ಮಣಪ್ಪುರಂ ಫೈನಾನ್ಸ್ನ ಉದ್ಯೋಗಿ ನಾಪತ್ತೆ
Wednesday, January 18th, 2023
ಮಂಗಳೂರು : ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ ತೆರಳಿದ್ದು, ಸಂಜೆ 6 ಗಂಟೆಯಾದರೂ ಮರಳಿ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೊಬೈಲ್ ಸ್ವಿಚ್ ಆಫ್ ಆಗಿದ್ದು ಸಂಸ್ಥೆಯ ಸಿಬ್ಬಂದಿಯವರಲ್ಲಿ ವಿಚಾರಿಸಿದಾಗಲೂ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ 5.6 ಅಡಿ ಎತ್ತರದ, ಬಿಳಿ ಮೈಬಣ್ಣದ, ದಪ್ಪಮುಖದ, ಸಾಧಾರಣ ಮೈಕಟ್ಟಿನ ಈಕೆ ತುಳು ಮತ್ತು […]