ವೈಶಾಲಿ ಕಾಸರವಳ್ಳಿ ಅಂತಿಮ ಯಾತ್ರೆ
Tuesday, September 28th, 2010ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಬೆಳ್ಳಿ ಪರದೆ ಮತ್ತು ಕಿರುತೆರೆ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಹಿರಿಯ ನಟಿ ವೈಶಾಲಿ ಕಾಸರವಳ್ಳಿ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಾಲ್ಕು ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ. ವೈಶಾಲಿ ಕಾಸರವಳ್ಳಿ ದೀರ್ಘ ಕಾಲದ ಅನಾರೋಗ್ಯದಿಂದ ಚೇತರಿಸದೆ ಸೋಮವಾರ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ವೈಶಾಲಿ ಕಾಸರವಳ್ಳಿ ನಿರ್ದೇಶಕಿ, ವಸ್ತ್ರವಿನ್ಯಾಸಕಿ ನಟಿಯೂ ಆಗಿದ್ದರು, ಪತಿ, ಖ್ಯಾತ ನಿರ್ದೇಶಕ ಗಿರೀಶ ಕಾಸರವಳ್ಳಿ, ಪುತ್ರಿ ಅನನ್ಯ ಹಾಗೂ ಪುತ್ರ ಅಪೂರ್ವ ಅವರನ್ನು ಅಗಲಿದ್ದಾರೆ. […]