ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಖರ್ಚಾಗಿದ್ದು ಬರೊಬ್ಬರಿ 5 ಸಾವಿರ ಕೋಟಿ..!
Friday, December 28th, 2018ನವದೆಹಲಿ: ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ನಾಲ್ಕು ವರ್ಷದಲ್ಲಿ 5000 ಕೋಟಿ ರೂಪಾಯಿ ಹಣ ಉಪಯೋಗಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಚಾರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ನಿನ್ನೆ ಲೋಕಸಭೆಗೆ ಅಂಕಿ ಅಂಶಗಳ ಸಮೇತ ವರದಿ ನೀಡಿದ್ದಾರೆ. 2014 ರಿಂದ 2018ರ ಡಿಸೆಂಬರ್ 7ರ ವರೆಗೆ ಸರ್ಕಾರದ ಯೋಜನೆಗಳ ಪ್ರಚಾರ ಕಾರ್ಯಕ್ಕೆ 5,245.73 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ವಿವಿಧ ಯೋಜನೆಗಳನ್ನು ಹೊರ ತರುವ ಸಚಿವಾಲಯಗಳಲ್ಲಿನ ಕಾರ್ಯಕ್ರಮಗಳ ಬಗೆಗಿನ ಪ್ರಚಾರಕ್ಕೆ ಪೂರಕವಾಗುವ ಮತ್ತು ಫಲಾನುಭವಿಗಳಿಗೆ ನೀಡಬೇಕಾದ ಮಾಹಿತಿಯನ್ನು ಹೊಂದಿರುತ್ತವೆ. […]