Blog Archive

ಅನರ್ಹ ಶಾಸಕರಿಗೆ‌ ಟಿಕೆಟ್ ನೀಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ : ನಳಿನ್ ಕುಮಾರ್​ ಕಟೀಲ್

Wednesday, November 13th, 2019
Nalin-Kumar

ಬೆಂಗಳೂರು : ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಬಿಜೆಪಿ ಸ್ವಾಗತಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅನರ್ಹ ಶಾಸಕರಿಗೆ‌ ಟಿಕೆಟ್ ನೀಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ 17 ಶಾಸಕರ ಅನರ್ಹತೆಯ ವಿವಾದ ನ್ಯಾಯಾಲಯದ ಮುಂದೆ ಇತ್ತು. ಮಾಜಿ ಸಭಾಧ್ಯಕ್ಷರ ತೀರ್ಮಾನವನ್ನ ನ್ಯಾಯಾಲಯ ಎತ್ತಿ‌ಹಿಡಿದಿದೆ. ಜೊತೆಗೆ ಬರುವ ಚುನಾವಣೆಯಲ್ಲಿ ಸ್ಪರ್ಧೆಗೂ ಅವಕಾಶ ಕೊಟ್ಟಿದೆ. ನ್ಯಾಯಾಲಯದ […]

ಮನಪಾ ಚುನಾವಣೆ : ಮತದಾನ ಆರಂಭ

Tuesday, November 12th, 2019
nalin-kumar

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್ ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಲೇಡಿಹಿಲ್ ಸಂತ ಅಲೋಶಿಯಸ್ ಶಾಲೆಯಲ್ಲಿ ಮತದಾನ ಮಾಡಿದರು. ನಂತರ ಮಾತನಾಡಿದ ನಳಿನ್, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ನಲ್ಲಿ ಒಳಜಗಳ ನಡೆದಿದ್ದು, ಇದು ಬಿಜೆಪಿಗೆ […]

ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳೂರು ಬಿಟ್ಟು ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ

Friday, October 18th, 2019
Siddaramaiah

ಮಂಗಳೂರು :  ನಳಿನ್ ಕುಮಾರ್ ಕಟೀಲ್ ಅವರ ಕರ್ನಾಟಕದಲ್ಲಿ 34 ಜಿಲ್ಲೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಳಿನ್ ಕುಮಾರ್ ಅವರಿಗೆ ರಾಜ್ಯ ಬಗ್ಗೆ ಏನೂ ಗೊತ್ತಿಲ್ಲ, ಎಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತ ಸಿದ್ದರಾಮಯ್ಯ ಹೇಳಿದರು. ನಳಿನ್ ಅವರಿಗೆ ಮಂಗಳೂರು ಮಾತ್ರ ಗೊತ್ತು, ಮಂಗಳೂರು ಬಿಟ್ಟು ಅವರಿಗೆ ಏನೂ ಗೊತ್ತಿಲ್ಲ, ಅವರಿಗೆ ಕನಿಷ್ಟ ಜ್ಞಾನ ಕೂಡ ಇಲ್ಲ ಎಂದು ಹೇಳಿಕೆ ತಿಳಿಸಿದ್ದಾರೆ. ನಂತರ ಮಾತನಾಡಿದ ಅವರು ಕಾವೇರಿ ಅತಿಥಿ ಗೃಹವನ್ನು ನಾನು ಕೇಳಿದ್ದೇನೆ ಅದು ನೀಡುವುದು […]

ಬಸನಗೌಡ ಪಾಟೀಲ್ ಯತ್ನಾಳ್‍ಗೆ ಖಡಕ್ ಎಚ್ಚರಿಕೆ ನೀಡಿದ ನಳಿನ್ ಕುಮಾರ್ ಕಟೀಲ್

Thursday, October 17th, 2019
nalin

ಯಾದಗಿರಿ : ವಿವರಣೆ ಕೇಳಿದರೆ ಉತ್ತರ ಕೊಡುವುದು ಜವಾಬ್ದಾರಿಯಾಗುತ್ತದೆ. ಉತ್ತರ ಕೊಡದೆ ಹೋದರೆ ಅದು ಅಹಂಕಾರವಾಗುತ್ತದೆ. ಪಕ್ಷಕ್ಕೆ ಅದರದ್ದೇ ಆದ ನೀತಿ, ಚೌಕಟ್ಟಿದೆ. ಎಷ್ಟೇ ದೊಡ್ಡ ವ್ಯಕ್ತಿ ಆದರೂ ಅವರು ಪಕ್ಷಕ್ಕೆ ಸಾಮಾನ್ಯ ಕಾರ್ಯಕರ್ತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಕ್ಷದಿಂದ ನೀಡಿದ ಶೋಕಾಸ್ ನೋಟಿಸ್‍ಗೆ ಬಸನಗೌಡ ಪಾಟೀಲ್ ಯತ್ನಾಳ್ ಉತ್ತರ ನೀಡದ ಹಿನ್ನೆಲೆ ಯಾದಗಿರಿಯ ಸರ್ಕಿಟ್ ಹೌಸ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಪಕ್ಷದಿಂದ […]

ಖಜಾನೆ ಭರ್ತಿ ಮಾಡುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ : ನಳಿನ್ ಕುಮಾರ್ ಕಟೀಲ್

Saturday, October 5th, 2019
nalin-kumar-kateel

ಬೆಂಗಳೂರು : ರಾಜ್ಯದ ಬೊಕ್ಕಸ ಖಾಲಿಯಾಗಿಲ್ಲ ಬದಲಾಗಿ ಲೂಟಿಯಾಗಿದೆ ಅದನ್ನು ಭರ್ತಿ ಮಾಡುವ ಕೆಲಸ ಯಡಿಯೂರಪ್ಪ ಮಾಡುತ್ತಿದ್ದಾರೆ ನಮ್ಮನ್ನು ಟೀಕಿಸುವ ಮೊದಲ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿದ್ದೀರಾ ಎನ್ನುವುದನ್ನು ಒಮ್ಮೆ ನೋಡಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ. ಕಳದ ವರ್ಷ ಕೊಡಗಿನ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವುದಾಗಿ ಕುಮಾರಸ್ವಾಮಿ ಅಂದಿದ್ರು ಪ್ರತಿ ಮನೆ ಕಟ್ಟಲು 97 ಸಾವಿರ ಕೊಡುತ್ತೇನೆ ಅಂದಿದ್ದರು ಆದರೆ ಇನ್ನೂ ಕೊಡಗಿನಲ್ಲಿ ಮನೆ ಕಟ್ಟಿಸಿಕೊಟ್ಟಿಲ್ಲ ಆದರೆ […]

ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ, ಭರವಸೆ ನೀಡಿದ ನಳಿನ್ ಕುಮಾರ್ ಕಟೀಲ್

Thursday, October 3rd, 2019
nalin-kumar

ಬೆಂಗಳೂರು : ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ಅಮಿತ್ ಶಾ, ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚೆ ನಡೆಸುತ್ತೇವೆ ಯಾವುದೇ ಕಾರಣಕ್ಕೂ ಅನರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪು ಏನೇ ಬಂದರೂ ಅನರ್ಹ ಶಾಸಕರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಕಟೀಲ್ ಧೈರ್ಯ ಹೇಳಿದ್ದಾರೆ. ಕಳೆದ ಎಂಟು ದಿನಗಳಿಂದ ಮುಖ್ಯಮಂತ್ರಿ ಹಾಗೂ ನಾನು ಪ್ರವಾಸದಲ್ಲಿದ್ದೆವು, ಹಾಗಾಗಿ ಪರಸ್ಪರ ಭೇಟಿ […]

ಸುಳ್ಯದ ಆದರ್ಶ ಗ್ರಾಮದಲ್ಲಿ ವಾಹನ ಸಂಚಾರಕ್ಕೆ ರಸ್ತೆಗಳೇ ಇಲ್ಲ

Wednesday, September 25th, 2019
Ramanna

ಮಂಗಳೂರು : ಇದೊಂದು ಕುಗ್ರಾಮ ಇಲ್ಲಿ ಜನರಿಗೆ ವಾಹನ ಸಂಚಾರಕ್ಕೆ  ರಸ್ತೆಗಳೇ ಇಲ್ಲ, ಮನೆಯಲ್ಲಿ ಪವರ್ ಇಲ್ಲ, ಇದು ಮೂಲಭೂತ ಸೌಲಭ್ಯಗಳಿಂದ ವಂಚಿತವಾದ ನತದೃಷ್ಟ ಗ್ರಾಮ. ಸಂಸದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಆದರ್ಶ ಗ್ರಾಮ ಯೋಜನೆಯ ಗ್ರಾಮದಲ್ಲಿಈ ಪರಿಸ್ಥಿತಿ ಇದೆ. ಸುಮಾರು ಒಂದು ಕಿ.ಮೀ ತನಕ ಮರದ ಖುರ್ಚಿಯಲ್ಲಿ ರೋಗಿಯೊಬ್ಬರನ್ನು ಸಾಗಿಸಿದ ಮನಕಲಕುವ ಘಟನೆ  ಇಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಳ್ಪ ಗ್ರಾಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಸಂಸದರ ಆದರ್ಶ […]

ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ : ನಳಿನ್ ಕುಮಾರ್ ಕಟೀಲ್

Wednesday, September 11th, 2019
nalin-kumar

ಮಂಗಳೂರು : ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ರಾಜಕೀಯದಲ್ಲಿ ಮಸಾಲೆ ಸುದ್ದಿ ಮಾಡಲು ಬಿಜೆಪಿ ಬಗ್ಗೆ ಮಾಧ್ಯಮಗಳು ನೆಗೆಟಿವ್ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಈ ಬಗ್ಗೆ ಕಾರ್ಯಕರ್ತರು ಚಿಂತೆ ಪಡಬೇಕಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಾರ್ಯಕರ್ತರ‌ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಮುಖಂಡರುಗಳಲ್ಲಿ ಯಾವುದೇ ವಿರೋಧಾಭಾಸಗಳಿಲ್ಲ. ಕೋರ್ ಕಮಿಟಿ ಸಭೆಯಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂಬುದು ಸರಿಯಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಮಿತಿ ಸಭೆ ನಡೆದಿದ್ದು, ಅಶೋಕ್ ಅವರು […]

ಮುಸ್ಲಿಂ ಸಮುದಾಯದ ನಂಬಿಕೆ, ವಿಶ್ವಾಸಗಳಿಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ : ನಳಿನ್ ಕುಮಾರ್ ಕಟೀಲ್

Tuesday, September 3rd, 2019
Muslim-organisation

ಮಂಗಳೂರು : ಬಹಳ ಶ್ರೇಷ್ಠವಾದ ಜವಾಬ್ದಾರಿ ಲಭಿಸಿದೆ ಎಂಬ ಅಹಂಕಾರ ನನಗಿಲ್ಲ. ನೀವು ನನಗೆ ಮಾರ್ಗದರ್ಶನ, ಸಹಕಾರಗಳನ್ನು ನೀಡಿದರೆ, ಮುಸ್ಲಿಂ ಸಮುದಾಯ ನನ್ನ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸಗಳಿಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ದ.ಕ.ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದ ನವಭಾರತ ಸರ್ಕಲ್ ಬಳಿಯ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಮುಸ್ಲಿಂ ಉದ್ಯಮಿಗಳು ಹಾಗೂ ಸಂಘಟನೆಗಳು ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರು ಹೇಳಿದಂತೆ […]

ಪೊಳಲಿ ದೇವಳಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

Tuesday, September 3rd, 2019
polali

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಬೆಳಗ್ಗೆ ಇತಿಹಾನ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಬಂಟ್ವಾಳ್ ಶಾಸಕ ರಾಜೇಶ್ ನಾಯ್ಕ್ , ಬಿಜೆಪಿ ಪ್ರಮುಖ ಮುಖಂಡ ರಾಮದಾಸ್ ಬಂಟ್ವಾಳ್, ವೆಂಕಟೇಶ ನಾವಡ, ಗೋಪಾಲ ಬಂಗೇರ,ಚಂದ್ರಹಾಸ ಶೆಟ್ಟಿ ಮತ್ತಿತರು ಪಾಲ್ಗೊಂಡಿದ್ದರು.