ಮಂಗಳಾದೇವಿ ನವರಾತ್ರಿ ಉತ್ಸವದ ಉದ್ಘಾಟನೆ – ವಿಡಿಯೋ

Monday, October 16th, 2023
Mangaladevi

ಮಂಗಳೂರು : ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಅ. 15ರಿಂದ 25ರ ವರೆಗೆ ನವರಾತ್ರಿ ಮಹೋತ್ಸವದ ಉದ್ಘಾಟನೆಯನ್ನು ಅಕ್ಟೊಬರ್ 15ರಂದು ಬೆಳಗ್ಗೆ 9 ಗಂಟೆಗೆ ವಿದ್ವಾನ್ ಪಂಜ ಭಾಸ್ಕರ ಭಟ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಮಂಗಳಾದೇವಿ ದೇವಸ್ಥಾನದ ಮಹತ್ವವನ್ನು ವಿವರಿಸಿದರು. ಬೆಳಿಗ್ಗೆ ಭಜನಾ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕಾರ್ಪೊರೇಟರ್ ಪ್ರೇಮಾನಂದ ಶೆಟ್ಟಿ ನೆರವೇರಿಸಿದರು. ನವರಾತ್ರಿ ಮಹೋತ್ಸವದ ವೈದಿಕ ವಿಧಿ ವಿಧಾನಗಳು ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ ನೇತೃತ್ವದಲ್ಲಿ […]

ಮಹತೋಭಾರ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವ

Sunday, October 18th, 2020
Mangaladevi

ಮಂಗಳೂರು: ಮಹತೋಭಾರ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವವು ಅಕ್ಟೋಬರ್ 17 ರಿಂದ ಆರಂಭಗೊಂಡಿದೆ. ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಜನಸಂದಣಿ ಸೇರದಂತೆ ಉತ್ಸವದ ಸಮಯ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕ ಅನ್ನಸಂತರ್ಪಣೆ ಇರುವುದಿಲ್ಲ ಎಂದು ಎಂದು ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ ಹೇಳಿದ್ದಾರೆ. ಮಹಾನವಮಿಯಂದು ಚಂಡಿಕಾಹೋಮ, ವಾಹನ ಪೂಜೆ (ಆಯುಧ ಪೂಜೆ), ರಾತ್ರಿ ದೊಡ್ಡ ವಿಶೇಷ ರಂಗಪೂಜೆ ನಂತರ ಸಣ್ಣ ರಥೋತ್ಸವ ನೆರವೇರಿಸಲಾಗುವುದು. ವಿಜಯದಶಮಿಯಂದು ಬೆಳಿಗ್ಗೆ ತೆನೆ ಹಬ್ಬದ ಅಂಗವಾಗಿ 8 ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ […]

ಪತಿಯನ್ನು ಕಳೆದುಕೊಂಡ ಮಹಿಳೆಯರಿಂದ ಹೋಮದ ಪೂರ್ಣಾಹುತಿ

Tuesday, October 4th, 2011
Janardhana-poojary

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವದ, ಮಂಗಳೂರು ದಸರಾ ಸಂಭ್ರಮದಲ್ಲಿ ಸೋಮವಾರ ಪತಿಯನ್ನು ಕಳೆದುಕೊಂಡ ಮಹಿಳೆಯರಿಗಾಗಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಸಮಾಜದಲ್ಲಿ ನೆಲೆಯೂರಿರುವ ಅನಿಷ್ಟ ಪದ್ಧತಿಯೆನಿಸಿ ಕೊಂಡ ವಿಧವಾ ಪದ್ದತಿಯನ್ನು ಧಿಕ್ಕರಿಸಲು ಪತಿಯನ್ನು ಕಳೆದುಕೊಂಡ ಸುಮಾರು 2,500 ಮಹಿಳೆಯರ ಪಾಲ್ಗೊಳ್ಳುವಿಕೆಯೊಂದಿಗೆ ಚಂಡಿಕಾಹೋಮ, ಬೆಳ್ಳಿ ರಥೋತ್ಸವ ನಡೆಸಿ ವಿಧವೆಯರಿಗೆ ಸೀರೆ, ಕುಂಕುಮ, ಹೂವು, ಬಳೆಯನ್ನು ಪ್ರಸಾದ ರೂಪದಲ್ಲಿ ನೀಡಲಾಯಿತು. ಬಿ. ಜನಾರ್ದನ ಪೂಜಾರಿ ಅವರು, ಹೋಮದ ಸಂಕಲ್ಪ ವಿಧಿಯನ್ನು ನೆರವೇರಿಸಿದ ಬಲಿಕ ಮಾತನಾಡಿ ಭಾರತದಲ್ಲಿ […]