ವಿಧಾನ ಪರಿಷತ್ ಚುನಾವಣೆ: ಕಣದಲ್ಲಿ ಮೂವರು ಅಭ್ಯರ್ಥಿಗಳು-4 ಉಮೇದುವಾರಿಕೆ ವಾಪಸ್

Friday, November 26th, 2021
MLC-election

ಮಂಗಳೂರು  :  ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದ 7 ಮಂದಿ ಅಭ್ಯರ್ಥಿಗಳಲ್ಲಿ ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ನ.26ರ ಶುಕ್ರವಾರ ನಾಲ್ವರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ನಿತಿನ್ ಕುಮಾರ್, ಕೌಶಿಕ್ ಡಿ ಶೆಟ್ಟಿ, ನವೀನ್ ಕುಮಾರ್ ರೈ ಹಾಗೂ ಶಶಿಧರ್ ಎಂ. ಅವರು ಉಮೇದುವಾರಿಕೆ ಹಿಂಪಡೆದುಕೊಂಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ, […]

ವಿಧಾನಸಭಾ ಚುನಾವಣೆ : ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 38 ಅಭ್ಯರ್ಥಿಗಳು ಸ್ಪರ್ಧೆಗೆ

Tuesday, March 23rd, 2021
Surendran

ಕಾಸರಗೋಡು : ಕೇರಳ ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ನಡೆಯಲಿದ್ದು ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 38 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಜೇಶ್ವರದಲ್ಲಿ ಆರು, ಕಾಸರಗೋಡು ಏಳು, ಉದುಮ ಆರು, ಕಾಞಂಗಾಡ್ 11, ತೃಕ್ಕರಿಪುರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಜೇಶ್ವರ: ಎ. ಕೆ ಎಂ ಅಶ್ರಫ್ (ಮುಸ್ಲಿಂ ಲೀಗ್), ವಿ.ವಿ ರಮೇಶನ್ (ಸಿ ಪಿ ಐ ಎಂ), ಕೆ. ಸುರೇಂದ್ರನ್ (ಬಿಜೆಪಿ), ಪ್ರವೀಣ್ ಕುಮಾರ್ (ಅಣ್ಣಾ ಡೆಮೊಕ್ರಟಿಕ್ ಹ್ಯೂ ಮನ್ ರೈಟ್ಸ್ ಆಫ್ ಇಂಡಿಯಾ), ಜೋನ್ ಡಿಸೋಜ […]

ಡಿಸೆಂಬರ್ 22, 27 ರಂದು ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ

Monday, November 30th, 2020
Basavaaraj

ಬೆಂಗಳೂರು : ಕರ್ನಾಟಕ ಗ್ರಾಮ ಪಂಚಾಯತಿ ಚುನಾವಣೆ ಯ ದಿನಾಂಕಗಳು ಪ್ರಕಟಗೊಂಡಿದ್ದು ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ. ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ. 92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣಾ ಆಯೋಗವು ಸೋಮವಾರ  ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ.  ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. […]

ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಸ್ಥಾನಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Saturday, January 18th, 2020
meyor

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಮೇಯರ್ ಅಭ್ಯರ್ಥಿಯಾಗಿ ಜೆಡಿಎಸ್‌‌ನಿಂದ ವಾರ್ಡ್ ನಂ 26ರ ಸದಸ್ಯೆಯಾಗಿರುವ ತಸ್ಲಿಮ್ ಜೆಡಿಎಸ್ ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ಮೇಯರ್ ಅಭ್ಯರ್ಥಿಯಾಗಿ ಗೀತಾಶ್ರೀ ಯೋಗಾನಂದ್ ನಾಮಪತ್ರ ಸಲ್ಲಿಸಿದರು. ಶಾಂತಮ್ಮ ವಡಿವೇಲು ಉಪ ಮೇಯರ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪಾಲಿಕೆಯ ವಿರೋಧ ಪಕ್ಷದ ನಾಯಕ ಬಿ.ವಿ ಮಂಜುನಾಥ್ ಜೊತೆ ಸೇರಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಬಿಜೆಪಿ ಅಭ್ಯರ್ಥಿಗಳು ಸಂಖ್ಯಾಬಲ […]

ಮಂಗಳೂರು ಮಹಾನಗರ ಪಾಲಿಕೆಗೆ ನವೆಂಬರ್ 12ಕ್ಕೆ ಚುನಾವಣೆ

Tuesday, October 22nd, 2019
mcc

ಮಂಗಳೂರು  : ರಾಜ್ಯ ಚುನಾವಣೆ ಆಯೋಗವು ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪುರಸಭೆ ಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಮಂಗಳೂರು ಮಹಾನಗರ ಪಾಲಿಕೆ 60 ವಾರ್ಡ್ ಗಳಿಗೆ  ನವೆಂಬರ್ 12ನೇ ತಾರೀಕು ಮತದಾನ ನಡೆಯಲಿದೆ. ಅಕ್ಟೋಬರ್ 20ನೇ ತಾರೀಕು ಭಾನುವಾರದಿಂದ ಚುನಾವಣೆ ಮಾದರಿ ನೀತಿ ಸಂಹಿತೆಯು ಜಾರಿ ಆಗುತ್ತದೆ ಎಂದು ಚುನಾವಣಾ ಆಯೋಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ  ಬಗ್ಗೆ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವ ದಿನಾಂಕ 24.10.2019 ನಾಮಪತ್ರ ಸಲ್ಲಿಸಲು ಕೊನೆ ದಿನ 31.10.2019 ನಾಮಪತ್ರ ಪರಿಶೀಲಿಸಲು ಕೊನೆ ದಿನ 2.11.2019 […]

ಮಂಜೇಶ್ವರ : ಉಪಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Monday, September 30th, 2019
manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರಮುಖ ಅಭ್ಯರ್ಥಿಗಳು ಸೆ. 30 ರ ಸೋಮವಾರ ನಾಮಪತ್ರ ಸಲ್ಲಿಸಿದರು. ಯು ಡಿ ಎಫ್ ಅಭ್ಯರ್ಥಿ ಎಂ . ಸಿ ಖಮರುದ್ದೀನ್ ಸೋಮವಾರ ಬೆಳಿಗ್ಗೆ ಮಂಜೇಶ್ವರ ಬ್ಲಾಕ್ ಅಭಿವೃದ್ಧಿ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಉಪ್ಪಳದ ಮುಸ್ಲಿಂ ಲೀಗ್ ಕಚೇರಿಯಿಂದ ಮುಖಂಡರು ಕಾರ್ಯಕರ್ತರ ಜೊತೆ ಆಗಮಿಸಿದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದರು. ಎಲ್ ಡಿ ಎಫ್ ಅಭ್ಯರ್ಥಿ ಎಂ . ಶಂಕರ ರೈ ಬೆಳಿಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ […]

ವಿಧಾನಸಭಾ ಚುನಾವಣೆಗೆ ದ.ಕ ಜಿಲ್ಲೆಯಲ್ಲಿ 98 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Wednesday, April 25th, 2018
Bantwal

ಮಂಗಳೂರು : ಕರ್ನಾಟಕ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮಂಗಳವಾರ ಮುಕ್ತಾಯಗೊಂಡಿದೆ. ದ.ಕ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲಿ 98 ನಾಮಪತ್ರ ಸಲ್ಲಿಕೆಯಾಗಿದೆ. ನಾಮಪತ್ರಗಳ ಪರಿಶೀಲನೆ ಬುಧವಾರ ನಡೆಯಲಿದೆ. ನಾಮಪತ್ರ ಹಿಂದೆಗೆಯಲು ಎಪ್ರಿಲ್ 27 ಅಂತಿಮ ದಿನ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿವೆ. ಬೆಳ್ತಂಗಡಿ ಕ್ಷೇತ್ರ – ಕೆ. ವಸಂತ ಬಂಗೇರ(ಕಾಂಗ್ರೆಸ್), ಸುಮತಿ ಎಸ್. ಹೆಗ್ಡೆ(ಜೆ.ಡಿ.ಎಸ್), ಹರೀಶ್ ಪೂಂಜಾ (ಬಿ.ಜೆ.ಪಿ), ವೆಂಕಟೇಶ್ ಬೆಂಡೆ (ಪಕ್ಷೇತರ). ಮೂಡಬಿದ್ರ್ರೆ ಕ್ಷೇತ್ರ – ಕೆ. ಅಭಯಚಂದ್ರ(ಕಾಂಗ್ರೆಸ್), […]

ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

Monday, December 7th, 2015
Kota Poojary

ಮಂಗಳೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರದಿಂದ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿ ಹಾಲಿ ಸದಸ್ಯ, ಮಾಜಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಇಂದು ಚುನಾವಣಾ ಅಧಿಕಾರಿಗಳಾದ ದ.ಕ.ಜಿಲ್ಲಾಧಿಕಾರಿಯವರಿಗೆ ತನ್ನ ನಾಮಪತ್ರವನ್ನು ಸಲ್ಲಿಸಿದರು. ಪಕ್ಷದ ಕೋಡಿಯಾಲಬೈಲ್ ಕಛೇರಿಯಲ್ಲಿ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಸಭೆ ಮತ್ತು ವಿಧಾನಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕರುಗಳಾದ ಶ್ರೀ ಸುನೀಲ್ ಕುಮಾರ್, ಕ್ಯಾ|ಗಣೇಶ್ ಕಾರ್ಣಿಕ್, ಶಾಸಕ ಎಸ್.ಅಂಗಾರ, ಜಿಲ್ಲಾಧ್ಯಕ್ಷರುಗಳಾದ ಕೆ.ಪ್ರತಾಪಸಿಂಹ ನಾಯಕ್, ತಿಂಗಳೆ […]

ದಕ್ಷಿಣಕನ್ನಡ 17 ಲೋಕಸಭಾ ಚುನಾವಣೆ-14 ಅಭ್ಯರ್ಥಿಗಳು

Saturday, March 29th, 2014
Ibrahim AB

ಮಂಗಳೂರು : 17 ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಇಂದು ಅಂತಿಮ ದಿನವಾಗಿದ್ದು, ಒಟ್ಟು 14 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. 1) ಜನಾರ್ಧನ ಪೂಜಾರಿ (ಭಾರತೀಯ ರಾಷ್ಟ್ರೀಯ ಕಾಂಗ್ರೆಸ್), 2)ನಳಿನ್ ಕುಮಾರ್ ಕಟೀಲು (ಭಾರತೀಯ ಜನತಾ ಪಕ್ಷ), 3)ಮೂಸೆಕುಂಞ ಯಾನೆ ಅಬ್ದುಲ್ ಕರೀಂ(ಬಹುಜನ ಸಮಾಜ ಪಕ್ಷ) 4)ಕೆ.ಯಾದವ ಶೆಟ್ಟಿ (ಭಾರತೀಯ ಕಮ್ಯನಿಸ್ಟ್ ಪಕ್ಷ/ಮಾರ್ಕಿಸ್ಟ್),5) ಮಾರ್ಪಳ್ಳಿ ರಾಮಯ್ಯ ವಾಸುದೇವ(ಆಮ್ ಆದ್ಮಿ ಪಾರ್ಟಿ)6) ಸುಪ್ರೀತ್ ಕುಮಾರ್ ಪೂಜಾರಿ( ಹಿಂದೂಸ್ತಾನ್ ಜನತಾ ಪಾರ್ಟಿ)7) ಹನೀಫ್ ಖಾನ್ ಕೊಡಾಜೆ (ಸೋಶಿಯಲ್ […]

ಮುತಾಲಿಕ್ ಎರಡು ಕಡೆ ಚುನಾವಣಾ ಅಖಾಡಕ್ಕೆ : ಪ್ರಹ್ಲಾದ್‌ ಜೋಶಿ, ಅನಂತ್ ಕುಮಾರ್‌ ಗೆ ಪೈಪೋಟಿ

Friday, March 28th, 2014
Muthalik

ಬೆಂಗಳೂರು, : ಬೆಳಗ್ಗೆ ಬಿಜೆಪಿ ಸೇರಿ ಸಂಜೆ ಪಕ್ಷದಿಂದ ಹೊರಬಂದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎರಡು ಕಡೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಪ್ರಮೋದ್ ಮುತಾಲಿಕ್ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ ವಿರುದ್ಧ ಧಾರವಾಡ ಕ್ಷೇತ್ರದಲ್ಲಿ ಮತ್ತು ಅನಂತ್ ಕುಮಾರ್‌ ವಿರುದ್ಧ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು, ಎರಡೂ ನಾಮಪತ್ರಗಳು […]