Blog Archive

ಪಕ್ಷದ ವಿಚಾರಧಾರೆ, ಸಿದ್ಧಾಂತ, ಶಿಸ್ತಿನಲ್ಲಿ ಯಾವುದೇ ರಾಜಿಯಿಲ್ಲ : ನಳಿನ್ ಕುಮಾರ್ ಕಟೀಲ್

Thursday, August 29th, 2019
nalin-kumar

ಮಂಗಳೂರು : “ಪಕ್ಷದ ವಿಚಾರಧಾರೆ, ಸಿದ್ಧಾಂತ, ಶಿಸ್ತಿನಲ್ಲಿ ಯಾವುದೇ ರಾಜಿಯಿಲ್ಲ” ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಅವರು ಮಾತನಾಡಿದರು. ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಅವರು ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದು, ಕೊಡಿಯಾಲ್ ಬೈಲ್ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಇಂದು ಅಭಿನಂದನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡದ […]

ನೂತನ ಬಿಜಿಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳೂರಿನಲ್ಲಿ ಸ್ವಾಗತ

Wednesday, August 21st, 2019
nalin-kumar

ಮಂಗಳೂರು : ನೂತನವಾಗಿ ಬಿಜಿಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಳಿನ್ ಕುಮಾರ್ ಕಟೀಲ್ ರವರಿಗೆ ಇಂದು ಬೆಳಗ್ಗೆ ಬಿಜೆಪಿಯ ನೂರಾರು ಕಾರ್ಯಕರ್ತರು ಧಾರಾಕಾರ ಮಳೆಯ ನಡುವೆ ಮಂಗಳೂರು ನಗರ ಹೊರಭಾಗದ ಕಂಕನಾಡಿ ರೈಲ್ವೆ ಜಂಕ್ಷನ್ ಬಳಿ ಚಂಡೆ, ವಾದ್ಯ ಘೋಷದೊಂದಿಗೆ ಸ್ವಾಗತಿಸಿದರು. ನಂತರ ನಳಿನ್ ಕುಮಾರ್ ಕಟೀಲ್ ರವರು ತನ್ನ ಸ್ವಗೃಹಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದು ಮನೆಯವರೊಂದಿಗೆ ಸಿಹಿಯನ್ನು ಹಂಚಿಕೊಂಡರು. ಈ ಸಂಧರ್ಭದಲ್ಲಿ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.  

ಜಮ್ಮು ಕಾಶ್ಮೀರ ಐತಿಹಾಸಿಕ ನಿರ್ಣಯಕ್ಕೆ ನಳಿನ್ ಸಂತಸ

Monday, August 5th, 2019
nalin

ಮಂಗಳೂರು  : ಜಮ್ಮು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಣಯವಾಗಿದೆ. ದೇಶದೆಲ್ಲೆಡೆ ಜನತೆ ಕೇಂದ್ರದ ದಿಟ್ಟ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಕಾಶ್ಮೀರದಲ್ಲಿ ಇನ್ನು ಶಾಂತಿ ನೆಲೆಸಲಿದೆ. ಕೇಂದ್ರದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದರೆ ಕಾಶ್ಮೀರದ ವಿಶೇಷ ಸ್ಥಾನಮಾನನ ರದ್ದು ಮಾಡುವುದಾಗಿ ಚುನಾವಣೆಯ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನುಡಿದಂತೆ ನಡೆದಿದ್ದಾರೆ. ಕೋಟ್ಯಾಂತರ ದೇಶಪ್ರೇಮಿಗಳ ದಶಕಗಳ […]

ವಿಮಾನ ಇನ್ನು 20 ಅಡಿ ಮುಂದಕ್ಕೆ ಚಲಿಸಿದ್ದರೆ, ದೊಡ್ಡ ಅನಾಹುತವೇ ಸಂಭವಿಸುತ್ತಿತ್ತು : ನಳಿನ್ ಕುಮಾರ್ ಕಟೀಲ್

Wednesday, July 3rd, 2019
Nalin

ಮಂಗಳೂರು : ಇಂದು ಲೋಕಸಭಾ ಅಧಿವೇಶನದ ಶೂನ್ಯವೇಳೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಮಂಗಳೂರು ವಿಮಾನ ನಿಲ್ದಾಣದ ರನ್-ವೇ ವಿಸ್ತರಿಸುವ ವಿಚಾರದ ಬಗ್ಗೆ ಪ್ರಸ್ತಾಪಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಇದೇ ಜೂನ್ 30 ಭಾನುವಾರ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ತನ್ನ ಲಯವನ್ನು ತಪ್ಪಿ ರನ್-ವೇಯಿಂದ ಹೊರಗೆ ಜಾರಿ ಸಂಭವನೀಯ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿತ್ತು. ವಿಮಾನ ಇನ್ನು 20 ಅಡಿ ಮುಂದಕ್ಕೆ ಚಲಿಸಿದ್ದರೆ, ದೊಡ್ಡ […]

ನಳಿನ್ ಕುಮಾರ್ ಕಟೀಲ್‌ ಗೆಲುವಿಗೆ ಮುಸ್ಲಿಮ್ ಒಕ್ಕೂಟ ಅಭಿನಂದನೆ

Friday, May 24th, 2019
Nalin

ಮಂಗಳೂರು : 2019ನೇ ಸಾರ್ವತ್ರಿಕ ಲೋಕಸಭೆಗೆ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸಿ ವಿಜಯಿಯಾದ ಶ್ರೀ ನಳಿನ್ ಕುಮಾರ್ ಕಟೀಲ್‌ರವರಿಗೆ ದ.ಕ ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಅಭಿನಂದನೆ ವ್ಯಕ್ತಪಡಿಸಿದೆ. ನಳಿನ್ ಕುಮಾರ್ ಕಟೀಲ್‌ರವರು ಅವರ ಸಂಸದೀಯ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಲಿ ಎಂದು ಹಾರೈಸಿದ್ದಾರೆ,

ಹಿಂದಿನ ದಾಖಲೆಯನ್ನು ಮುರಿದು ಹ್ಯಾಟ್ರಿಕ್ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲ್

Thursday, May 23rd, 2019
Nalin

ಮಂಗಳೂರು : ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 2,74,621 ಮತಗಳ ಅಂತರದಿಂದ  ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ  4,99,664 ಮತಗಳ ಮೂಲಕ ತೃಪ್ತಿ ಪಡಬೇಕಾಯಿತು.  ನಳಿನ್ ಕುಮಾರ್ ಕಟೀಲ್ ಪಡೆದ ಮತಗಳು 7,74,285. ಈಗಾಗಲೆ ಎರಡು ಬಾರಿ ಜಯ ಗಳಿಸಿದ್ದ ನಳಿನ್‌ರನ್ನು ಸೋಲಿಸಲು ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ ಎಂದು ಬಿಂಬಿಸಲಾಗಿತ್ತು. ಆದರೆ, ಫಲಿತಾಂಶ ಅನಿರೀಕ್ಷಿತ ತಿರುವು ಪಡೆದಿದೆ. ಕಳೆದ ಬಾರಿ 1,43,709 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ನಳಿನ್ ಈ ಬಾರಿ ತನ್ನ ಹಿಂದಿನ […]

ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ ಗಿಂತ1,16,000 ಮತಗಳ ಅಂತರದಿಂದ ಮುನ್ನಡೆಯಲ್ಲಿ

Thursday, May 23rd, 2019
KateelRai

ಮಂಗಳೂರು : ಬೆಳಗ್ಗೆ 11.00  ಕ್ಕೆ ಮೂರನೇ ಸುತ್ತಿನಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರಿಗೆ 3,20,627  ಮತಗಳು ಲಭಿಸಿದೆ. ಎರಡು ಭಾರಿ ಜಯಗಳಿಸಿದ ನಳಿನ್ ಕುಮಾರ್ ಕಟೀಲ್ ಗೆ ಮಿಥುನ್ ರೈ  ಗಿಂತ 1,16.700 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದರೆ. ಮಿಥುನ್ ರೈ  1,85,832 ಮತಗಳು ಲಭಿಸಿದೆ.  

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತದಾನ

Thursday, April 18th, 2019
Nalin Kumar

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ  ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಬೆಳಗ್ಗೆ 11ರ ವೇಳೆಗೆ 32.5 % ಮತದಾನವಾಗಿದೆ . ಉರ್ವ ಲೇಡಿಹಿಲ್ ಸಮೀಪದ  ಸಂತ ಅಲೋಶಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮತ ಚಲಾಯಿಸಿದ್ದಾರೆ. ಮತದಾರರು ಮತಗಟ್ಟೆಯಲ್ಲಿ ಬೆಳಿಗ್ಗೆಯೇ ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದು, ಚುರುಕಿನಿಂದ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತಗಟ್ಟೆಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ […]

ನಳಿನ್ ಕುಮಾರ್ ಕಟೀಲ್ ಸೋಲಿಸಿ . ಜಿಲ್ಲೆಯ ಜನಪರ ಸಂಘಟನೆಗಳ ಜಂಟಿ ಮನವಿ

Monday, April 15th, 2019
cpim

ಮಂಗಳೂರು  : ಒಂದು ಕಾಲದಲ್ಲಿ ಅಭಿವೃದ್ದಿ, ಸಾಮರಸ್ಯಕ್ಕೆ ಹೆಸರಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಕಳೆದ ಎರಡು ದಶಕಗಳಿಂದ ಅಭಿವೃದ್ದಿಯಲ್ಲಿ ಹಿನ್ನಡೆ ಕಾಣುತ್ತಿದೆ. ಮತೀಯ ಸಂಘರ್ಷದಿಂದ ಸಾಮರಸ್ಯಕ್ಕೆ ಧಕ್ಕೆಯಾಗಿದ್ದು ಪರಸ್ಪರ ಅಪನಂಬಿಕೆ ಹೆಚ್ಚಾಗಿದೆ. ಇದು ಇಲ್ಲಿನ ಜನಜೀವನದ ಮೇಲೆ ಗಂಭೀರ ಪರಿಣಾಮ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ಈ ಸ್ಥಿತಿಗೆ ಕಳೆದ ಮೂರು ದಶಕಗಳಿಂದ ಬಿಜೆಪಿ ಸತತವಾಗಿ ಗೆಲ್ಲುತ್ತಿರುವುದೇ ಕಾರಣ. ಜಿಲ್ಲೆಯ ಜನತೆ ಈ ಬಾರಿಯ ಚುನಾವಣೆಯಲ್ಲಿ ಇಂತಹ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಬೇಕು. ದೇಶದ ಪಾಲಿಗೆ […]

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ

Thursday, April 4th, 2019
Tara

ಮಂಗಳೂರು : ದ.ಕ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಪರ ನಟಿ ತಾರಾ ಮತಯಾಚನೆ ಮಾಡಿದರು ನಗರದ ಕೇಂದ್ರ ಮಾರುಕಟ್ಟೆ ಸುತ್ತಮುತ್ತ ಮತಯಾಚನೆ ಮಾಡಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯಿಂದ ಅವರೇ ನಿಂತಿದ್ದಾರೆ ಎನ್ನುವ ನಂಬಿಕೆ ನಮ್ಮದು. ಕಾಂಗ್ರೆಸ್ ಪಕ್ಷ ಇಷ್ಟು ವರ್ಷ ಕಳೆದರೂ ಇಂದಿರಾ ಗಾಂಧಿ ಹೆಸರಿನಲ್ಲಿ ಮತ ಯಾಚಿಸುತ್ತದೆ. ಹೀಗಿರುವಾಗ ನಮ್ಮ ನಾಯಕ, ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ನಾವ್ಯಾಕೆ ಮತ ಯಾಚನೆ ಮಾಡಬಾರದು ? ಎಂದು ಕಾಂಗ್ರೆಸ್ ವಿರುದ್ದ ಬಿಜೆಪಿಯ […]