7 ಅಭ್ಯರ್ಥಿಗಳ 13 ನಾಮಪತ್ರಗಳು ಕ್ರಮಬದ್ಧ, ಹಿಂಪಡೆಯಲು ನ.26 ರ ವರೆಗೆ ಅವಕಾಶ
Wednesday, November 24th, 2021ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧೆ ಬಯಸಿ ಒಟ್ಟು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರ ಸಲ್ಲಿಸಿದ್ದರು. ಅವುಗಳ ಪರಿಶೀಲನೆ ನ.24ರ ಬುಧವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು, ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕತಗೊಂಡಿದೆ. 13 ನಾಮಪತ್ರಗಳು ಕ್ರಮಬದ್ಧ: ಸಲ್ಲಿಕೆಯಾಗಿದ್ದ ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಅದರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ […]