ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ರಕ್ತದಾನ ಶಿಬಿರ
Monday, September 17th, 2018
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 64ನೇ ಹುಟ್ಟುಹಬ್ಬ ಪ್ರಯುಕ್ತ ಇಂದು ಬೆಳ್ತಂಗಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಬೆಟ್ಟು ಹಾಗೂ ಕೆ.ಎಂ ಸಿ ಆಸ್ಪತ್ರೆ ಇವರ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಬೆಳ್ತಂಗಡಿಯ ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮೋದಿ ಅಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಶಿಬಿರದ ಉದ್ಘಾಟನೆಯನ್ನು ವಸಂತ ಗೌಡ ಕಲ್ಲಾಜೆ ನೆರವೇರಿಸಿದ್ದು, ಕಾರ್ಯಕ್ರಮ ಅಧ್ಯಕ್ಷತೆಯನ್ನು ಶ್ರಿಕಾಂತ್ ಇಂದಬೆಟ್ಟು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]