾಡಿದ  ಪ್ರಧಾನಿ ಮೋದಿಯವರು, ನಿಮ್ಮ ಸಹಕಾರದಿಂದ ಕೊರೋನಾ ವೈರಸ್ ಒಂದಿಷ್ಟು ಮಟ್ಟಿಗೆ ನಿಯಂತ್ರಣಕ್ಕೆ ಬರಲು ಅನುಕೂಲವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ […]

21 ದಿನಗಳ ಕಾಲ ಮನೆಯಲ್ಲೇ ಇರಿ, ಇಲ್ಲದಿದ್ದಲ್ಲಿ ಭಾರತ 21 ವರ್ಷಗಳ ಕಾಲ ಹಿಂದಕ್ಕೆ ಹೋಗುತ್ತದೆ : ಪ್ರಧಾನಿ

Tuesday, March 24th, 2020
Modi

ನವದೆಹಲಿ:  ಕೊರೋನಾ ವೈರಸ್ ಭಾರತದಲ್ಲಿ ನಿಯಂತ್ರಣ ಮೀರುತ್ತಿದ್ದು ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತನ್ನ ಭಾಷಣದಲ್ಲಿ ಹೇಳಿದ್ದಾರೆ. ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ವೈರಸ್ ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು. ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ […]

ಕೋವಿಡ್-19 ವೈರಸ್ ಕಳವಳ : ಇಂದು ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

Thursday, March 19th, 2020
modi

ನವದೆಹಲಿ : ಕೋವಿಡ್-19 ಭಾರತದಲ್ಲಿ ತನ್ನ ಕಬಂಧಬಾಹುವನ್ನು ಚಾಚುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕುರಿತು ಪ್ರಧಾನಿ ಕಾರ್ಯಾಲಯ ಮಾಹಿತಿ ನೀಡಿದ್ದು ದೇಶದ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕೆಗಳು ಸೇರಿದಂತೆ ಹಲವಾರು ವಿಚಾರಗಳನ್ನು ಈ ಸಂದರ್ಭದಲ್ಲಿ ಪ್ರಸ್ತಾಪಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ತಜ್ಞರು ಮತ್ತು ವೈದ್ಯಾಧಿಕಾರಿಗಳ ಜೊತೆಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದು, ಸೋಂಕು ತಡೆಗಟ್ಟುವ ಮಾರ್ಗೋಪಾಯಗಳು, ಹಾಗೂ ಜನರು ತೆಗೆದುಕೊಳ್ಳಬೇಕಾದ ಮುನ್ನೇಚ್ಚರಿಕಾ ಕ್ರಮಗಳ […]

ವಾರಣಾಸಿಗೆ ಭೇಟಿ ನೀಡಿ ಕೈ ಗಾಡಿ ಎಳೆಯೋ ವ್ಯಕ್ತಿಯನ್ನು ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

Tuesday, February 18th, 2020
varanasi

ಉತ್ತರಪ್ರದೇಶ : ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಗೆ ಒಂದು ದಿನದ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗಾಡಿ ತಳ್ಳುವ ವ್ಯಕ್ತಿ ಮಂಗಲ್ ಕೇವಾಟ್ ಅವರನ್ನು ಭೇಟಿಯಾಗಿದ್ದಾರೆ. ಕೇವಾಟ್ ತಮ್ಮ ಮಗಳ ಮದುವೆಯ ಆಹ್ವಾನ ಪತ್ರಿಕೆಯನ್ನು ಪ್ರಧಾನಿಗೆ ಕಳುಹಿಸಿಕೊಟ್ಟಿದ್ದ ಹಿನ್ನೆಲೆಯಲ್ಲಿ ಭೇಟಿಯಾಗಿರುವುದಾಗಿ ವರದಿ ತಿಳಿಸಿದೆ. ಮಂಗಲ್ ಕೇವಾಟ್ ಅವರ ಆರೋಗ್ಯ ಹಾಗೂ ಕುಟುಂಬದ ಬಗ್ಗೆ ಕುಶಲೋಪರಿ ವಿಚಾರಿಸಿದ ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ್ ಅಭಿಯಾನಕ್ಕೆ ಕೇವಾಟ್ ನೀಡಿದ ಕೊಡುಗೆ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ವರದಿ […]

ನರೇಂದ್ರ ಮೋದಿ ಹುಟ್ಟುಹಬ್ಬದಿನದಂದು ಸರ್ದಾರ್ ಸರೋವರ ಆಣೆಕಟ್ಟು ವೀಕ್ಷಣೆ

Tuesday, September 17th, 2019
modi

ಅಹಮದಾಬಾದ್ :  ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ. ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದು, ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಅವರು ಪ್ರಥಮ ಪೂರ್ಣವೈಭವ ವೀಕ್ಷಿಸಿದ್ದಾರೆ. 1961, ಏಪ್ರಿಲ್‌ 5ರಂದು ಸರ್ದಾರ್‌ ಸರೋವರ ಅಣೆಕಟ್ಟೆ ನಿರ್ಮಾಣಕ್ಕೆ ಅಂದಿನ ಪ್ರಧಾನಿ […]

ಚಂದ್ರಯಾನ-2 ಚಂದ್ರನ ಅಂಗಳದಲ್ಲಿ ಲ್ಯಾಂಡರ್ ಇಳಿಯುವುದನ್ನು ನೋಡಲು ಕುತೂಹಲ : ನರೇಂದ್ರ ಮೋದಿ

Friday, September 6th, 2019
modi

ನವದೆಹಲಿ :ಚಂದ್ರನ ಅಂಗಳದ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 2 ನೌಕೆಯ ವಿಕ್ರಮ್ ಲ್ಯಾಂಡರ್ ಇಳಿಯಲು ಕೆಲವೇ ಗಂಟೆಗಳು ಬಾಕಿ ಇದ್ದು, ಇಸ್ರೋದ ಐತಿಹಾಸಿಕ ಸಾಧನೆಯ ಈ ವಿಶೇಷ ಕ್ಷಣಗಳನ್ನು ಜನರು ಕಣ್ತುಂಬಿಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ. ಚಂದ್ರನ ಮೇಲೆ ಲ್ಯಾಂಡರ್ ಇಳಿಯುವುದನ್ನು ಬೆಂಗಳೂರಿನ ಇಸ್ರೋ ಕೇಂದ್ರದಲ್ಲಿ ವೀಕ್ಷಿಸಲು ತುಂಬಾ ಕುತೂಹಲಿಯಾಗಿದ್ದೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಇಸ್ರೋದ ಈ ಐತಿಹಾಸಿಕ ಸಾಧನೆಯ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ನಾನು ತುಂಬಾ ಕಾತುರನಾಗಿದ್ದೇನೆ ಎಂದು ಟ್ವೀಟ್ […]

ನರೇಂದ್ರ ಮೋದಿ ಸಹೋದರ ಸೋಮಬಾಯಿ ಮೋದಿ ಮಂಗಳೂರಲ್ಲಿ

Tuesday, July 9th, 2019
Somabai

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಬಾಯಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸೋಮಬಾಯಿ ಮೋದಿ, ದೇವಸ್ಥಾನ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅದರಂತೆ ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ. ಧರ್ಮಸ್ಥಳಕ್ಕೆ ಹಾಗೂ ಇತರ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಮಾತ್ರ ಜಿಲ್ಲೆಗೆ ಆಗಮಿಸಿದ್ದೇನೆ. ಇದರಲ್ಲಿ […]