ಭಾರತದಲ್ಲಿ ಮಹಿಳೆಗೆ ದೇವತೆಯ ಸ್ಥಾನ: ನಳಿನ್ ಕುಮಾರ್ ಕಟೀಲ್

Tuesday, March 8th, 2022
Women's Day

ಮಂಗಳೂರು : ಮಹಿಳೆಗೆ ದೇವತೆಯ ಸ್ಥಾನ ನೀಡಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ, ಹೆಣ್ಣನ್ನು ಮಾತೃ ಸ್ವರೂಪಿಯಾಗಿ ಕಾಣುವ ಈ ದೇಶದಲ್ಲಿ ಅವಳಿಗೆ ಸ್ವಾತಂತ್ರ್ಯದೊಂದಿಗೆ ಸಮಾನತೆಗೂ ಹೆಚ್ಚಿನ ಗೌರವವನ್ನು ನೀಡಲಾಗಿದೆ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಅಭಿಪ್ರಾಯಪಟ್ಟರು. ಅವರು ಮಾ.8ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಹಿಳಾ ಸಬಲೀಕರಣಕ್ಕೆ ದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ, ಆ ಮೂಲಕ ಉತ್ತಮ ಸಮಾಜ […]

ನಳಿನ್ ಕುಮಾರ್ ಕಟೀಲ್ ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು, ಅವರು ಮತ್ತೆ ಮರಳಿ ಕಾಂಗ್ರೆಸ್​ ಪಕ್ಷಕ್ಕೆ ಬರಲಿ

Tuesday, December 7th, 2021
Khader

ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು‌ ಕಾಂಗ್ರೆಸ್ ಕಾರ್ಯಕರ್ತರಾಗಿದ್ದರು. ಮತ್ತೆ ಅವರು ಕಾಂಗ್ರೆಸ್ಗೆ ಬರಲಿ ಎಂದು ಮಾಜಿ ಸಚಿವ ಯು ಟಿ ಖಾದರ್ ಅಹ್ವಾನ ನೀಡಿದ್ದಾರೆ ಖಾದರ್ ಮತ್ತು ರಮಾನಾಥ ರೈ ಹೊರತುಪಡಿಸಿ ಉಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸಿ ಎಂದು ಕರೆ ನೀಡಿದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಮೊದಲು ಕಾಂಗ್ರೆಸ್ […]

ಕಲ್ಲೇಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ

Monday, December 6th, 2021
BJP-MLC

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, “ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದವರು. ಧಾರ್ಮಿಕ ದತ್ತಿ ಇಲಾಖೆಗೆ ಕೋಟ ಮಂತ್ರಿಯಾದಾಗ ಹಳ್ಳಿ ಹಳ್ಳಿಯ ಸಣ್ಣಪುಟ್ಟ ದೇವಸ್ಥಾನಗಳಿಗೂ ಅನುದಾನ ನೀಡಿದರು. ಸಾಮೂಹಿಕ ವಿವಾಹ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

Friday, October 8th, 2021
Mangaluru Dasara

ಮಂಗಳೂರು  :  ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅದ್ಧೂರಿ ಚಾಲನೆ ನೀಡಿದರು. ಅಕ್ಟೋಬರ್ 7 ರಿಂದ  16ರವರೆಗೆ ʼನಮ್ಮ ದಸರಾ – ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯದಡಿ ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ದೇವಳದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ದೇವರ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು. ಅ.16ರಂದು ನವರಾತ್ರಿ ಮಹೋತ್ಸವ ಸಂಪನ್ನಗೊಂಡು ಶ್ರೀ ಶಾರದಾ ಮಾತೆ, […]

ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

Wednesday, September 15th, 2021
ಕೆಪಿಟಿ ಜಂಕ್ಷನ್ ಬಳಿ ಹೆದ್ದಾರಿ ಓವರ್ ಪಾಸ್ ನಿರ್ಮಾಣ

ಮಂಗಳೂರು  : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಪಿಟಿ ಜಂಕ್ಷನ್ ಬಳಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅನುಮೋದನೆ ನೀಡಿದ್ದು, ಅಂದಾಜು ರೂಪಾಯಿ 34.60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಕಾಮಗಾರಿಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು. ಕೆಪಿಟಿ ಜಂಕ್ಷನ್ ನಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿರುವ ಈ ಕಾಮಗಾರಿಗೆ ಅನುಮೋದನೆ ನೀಡಿದ ಕೇಂದ್ರ ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರಿಗೆ ದಕ್ಷಿಣ ಕನ್ನಡ ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಇವರು […]

ಕುದ್ರೋಳಿಯಲ್ಲಿ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿ

Monday, August 23rd, 2021
Narayanaguru

ಮಂಗಳೂರು  : ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ,ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ […]

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

Wednesday, August 4th, 2021
nalin-Kumar-Kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಬಗ್ಗೆ. 2. ಹಾಸನ ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪೆನಿಯನ್ನು […]

ಕರಾವಳಿಗೆ ಮೂರು ಮಂತ್ರಿ ಸ್ಥಾನ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಾಧ್ಯತೆ

Friday, July 30th, 2021
Yedyurappa

ಬೆಂಗಳೂರು : ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋ ಬಳಿಕ ಮೊದಲ ಬಾರಿ ಅಸಮಾಧಾನ ಹೊರಹಾಕಿದ್ದು. ಇದ್ದರಿಂದ ರಾಜ್ಯಾಧ್ಯಕ್ಷರ ಸ್ಥಾನ ಬದಲಾಗುವ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೆಲಸಮಾಡುತ್ತಿಲ್ಲ. ಪಕ್ಷ ಬಲವರ್ಧನೆಗೆ ನಾನೇ ವಾರಕ್ಕೊಂದು ಬಾರಿ ರಾಜ್ಯದ ಪ್ರತೀ ಜಿಲ್ಲೆಗಳಲ್ಲಿ ಸಂಚರಿಸಿ, ಮುಂದಿನ ಚುನಾವಣೆಯಲ್ಲಿ ಪಕ್ಷ ಗೆಲ್ಲಲು ಶ್ರಮವಹಿಸುವುದಾಗಿ ಹೇಳಿದ್ದಾರೆ. ರಾಜ್ಯಾಧ್ಯಕ್ಷರನ್ನಾಗಿ ಪ್ರಭಲ ಲಿಂಗಾಯತ ನಾಯಕನನ್ನು ನೇಮಿಸುವ ಚಿಂತನೆಯಲ್ಲಿ ಯಡಿಯೂರಪ್ಪ ಬಣ ಸಜ್ಜಾಗಿದೆ. ಆ ಮೂಲಕ […]

ಮುಂದಿನ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೆಸರು

Monday, July 26th, 2021
Nalin-Kumar-Kateel

ಮಂಗಳೂರು: ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ನಿನ್ನೆ ರಾತ್ರೋ ರಾತ್ರಿ ಮಂಗಳೂರಿನಿಂದ ದೆಹಲಿಗೆ ತೆರಳಿದ್ದಾರೆ.  ಈ ಬೆಳವಣಿಗೆ ರಾಜಕೀಯದಲ್ಲಿ ಕುತೂಹಲ ಮೂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗುವ ಮುಖಂಡರ ಪಟ್ಟಿಯಲ್ಲಿ ನಳಿನ್ ಕುಮಾರ್ ಕಟೀಲ್ ಹೆಸರು ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ ಬಳಿಕ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ಹೆಚ್ಚುತ್ತಿದ್ದಂತೆ, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಮಹತ್ವ ಪಡೆದಿದೆ. ಹೈಕಮಾಂಡ್‌ ಬಳಿಯ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ನಳಿನ್‌ ಹೆಸರು ಸೇರ್ಪಡೆಯಾಗಿರುವುದು ಹೊಸ ಬೆಳವಣಿಗೆಯಾಗಿದೆ. ಪುತ್ತೂರಿನಲ್ಲಿರುವ […]

ರಾಜಕೀಯದ ದುರುದ್ಧೇಶದಿಂದ ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ವೈರಲ್ ಮಾಡಿದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ : ಶಾಸಕ ವೇದವ್ಯಾಸ್ ಕಾಮತ್

Tuesday, July 20th, 2021
Vedavyas Kamath

ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. […]