ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ

Saturday, January 2nd, 2021
smartPhone

ಮಂಗಳೂರು : ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್‍ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ ಯೋಜನೆಯು ಕುಂಠಿತ ಬೆಳವಣಿಗೆ, ಅಪೌಷ್ಠಿಕತೆ, ರಕ್ತಹೀನತೆ, ಕಡಿಮೆ […]

ಕಟೀಲು ಬ್ರಹ್ಮಕಲಶೋತ್ಸವ : ಕಾಮಗಾರಿ ಪೂರ್ಣಗೊಳಿಸಲು ನಳಿನ್ ಸೂಚನೆ

Friday, September 20th, 2019
Naleen kumar kateel

ಮಂಗಳೂರು : ಕಟೀಲು ಬ್ರಹ್ಮಕಲಶೋತ್ಸವಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಕಾಮಗಾರಿ ಹಾಗೂ ಇತರ ಕೆಲಸಗಳನ್ನು ಎರಡು ತಿಂಗಳೊಳಗೆ ಸಂಪೂರ್ಣಗೊಳಿಸಿ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕೋರ್ಟ್ ಹಾಲ್‍ನಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಭೆಯಲ್ಲಿ ಭಾಗವಹಿಸಿ ಮಾತಾನಾಡಿದ ಇವರು ರಸ್ತೆ ಅಗಲೀಕರಣಕ್ಕೆ ಎಸ್ಟಿಮೇಟ್(ಅಂದಾಜು) ಮಾಡುವಾಗ ಕಾಂಕ್ರೀಟ್ ಹಾಗೂ ಡಾಂಬರೀಕರಣ ರಸ್ತೆ ಮಾದರಿ ತೆಗೆದುಕೊಂಡು ನಂತರ ಅದರಲ್ಲಿ ಒಂದು ಮಾದರಿಯನ್ನು ಆಯ್ದುಕೊಳ್ಳಿ ಎಂದು ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಬೈಪಾಸ್ ರಸ್ತೆಯಾಗಿ ಉಲ್ಲಂಜೆ-ಮಿತ್ತಬೈಲು-ಪುಪಾಡಿಕಲ್ಲು-ಕೊಂಡೇಲದಿಂದ ಪದವಿ ಕಾಲೇಜು ಆಗಿ […]

ಮಂಗಳೂರಿನಲ್ಲಿ ಸಂಸದ ಕಟೀಲು ಉಪವಾಸ

Thursday, April 12th, 2018
nalin-kumar

ಮಂಗಳೂರು: ಪ್ರಧಾನಿ ಮೋದಿ ಸತ್ಯಾಗ್ರಹ ಬೆಂಬಲಿಸಿ ಮಂಗಳೂರಿನಲ್ಲೂ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಹಂಪನಕಟ್ಟೆಯ ಪುರಭವನದ ಬಳಿಯಿರುವ ಗಾಂಧಿ ಪ್ರತಿಮೆ ಎದುರು, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ. ಇದೇ ವೇಳೆ ಮಾತನಾಡಿದ ಸಂಸದ ನಳೀನ್, ಪ್ರಧಾನಿ ಕರೆಯಂತೆ ಒಂದು ತಿಂಗಳ ಸಂಬಳ ಬಿಟ್ಟಿದ್ದೇವೆ. ಕಾಂಗ್ರೆಸ್ ಸಂಸದರು ತಾಕತ್ತಿದ್ದರೆ ಸಂಬಳ ಬಿಟ್ಟುಕೊಡಲಿ. ದೇಶದ ತೆರಿಗೆಯ ಹಣ ಪೋಲಾಗಲು ಬಿಡುವುದಿಲ್ಲ ಎಂದರು.