ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶಾರದೇ ಸಹಿತ ನವ ದುರ್ಗೆಯರ ಪ್ರತಿಷ್ಠಾಪನೆ

Monday, October 16th, 2023
Kudroli-Devasthana

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಮತ್ತು ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮಹಾಗಣಪತಿ, ಶಾರದೆ, ಆದಿಶಕ್ತಿಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿ ಪ್ರತಿಷ್ಠಾಪನೆ ಪೂಜೆ ರವಿವಾರ ಜರುಗಿತು. ಗಣಪತಿ, ಆದಿಶಕ್ತಿ ಮತ್ತು ನವದುರ್ಗೆಯರನ್ನು ತಂದ ಬಳಿಕ ದೇವಸ್ಥಾನದಲ್ಲಿ ಗುರುಪ್ರಾರ್ಥನೆ, ಕಲಶ ಪ್ರತಿಷ್ಠೆ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿಸಲಾಯಿತು. ಬಳಿಕ ಸ್ಯಾಕ್ಸ್‌ಫೋನ್ ತಂಡ, ಬ್ಯಾಂಡ್, ಚೆಂಡೆ ತಂಡ, ಹುಲಿ ವೇಷದೊಂದಿಗೆ ಶಾರದೆ ಮೂರ್ತಿಯನ್ನು ದೇವಾಲಯಕ್ಕೆ ಪ್ರದಕ್ಷಿಣೆ ಹಾಕಿ […]

ಮಂಗಳೂರು ದಸರಾಕ್ಕೆ ನವದುರ್ಗೆಯರು ಹಾಗೂ ಶಾರದಾಮಾತೆಯ ಮೂರ್ತಿಗಳನ್ನು ತಯಾರು ಮಾಡುವವರು ಯಾರು ಗೊತ್ತಾ ?

Wednesday, October 28th, 2020
Kubera

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಸಂಭ್ರಮಕ್ಕೆ ಪೂಜಿಸಲ್ಪಡುವ 12 ಮೂರ್ತಿಗಳನ್ನು ತಯಾರು ಮಾಡುವ ಕಲೆಗಾರರ ಬಗ್ಗೆ ನೀವು ಕೇಳಿರಲಿಕ್ಕಿಲ್ಲ ಗಣಪತಿ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾಮಾತೆಯ ಮಣ್ಣಿನ ಗಳನ್ನು ತಯಾರಿಸುವವರು ಶಿವಮೊಗ್ಗದ ಕುಬೇರ ಹಾಗೂ ಅವರ ಬಳಗ. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಆರಂಭದ ದಿನಗಳಲ್ಲಿ ರಾಜಶೇಖರ್ ಹಾಗೂ ಅವರ ತಂಡದವರು ಮೂರ್ತಿ ರಚನೆ ಮಾಡುತ್ತಿದ್ದರು. ಅದೇ ತಂಡದಲ್ಲಿ ಕಲಾವಿದನಾಗಿ ತನ್ನ 13 ವರ್ಷದ ಪ್ರಾಯದಲ್ಲೇ ಕೆಲಸ ಆರಂಭಿಸಿದ್ದ ಅದ್ಭುತ ಕಲಾವಿದ ಶಿವಮೊಗ್ಗದ ಕುಬೇರ ಹಾಗೂ […]

ಕುದ್ರೋಳಿಯಲ್ಲಿ ಶಾರದೆ, ನವದುರ್ಗೆಯರ ಪ್ರತಿಷ್ಠೆಯೊಂದಿಗೆ ಮಂಗಳೂರು ದಸರಾಕ್ಕೆ ಚಾಲನೆ

Wednesday, October 10th, 2018
Kudroli Dasara

ಮಂಗಳೂರು:  ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಬುಧವಾರ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಭಟ್ ಅವರು ದೀಪ ಬೆಳಗಿಸಿ ಉತ್ಸವಕ್ಕೆ ಚಾಲನೆ ನೀಡಿದರು. ಮಹಾಗಣಪತಿಯೊಂದಿಗೆ ನವದುರ್ಗೆಯರು ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠೆಯೊಂದಿಗೆ ದಸರಾ ಮಹೋತ್ಸವ ವಿಧ್ಯುಕ್ತವಾಗಿ  ಪ್ರಾರಂಭಗೊಂಡಿತು. ಮಹಾಗಣಪತಿಯೊಂದಿಗೆ ನವದುರ್ಗೆಯರಾದ ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪ್ರತಿಷ್ಠಾಪನೆ ಹಾಗೂ  ಪೂಜೆ ನಡೆಯಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್‌.ಎಸ್‌. ಸಾಯಿರಾಂ, ಉಪಾಧ್ಯಕ್ಷ ರಾಘವೇಂದ್ರ […]

ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವೈಭವದ ‘ಮಂಗಳೂರು ದಸರಾ’ಕ್ಕೆ ಚಾಲನೆ

Thursday, September 29th, 2011
Kudroli Temple

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ವರ್ಷಂಪ್ರತಿ ಜರಗುವ ವೈಭವದ ‘ಮಂಗಳೂರು ದಸರಾ’ಕ್ಕೆ ಬುಧವಾರ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಶಾರದೆ ಹಾಗೂ ನವದುರ್ಗೆಯರ ವಿಗ್ರಹ ಪ್ರತಿಷ್ಠೆ ನಡೆಯಿತು.ಉದ್ಯಮಿ ರಮೇಶ್‌ ಕುಮಾರ್‌ ಹಾಗೂ ಊರ್ಮಿಳಾ ರಮೇಶ್‌ ಕುಮಾರ್‌ ದಂಪತಿ ಪ್ರತಿಷ್ಠಾಪನಾ ದೀಪವನ್ನು ಬೆಳಗಿದರು. ಶಾರದೆಯ ವಿಗ್ರಹವನ್ನು ಕ್ಷೇತ್ರಕ್ಕೆ ಪ್ರದಕ್ಷಿಣೆ ಮಾಡಿ ನಂತರ ಕ್ಷೇತ್ರದ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು. ಮಧ್ಯಾಹ್ನ 11.35ಕ್ಕೆ ನವದುರ್ಗೆಯರು ಹಾಗೂ ಶಾರದೆಯ ವಿಗ್ರಹವನ್ನು ಸಾಂಪ್ರದಾಯಿಕ ವಿಧಿ ವಿಧಾನಗಳಿಂದ ಪ್ರತಿಷ್ಠಾಪಿಸುವ ಮೂಲಕ ಮುಂದಿನ […]

ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಅವರಿಂದ ಬ್ರಹತ್ ಮಂಗಳೂರು ದಸಾರಕ್ಕೆ ಚಾಲನೆ

Friday, October 8th, 2010
ಮಂಗಳೂರು ದಸರಾ

ಮಂಗಳೂರು :  ಕುದ್ರೋಳಿ ಶ್ರೀ ಗೋಕರ್ಣ ಕ್ಷೇತ್ರದ ವತಿಯಿಂದ ನಡೆಯುವ ಮಂಗಳೂರು ದಸರಾವನ್ನು ದ.ಕ. ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ದೀಪ ಬೆಳಗಿಸುವುದರ ಮೂಲಕ ಇಂದು ಮಧ್ಯಾಹ್ನ ಚಾಲನೆ ನೀಡಿದರು. ಅ.8 ರಿಂದ 18 ರವರೆಗೆ ನಡೆಯುವ ನವರಾತ್ರಿ ಉತ್ಸವ ಮತ್ತು ಮಂಗಳೂರು ದಸರಾ ಪೂಜಿಸಲ್ಪಡುವ ನವದುರ್ಗೆಯರ ಮತ್ತು ಶಾರದ ಮಾತೆಯ ವಿಗ್ರಹ ಹಾಗೂ ಗಣಪತಿಯ ವಿಗ್ರಹ ವನ್ನು  ಕ್ಷೇತ್ರದ ಶ್ರೀ ಗೋಕರ್ಣ  ಕಲ್ಯಾಣಮಂಟಪದಲ್ಲಿ ಆಕರ್ಷಕವಾಗಿ ನಿರ್ಮಿಸಿದ ಸ್ವರ್ಣಮಯ ಮಂಟಪಗಳಲ್ಲಿ ಪ್ರತಿಷ್ಠಾಪಿಸಲಾಯಿತು. ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಮ್, ಉಪಾದ್ಯಕ್ಷರಾದ ರಾಘವೇಂದ್ರ ಕುಳೂರು, […]