ಇ-ಜನ್ಮ ತಂತ್ರಾಂಶದಲ್ಲಿ ಜನನ, ಮರಣ ಘಟನೆ ನೋಂದಣಿ ಕಡ್ಡಾಯ

Thursday, January 28th, 2021
Death Certificate

ಬೆಂಗಳೂರು : ಇ ಜನ್ಮ ತಂತ್ರಾಂಶದಲ್ಲಿ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಲು ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ನಿಗಮ ಮಂಡಳಿ ಹಾಗೂ ಸ್ವಾಯುತ್ತ ಸಂಸ್ಥೆಗಳು ಸರ್ಕಾರದ ಸೇವೆ/ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವ ರಾಜ್ಯದ ನಿವಾಸಿ ನಾಗರಿಕರಿಂದ ಕುಟುಂಬ ಗುರುತಿನ ಸಂಖ್ಯೆ (ಪಡಿತರ ಚೀಟಿ ಸಂಖ್ಯೆ (ರೇಷನ್ಕಾರ್ಡ್) ನ್ನು ಕಡ್ಡಾಯವಾಗಿ ಪಡೆಯಲು ಸೂಚಿಸಲಾಗಿದೆ. ರಾಜ್ಯಾದ್ಯಂತ ಜನನ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಲಾಗುತ್ತಿದೆ. ಇ-ಜನ್ಮ ತಂತ್ರಾಂಶದಲ್ಲಿ ಪಡಿತರ ಚೀಟಿಯ ಸಂಖ್ಯೆಯನ್ನು ಕಡ್ಡಾಯವಾಗಿ […]

ಅಲೆಮಾರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಕೆ. ರವೀಂದ್ರಶೆಟ್ಟಿ ನೇಮಕ

Tuesday, December 1st, 2020
K Raveendra Shetty

ಮಂಗಳೂರು :  ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರಶೆಟ್ಟಿ ಉಳಿದೊಟ್ಟು ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅಧ್ಯಕ್ಷರನ್ನಾಗಿ ಸರಕಾರದ ಅಧೀನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರು ನೇಮಕ ಮಾಡಿ ಆದೇಶ ಮಾಡಿರುತ್ತಾರೆ. ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರವೀಂದ್ರಶೆಟ್ಟಿ ಪ್ರಸ್ತುತ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ, ಮಂಡಲ ಪ್ರಮುಖರಾಗಿದ್ದು ಸೇರಿದಂತೆ ಹಲವಾರು ಧಾರ್ಮಿಕ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ – ಯುಟಿ ಖಾದರ್

Wednesday, November 18th, 2020
UTKhader

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಯಾರನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದ್ದಾರೆ ಅನ್ನೋದು ಗೊತ್ತಾಗುತ್ತಿಲ್ಲ.  ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಮಾಜಿ ಸಚಿವ ಯುಟಿ ಖಾದರ್ ವಾಗ್ದಾಳಿ ನಡೆಸಿದರು. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಸಿಸಿಬಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊಲೆ, ಹಲ್ಲೆ ಪ್ರಕರಣ ಹೆಚ್ಚುತ್ತಿದೆ. ಸಚಿವರು ಈವರೆಗೆ ಪೊಲೀಸ್ ಇಲಾಖೆಯ ರಿವ್ಯೂ ಮಾಡಿಲ್ಲ ಎಂದು ಖಾದರ್ ಹೇಳಿದರು. ರಾಜ್ಯ ಸರ್ಕಾರ ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಮರಾಠ ಮತ್ತು ವೀರಶೈವ ನಿಗಮ ಮಂಡಳಿ ಮಾಡುವ ಮೂಲಕ ಓಲೈಕೆ […]