Blog Archive

ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ ನಿಧನ

Sunday, September 27th, 2020
Tirumaleshwara Sastri

ಮಂಗಳೂರು : ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ, ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ತೆಂಕಬೈಲು ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.27ರಂದು ನಿಧನ ಹೊಂದಿದರು. ಅವರು ಪುತ್ರ-ಹವ್ಯಾಸಿ ಭಾಗವತ-ಶಿಕ್ಷಕ ಮುರಳೀಕೃಷ್ಣ ಶಾಸ್ತ್ರಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ ಪ್ರಶಸ್ತಿಗಳಲ್ಲದೆ ಹಲವು ಪುರಸ್ಕಾರ, ಸಮ್ಮಾನಗಳಿಗೆ ಭಾಜನರಾಗಿದ್ದರು. 1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ […]

ನ್ಯಾಯವಾದಿ, ಮುಂಬಯಿ ಪತ್ರಕರ್ತ ಸುರೇಶ್ ಆಚಾರ್ಯ ಪಿಲಾರು ನಿಧನ

Saturday, September 26th, 2020
suresh Acharya

ಮುಂಬಯಿ : ಬೃಹನ್ಮುಂಬಯಿಯ ಕನ್ನಡ ಪತ್ರಿಕೋದ್ಯಮದಲ್ಲಿ ಸೇವೆಗೈದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಂಘದ 2012-2015ನೇ ಸಾಲಿನಲ್ಲಿ ಜೊತೆ ಕೋಶಾಧಿಕಾರಿ ಆಗಿದ್ದ ಸುರೇಶ್ ಆಚಾರ್ಯ (49) ಇಂದಿಲ್ಲಿ ತೀವ್ರ ಹೃದಯಾಘಾತದಿಂದ ನೆರೂಲ್ ಪಶ್ಚಿಮದಲ್ಲಿನ ಮಾನಕ್ ಆಸ್ಪತ್ರೆಯಲ್ಲಿ ವಿಧಿವಶರಾದರು. ಉದಯವಾಣಿ ಕನ್ನಡ ದೈನಿಕದ ಮುಂಬಯಿ ಆವೃತ್ತಿಯಲ್ಲಿ ಉಪ ಸಂಪಾದಕರಾಗಿ ಸೇವೆ ಸಲ್ಲಿಸಿ ಸದ್ಯ ವಕೀಲ ವೃತ್ತಿಯಲ್ಲಿ ತೊಡಗಿಸಿದ್ದ ಇವರು ಉಡುಪಿ ಜಿಲ್ಲೆಯ ಕಾರ್ಕಳ ಪಿಲಾರು ಮೂಲದವರಾಗಿದ್ದು ಪ್ರಸ್ತುತ ನವಿ ಮುಂಬಯಿ ನೆರೂಲ್ ಸೆಕ್ಟರ್ […]

ಬೈಕಾಡಿ ಜನಾರ್ದನ ಆಚಾರ್ ನಿಧನ

Sunday, September 13th, 2020
Baikady Janardhana-Achar

ಮಂಗಳೂರು : ಆದರ್ಶ ಶಿಕ್ಷಕ, ಶಿಕ್ಷಣ ತಜ್ಞ ಬೈಕಾಡಿ ಜನಾರ್ದನ ಆಚಾರ್ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಬೆಳಗ್ಗೆ ನಿಧನರಾದರು. ಅವರು ಕೆನರಾ ಹೈ ಸ್ಕೂಲ್‌ನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಚೆನ್ನರಾಯಣ ಪಟ್ಟಣದ ಮಲನಾಡು ಪಿಯು ಕಾಲೇಜು ಸೇರಿದಂತೆ ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ, ವಿಶ್ವ ಹಿಂದೂ ಪರಿಷತ್‌ನಲ್ಲೂ ಗುರುತಿಸಿಕೊಂಡಿದ್ದರು. ಎಸ್‌ಕೆಜಿಐ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಕ್ತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿಯಾಗಿದ್ದ ಅವರು ಆಗಸ್ಟ್ ತಿಂಗಳಲ್ಲಿ ನಿವೃತ್ತಿ ಹೊಂದಿದ್ದರು. ಶಾಲಾ ದಿನಗಳಿಂದಲೇ ಅನೇಕರಿಗೆ […]

ಬಂಟ್ವಾಳ ಉಪ ತಹಶೀಲ್ದಾರ್ ಕೋಡಜಾಲು ಶ್ರೀಧರ್ ಹೃದಯಾಘಾತದಿಂದ ನಿಧನ

Sunday, September 6th, 2020
sridhar

ಬಂಟ್ವಾಳ: ಬಂಟ್ವಾಳ ಉಪ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಧರ್ ಕೋಡಿಜಾಲ್ ಅವರು ರವಿವಾರ  ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೂಲತಃ ಪುತ್ತೂರಿನ ಕಸ್ಬಾ ಕೋಡಜಾಲು ನಿವಾಸಿಯಾಗಿದ್ದ ಶ್ರೀಧರ್ (46), ಪ್ರಸ್ತುತ ಪುತ್ತೂರಿನ ಜಿಡೆಕಲ್ಲುನಲ್ಲಿ ವಾಸವಾಗಿದ್ದರು. ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಶ್ರೀನಿವಾಸ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಕೋವಿಡ್ ವಾರಿಯರ್ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

Tuesday, September 1st, 2020
mukharji

ಹೊಸ ದಿಲ್ಲಿ: ಭಾರತರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೊರೊನಾ ವೈರಸ್ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋಮಾಗೆ ಜಾರಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 84 ವರ್ಷ ವಯಸ್ಸಿನ ಪ್ರಣಬ್ ಮುಖರ್ಜಿ, ಭಾರತದ 13ನೇ ರಾಷ್ಟ್ರಪತಿಗಳಾಗಿ ಕಾರ್ಯನಿರ್ವಹಿಸಿದ್ದರು. 25 ಜುಲೈ 2012ರಿಂದ 25 ಜುಲೈ 2017ರವರೆಗೆ ಪ್ರಣಬ್ ಭಾರತದ ರಾಷ್ಟ್ರಪತಿಗಳಾಗಿದ್ದರು. ಪತ್ನಿ ಹಾಗೂ ಮೂವರು ಮಕ್ಕಳನ್ನು ಪ್ರಣಬ್ ಅಗಲಿದ್ದಾರೆ. ಶ್ರೀಯುತರಿಗೆ 2019ರಲ್ಲಿ ಭಾರತ ರತ್ನ ಹಾಗೂ 2008ರಲ್ಲಿ ಪದ್ಮ ವಿಭೂಷಣ ಪುರಸ್ಕಾರ ನೀಡಿ […]

ಕಾರು ಢಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ನ್ಯಾಯವಾದಿ ನಿಧನ

Friday, August 28th, 2020
duggappa

ಮಂಗಳೂರು :  ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಶುಕ್ರವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ. ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ ಸುಮಾರು 4:30ರ ವೇಳೆಗೆ ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆಯಿತು. ಗಂಭೀರ ಗಾಯಗೊಂಡ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ  ಮೃತಪಟ್ಟರು. ಇವರು ಪತ್ನಿ […]

ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ.ಎಂ.ಕೆ ನಿಧನ

Wednesday, August 26th, 2020
mmk

ಮಂಗಳೂರು : ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಗರದ ಸೆಂಟ್ರಲ್‌ ಮಾರ್ಕೆಟ್‌ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮೊಹಮದ್‌ ಮುಸ್ತಫಾ (59) ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಣ್ಣು ಹಂಪಲು ವ್ಯಾಪಾರಿಯಾಗಿದ್ದ ಅವರು ವ್ಯಾಪಾರಸ್ಥರ ವಲಯದಲ್ಲಿ ” ಎಂ.ಎಂ.ಕೆ” ಎಂದು ಜನಪ್ರಿಯರಾಗಿದ್ದರು. ಜಿಲ್ಲಾಡಳಿತ ಸೆಂಟ್ರಲ್‌ ಮಾರುಕಟ್ಟೆಯ ತರಕಾರಿ ಹಾಗೂ ಹಣ್ಣುಹಂಪಲು  ಸಗಟು ವ್ಯಾಪಾರವನ್ನು ನಗರದ ಹೊರ ವಲಯದ ಬೈಕಂಪಾಡಿಯ ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದಾಗ ವ್ಯಾಪಾರಸ್ಥರ ಸಂಘದ […]

ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ ನಿಧನ

Sunday, August 16th, 2020
Thumbe Moideen

ಮಂಗಳೂರು :  ಬಿ.ಎ. ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ (89) ಅವರು ರವಿವಾರ ಪೂರ್ವಾಹ್ನ 11.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಬಿ. ಅಹ್ಮದ್ ಹಾಜಿ ಮುಹಿಯುದ್ದೀನ್ […]

ವಾಟಾಳ್ ನಾಗರಾಜ್ ಪತ್ನಿ ಜ್ಞಾನಾಂಬಿಕೆ ನಿಧನ

Wednesday, August 5th, 2020
jnanabike

ಬೆಂಗಳೂರು : ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ಪತ್ನಿ ಜ್ಞಾನಾಂಬಿಕೆ (60) ಮಂಗಳವಾರ ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ ಅವರು ಮಂಗಳವಾರ ಸಂಜೆ 7:30ಕ್ಕೆ ಶೇಷಾದ್ರಿ ಪುರಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ವಾಟಾಳ್ ನಾಗರಾಜ್ ರವರ ಸ್ವಗೃಹ ಡಾಲರ್ಸ್ ಕಾಲನಿಯ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಬುಧವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸ್ವಗ್ರಾಮದಲ್ಲಿ ವಿಧಿ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಕುಟುಂಬಸ್ಥರು ಮಾಹಿತಿ […]

ವಿಟ್ಲಅರಮನೆಯ ಜನಾರ್ದನ ವರ್ಮ ಅರಸು ನಿಧನ

Sunday, August 2nd, 2020
JanardhanVarma

ವಿಟ್ಲ: ವಿಟ್ಲ ಅರಮನೆಯ ಜನಾರ್ದನ ವರ್ಮ ಅರಸರು (84) ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ. ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲದ ಆನುವಂಶಿಕ ಮೊಕ್ತೇಸರಾಗಿ ದೇವಸ್ಥಾನದ ಬ್ರಹ್ಮಕಲಶ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ, ವಿಟ್ಲ ಶ್ರೀ ಜಠಾಧಾರಿ ದೈವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶಗಳು ಇವರ ಕಾಲದಲ್ಲಿ ನಡೆದಿತ್ತು. ರವಿವಾರ ಮಧ್ಯಾಹ್ನ ಗಂಟೆ 12ಕ್ಕೆ ಅರಸುಮನೆತನದ ವಿಧಿ ವಿಧಾನಗಳ ಮೂಲಕ ಬಾಕಿಮಾರು ಗದ್ದೆಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಸಂತಾಪ: ಅರಸು ಮನೆತನದ ಜನಾರ್ದನ […]