ಆನಂದ ಪೂಜಾರಿ ಹಳೆಯಂಗಡಿ ನಿಧನ

Friday, August 27th, 2021
Ananda Poojary

ಮುಂಬಯಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಹಳೆಯಂಗಡಿ ಸಾಯಿಕೃಪಾ ನಿವಾಸಿ, ಕೊಡುಗೈದಾನಿ, ಸಾಮಾಜಿಕ ಚಿಂತಕ ಆನಂದ ಪೂಜಾರಿ (85.) ಇಂದು ಸಂಜೆ ಹಳೆಯಂಗಡಿ ಅಲ್ಲಿನ ನಿವಾಸದಲ್ಲಿ ನಿಧನರಾದರು. ಮುಂಬಯಿ ಅಲ್ಲಿನ ಹೆಸರಾಂತ ಸಾಯಿಕೇರ್ ಸಂಸ್ಥೆಯ ಆಡಳಿತ ನಿರ್ದೇಶಕ, ಮದರ್ ಇಂಡಿಯಾ ನೈಟ್ ಹೈಸ್ಕೂಲ್ ಫೋರ್ಟ್ (ಮುಂಬಯಿ) ಇದರ ಅಧ್ಯಕ್ಷ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟç ಸಲಹಾ ಸಮಿತಿ ಸದಸ್ಯ ಸುರೇಂದ್ರ ಎ.ಪೂಜಾರಿ ಸೇರಿದಂತೆ ಮೃತರು ಏಳು ಗಂಡು, ಒಂದು ಹೆಣ್ಣು ಹಾಗೂ ಅಪಾರ ಬಂಧು […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

Thursday, August 26th, 2021
DM Kulal

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ತಾಯಿ,ಪತ್ನಿ,ಒಂದು ಹೆಣ್ಣು,ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ […]

ಡಾ. ಸುಧೀಂದ್ರ ಹಾಲ್ದೊಡ್ಡೇರಿ ನಿಧನಕ್ಕೆ ಗಣ್ಯರ ಸಂತಾಪ

Friday, July 2nd, 2021
haldodderi-sudhindra

ಬೆಂಗಳೂರು  : ಖ್ಯಾತ ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ವಿಜ್ಞಾನ ವಿಷಯಗಳನ್ನು ಮನೋಜ್ಞವಾಗಿ ಬರೆಯುತ್ತಿದ್ದ ಕೆಲವೇ ಬರಹಗಾರರಲ್ಲಿ ಒಬ್ಬರಾಗಿದ್ದರು. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಸಚಿವರಾದ ಕೆ.ಎಸ್.ಈಶ್ವರಪ್ಪರವರ ತೀವ್ರ ಶೋಕ ಕನ್ನಡದ ಖ್ಯಾತ ಬರಹಗಾರ, ಅಂಕಣಕಾರ, ವಿಜ್ಞಾನಿ ಡಾ.ಸುಧೀಂದ್ರ ಹಾಲ್ದೊಡ್ಡೇರಿ  ನಿಧನಕ್ಕೆ, […]

ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ

Thursday, June 17th, 2021
vijayakrishna

ಬೆಂಗಳೂರು  : ಮಾಜಿ ಕ್ರಿಕೆಟಿಗ ಬಿ.ವಿಜಯಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ..ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ 15 ವರ್ಷಗಳ ವೃತ್ತಿ ಜೀವನದಲ್ಲಿ ಅಪ್ರತಿಮ ಆಲ್ ರೌಂಡರ್ ಆಗಿದ್ದ ಅವರು 80 ಪ್ರಥಮ ದರ್ಜೆಯ ಪಂದ್ಯಗಳನ್ನು ಆಡಿ 2000 ರನ್ ಗಳನ್ನು ಗಳಿಸಿ 194 ವಿಕೆಟ್ ಗಳನ್ನು ಪಡೆದಿದ್ದರು. ಕರ್ನಾಟಕ ರಣಜಿ ಟ್ರೋಫಿಯನ್ನು ಎರಡು ಬಾರಿ ಗೆಲ್ಲಲು ಅವರು ಕಾರಣೀಭೂತರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ. ಅವರ ನಿಧನದಿಂದ ಅತ್ಯುತ್ತಮ ಕ್ರಿಕೆಟಿಗನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ […]

ಉರ್ವಾ ಕೆನರಾ ಪ್ರೌಢ ಶಾಲೆ ಅಧ್ಯಾಪಕ ಹೃದಯಾಘಾತದಿಂದ ನಿಧನ

Sunday, May 23rd, 2021
Ravindranath

ಮಂಗಳೂರು: ಕೆನರಾ ಪ್ರೌಢ ಶಾಲೆ ಉರ್ವಾದ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಭಾನುವಾರ  ನಿಧನರಾದರು. ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು 9  ವರ್ಷಗಳಿಂದ  ಅಧ್ಯಾಪಕರಾಗಿದ್ದರು. ಎಂಎ, ಎಂಫಿಲ್ ಪದವೀಧರರಾಗಿದ್ದು, ಎನ್‌ಸಿಸಿ ಅಧಿಕಾರಿಯೂ ಆಗಿದ್ದರು. ಎನ್‌ಸಿಸಿಯ ಸಾಧನೆಗಾಗಿ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಹವ್ಯಾಸಿ ಯಕ್ಷಗಾನ ಮತ್ತು ರಂಗಭೂಮಿ ಕಲಾವಿದರಾಗಿದ್ದ ಅವರು, ಉತ್ತಮ‌ ಕಾರ್ಯಕ್ರಮ‌‌ ನಿರ್ವಾಹಕರೂ ಆಗಿ ಜನಮೆಚ್ಚುಗೆ ಗಳಿಸಿದ್ದರು. ಪತ್ನಿ ದಿವ್ಯಾ, ಮೂರು ವರ್ಷದ ಮಗು ಸೇರಿದಂತೆ ಅಪಾರ ಬಂಧು […]

ವರನಟ ಡಾ. ರಾಜ್‌ಕುಮಾರ್ ಅವರ ಯೋಗಗುರು ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ ನಿಧನ

Thursday, May 20th, 2021
Pakirappa

ಬೆಂಗಳೂರು: ಕೆಎಸ್‌ಆರ್‌ಪಿ ನಿವೃತ್ತ ಡಿಐಜಿ, ವರನಟ ಡಾ. ರಾಜ್‌ಕುಮಾರ್ ಅವರ ಯೋಗಗುರುಗಳಾಗಿದ್ದ ಡಾ. ಹೊನ್ನಪ್ಪ ಫಕೀರಪ್ಪ ನಾಯ್ಕರ್ (85) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ ,ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಧಾರವಾಡದ ಕುಂದಗೋಳ ಮೂಲದವರಾಗಿದ್ದ ನಾಯ್ಕರ್ ಕಳೆದ ಐದು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು, ಕನಕಪುರ ರಸ್ತೆ ಬಿ.ಎಂ.ಕಾವಲ್‌ನಲ್ಲಿ ಮಹಾಯೋಗಕ್ಷೇತ್ರ ಸ್ಥಾಪಿಸುವ ಮೂಲಕ ಡಾ.ರಾಜ್‌ಕುಮಾರ್ ಸೇರಿ ವಿವಿಧ ಕ್ಷೇತ್ರದ ಗಣ್ಯರಿಗೆ ಹಠಯೋಗದ ಸಾಧನೆ ಮಾಡಿಸಿದ್ದರು. ಡಾ. ಎಚ್.ಎಫ್. ನಾಯ್ಕರ ಬೆಂಗಳೂರಿನ ಕನಕಪುರ […]

ಹಿರಿಯ ಕಲ್ಲಂಗಡಿ ಕೃಷಿಕ, ಶತಾಯುಷಿ ಕೆ.ಸೇಸು ಸಪಲ್ಯ ನಿಧನ

Monday, March 15th, 2021
Sesu Sapalya

ಬಂಟ್ವಾಳ: ಇಲ್ಲಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಂಚೇಶ್ವರ ನಿವಾಸಿ, ಹಿರಿಯ ಕಲ್ಲಂಗಡಿ ಕೃಷಿಕ ಶತಾಯುಷಿ ಕೆ.ಸೇಸು ಸಪಲ್ಯ (102) ಇವರು ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪಾಣೆಮಂಗಳೂರು ಸುಮಂಗಲಾ ಕ್ರೆಡಿಟ್ ಸೊಸೈಟಿ ಮಾಜಿ ಅಧ್ಯಕ್ಷ ಎಸ್.ಎ. ವಿಶ್ವನಾಥ್ ಬಿ.ಸಿ.ರೋಡು ಸಹಿತ ಮೂವರು ಪುತ್ರರು ಮತ್ತು ಏಳು ಮಂದಿ ಪುತ್ರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ತರಕಾರಿ ಮತ್ತು ಕಲ್ಲಂಗಡಿ ಕೃಷಿ ಜೊತೆಗೆ ಜಾನಪದ ಕ್ರೀಡೆ ಕಂಬಳ ಪ್ರೇಮಿಯಾಗಿ, ಪೊಳಲಿ ವಲಯ ಗಾಣಿಗ […]

ಮೊಗವೀರ ಕೋಪರೇಟಿವ್ ಬ್ಯಾಂಕಿನ ಉಪ ಕಾರ್ಯಧ್ಯಕ್ಷ ಧರ್ಮಪಾಲ್ ಪಿ ನಿಧನ

Sunday, December 27th, 2020
Dharmapala

ಉಡುಪಿ : ಮೊಗವೀರ ಕೋಪರೇಟಿವ್ ಬ್ಯಾಂಕಿನ ಉಪ ಕಾರ್ಯಧ್ಯಕ್ಷ, ಉದ್ಯಮಿ  ಧರ್ಮಪಾಲ್ ಪಿ (74) ಇವರು ಡಿ. 27 ರಂದು ಮುಂಜಾನೆ ಹೃದಯಘಾತದಿಂದಾಗಿ ಪಡುಬಿದ್ರೆಯ ಕಡಿಪಟ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಇವರು ಒರ್ವ ಪುತ್ರ ಹಾಗೂ ಒರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲ್ಲಿದ್ದಾರೆ. ಮೂಲತಃ ಪಡುಬಿದ್ರೆ ಕಾಡಿಪಟ್ನದವರಾದ ಇವರು ಕಾಡಿಪಟ್ಣ ಮೊಗವೀರ ಸಭಾದ ಅಧ್ಯಕ್ಷರ , ಮೊಗವೀರ ಯುವಕ ಸಂಘ ಮುಂಬಯಿ ಇದರ  ಉಪಾಧ್ಯಕ್ಷರಾಗಿದ್ದರು. ಮೊಗವೀರ ಬ್ಯಾಂಕಿನ ಕಾರ್ಯಧ್ಯಕ್ಷ ಸದಾನಂದ ಕೋಟ್ಯಾನ್ ಇವರ ನಿಕಟವರ್ತಿಯಾಗಿದ್ದ ಧರ್ಮಪಾಲ್ ಪಿ  […]

ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ ನಿಧನ

Wednesday, November 25th, 2020
Ahmed Pateel

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್‌ ನಾಯಕ ಅಹ್ಮದ್ ಪಟೇಲ್ (71 ವರ್ಷ) ಅವರು ಬುಧವಾರ ಮುಂಜಾನೆ 3.30ರ ಸುಮಾರಿಗೆ ನಿಧನರಾಗಿದ್ದಾರೆ. ಸೋನಿಯಾ ಗಾಂಧಿ ಆಪ್ತ ಎಂದೇ ಬಿಂಬಿತವಾಗಿದ್ದ ಕಾಂಗ್ರೆಸ್‌ನ ನಿಷ್ಠಾವಂತ ನಾಯಕ  ಅಹ್ಮದ್ ಪಟೇಲ್ ಕಳೆದ ತಿಂಗಳು ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಹ್ಮದ್‌ ಪಟೇಲ್ ಅವರು ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರಾದರೂ, ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಇದೀಗ ಅವರ ನಿಧನದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಹ್ಮದ್ ಪಟೇಲ್ ಸುದ್ದಿ ಅಘಾತವನ್ನುಂಟು […]

ಹೊಟೇಲ್ ಉದ್ಯಮಿ ಜಯ ಸಿ. ಸುವರ್ಣ ನಿಧನ

Wednesday, October 21st, 2020
JayaCSuvarna

ಮಂಗಳೂರು : ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ (74) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾದರು. ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿರುವ ಜಯ ಸಿ.ಸುವರ್ಣ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಮುಂಬಯಿ ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ, ಅಭಿವೃದ್ಧಿಯ ರೂವಾರಿಯಾಗಿದ್ದರು. ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರ ನಿಕಟವರ್ತಿ, ಎಲ್ಲಾ […]