ನಿಶ್ಚಿತಾರ್ಥ ಆಗಿ ಒಂದೇ ತಿಂಗಳಲ್ಲಿ ಸರ್ಕಾರಿ ಉದ್ಯೋಗಿ ಯುವತಿ ಆ್ಯಸಿಡ್ ಕುಡಿದು ಆತ್ಮಹತ್ಯೆ

Friday, July 9th, 2021
manasa

ಚಿತ್ರದುರ್ಗ:  ನಿಶ್ಚಿತಾರ್ಥ ಆಗಿ ಒಂದೇ ತಿಂಗಳಲ್ಲಿ  ಸರ್ಕಾರಿ ಉದ್ಯೋಗಿ ಯುವತಿಯೊಬ್ಬಳು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಾನಸ (22) ಎಂದು ಗುರುತಿಸಲಾಗಿದೆ. ಮಾನಸ ಸರ್ಕಾರಿ ಉದ್ಯೋಗ ಸಿಕ್ಕಿ, ನಿಶ್ಚಿತಾರ್ಥಆಗಿ ಒಂದೇ ತಿಂಗಳಲ್ಲಿ ಅನುಮಾನಸ್ಪದವಾಗಿ ಆ್ಯಸಿಡ್ ಕುಡಿದು, ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಾನಸ ಒಂದಲ್ಲ, ಎರಡಲ್ಲ ಸತತ ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿ ಕೊನೆಗೂ ಇಂದು ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ […]

ಉಡುಪಿ ಜಿಲ್ಲೆಯಲ್ಲಿ ಜೂ.7ರ ವರೆಗೆ ಮದುವೆಗೆ ಅನುಮತಿ ಇಲ್ಲ

Monday, May 24th, 2021
Udupi-DC

ಉಡುಪಿ :   ಮೇ 25ರಿಂದ ಜೂ.7ರ ವರೆಗೆ  ಉಡುಪಿ ಜಿಲ್ಲೆಯಲ್ಲಿ ಮದುವೆಗೆ ಅನುಮತಿ ನೀಡುವುದಿಲ್ಲ. ಈವರೆಗೆ ಅನುಮತಿ ನೀಡಿದ ಮದುವೆಗಳು ಮಾತ್ರ ನಡೆಯಲಿವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರೊಂದಿಗೆ ನಡೆಸಿದ ವೀಡಿಯೊ ಕಾನ್ಫರೆನ್ಸ್ ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮದುವೆಯಿಂದ ಕೊರೋನ ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿಈ ನಿರ್ಧಾರ ಕೈಗೊಳ್ಳಲಾಗಿದೆ.  ಮದುವೆ ಆಗಲು ನಿರ್ಧಾರ ಮಾಡಿದವರು ಅದನ್ನು ಮುಂದೂಡಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಈ […]

ನಿಶ್ಚಿತಾರ್ಥ ಗೊಂಡ ಯುವತಿ ಬೈಕ್ ಸ್ಕಿಡ್ ಆಗಿ ಮೃತ್ಯು

Thursday, December 3rd, 2020
Amitha Shetty

ಕಾಸರಗೋಡು  : ನಿಶ್ಚಿತಾರ್ಥ ಗೊಂಡ ಯುವತಿಯೊಬ್ಬಳು ತನ್ನ ಭಾವಿ ಪತಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಬೈಕ್ ಮಗುಚಿ ಗಂಭೀರ ಗಾಯಗೊಂಡು  ಮೃತಪಟ್ಟ ಘಟನೆ ನಡೆದಿದೆ. ಬಾಡೂರು ಮಂಟಪಾಡಿಯ ಅಮಿತಾ ಶೆಟ್ಟಿ (22) ಮೃತಪಟ್ಟವರು. ಇವರಿಗೆ ಜನವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು. ನವಂಬರ್ 30 ರಂದು ಅಪಘಾತ ನಡೆದಿತ್ತು. ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಬೈಕ್‌ನಲ್ಲಿ ಕಾಸರಗೋಡಿಗೆ ತೆರಳಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಅಮಿತಾ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಡಿ.ಕೆ. ಶಿವಕುಮಾರ್‌ ಪುತ್ರಿ ನಿಶ್ಚಿತಾರ್ಥ ಎಸ್‌.ಎಂ.ಕೃಷ್ಣ ಅವರ ಅಳಿಯನ ಜೊತೆ ನೆರವೇರಿತು

Thursday, November 19th, 2020
Amartya

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥವು ನವೆಂಬರ್ 19ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್‍ವೊಂದರಲ್ಲಿ ನೆರವೇರಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರಾದ ಡಾ ಕೆ ಸುಧಾಕರ್, ಆರ್. ಅಶೋಕ್, ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಎರಡೂ […]

ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ

Monday, February 10th, 2020
nikil

ಬೆಂಗಳೂರು : ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಇಂದು ಬೆಂಗಳೂರಿನ ತಾಜ್ ವೆಸ್ಟ್ ಹೋಟೆಲ್‌ನಲ್ಲಿ ಶಾಸ್ತ್ರೋಕ್ತವಾಗಿ ನಡೆದಿದೆ. ಈ ನಿಶ್ಚಿತಾರ್ಥಕ್ಕೆ ಅನಿತಾ ಕುಮಾರಸ್ವಾಮಿ ಸಹೋದರಿಯರಾದ ಶೈಲಜಾ ಮತ್ತು ಅನುಸೂಯ, ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಮಾರ್ಗದರ್ಶನದಲ್ಲಿ ಎಲ್ಲ ತಯಾರಿಗಳು ನಡೆದಿವೆ. ತಾಜ್‌ ವೆಸ್ಟ್‌ನ ಪೂರ್ವ ದಿಕ್ಕಿಗೆ ಇರುವ ವೆಸ್ಟೆಂಡ್‌ ಕೋರ್ಟ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತದೆ. ತಾಜ್‌ ವೆಸ್ಟೆಂಡ್‌ ಹೊಟೇಲ್‌ನಲ್ಲಿರುವ ಮರಗಿಡಗಳ ನಡುವೆ ನಿಶ್ಚಿತಾರ್ಥ ನಡೆಯಬೇಕು ಎಂಬುದು ನಿಖಿಲ್‌ಕುಮಾರ್‌ ಅವರ ಆಸೆಯಾಗಿತ್ತು. ನಿಶ್ಚಿತಾರ್ಥ ಸಂಪೂರ್ಣ ವೈಟ್‌ ಥೀಮ್‌ನಲ್ಲಿ […]

ಚಂದನ್ ಶೆಟ್ಟಿ- ನಿವೇದಿತಾ ಗೌಡ ಅದ್ಧೂರಿ ನಿಶ್ಚಿತಾರ್ಥ

Monday, October 21st, 2019
chandan-shetty

ಮೈಸೂರು : ಗಾಯಕ ಚಂದನ್ ಶೆಟ್ಟಿ ಮತ್ತು ಬಾರ್ಬಿ ಗರ್ಲ್ ನಿವೇದಿತಾ ಗೌಡ ನಿಶ್ವಿತಾರ್ಥ ಇಂದು ಮೈಸೂರಿನ ಖಾಸಗಿ ಹೋಟೆಲಿನಲ್ಲಿ ಅದ್ಧೂರಿಯಾಗಿ ನಡೆದಿದೆ. ಈ ಶುಭಸಮಾರಂಭದಲ್ಲಿ ಎರಡೂ ಕುಟುಂಬದ ಸದಸ್ಯರು ಹಾಗೂ ಆಪ್ತರಷ್ಟೇ ಭಾಗಿಯಾಗಿದ್ದರು. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ಅಭಿಮಾನಿಗಳ ಮುಂದೆ ಗೆಳತಿ ನಿವೇದಿತಾರಿಗೆ ಪ್ರಪೋಸ್ ಮಾಡಿದ್ದರು. ವೇದಿಕೆಯಲ್ಲಿಯೇ ರಿಂಗ್ ತೊಡಿಸಿ ತಮ್ಮ ಪ್ರೇಮ ವಿಚಾರವನ್ನು ಚಂದನ್ ಅಧಿಕೃತವಾಗಿ ಹೇಳಿಕೊಂಡಿದ್ದರು. ಇದೀಗ ಚಂದನ್, ನಿವೇದಿತಾಗೆ ಮತ್ತೊಮ್ಮೆ ರಿಂಗ್ ತೊಡಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಖಾಸಗಿ ವಾಹಿನಿಯ […]

ಕನ್ನಡ ನಟಿ ನೇಹಾ ಪಾಟೀಲ್​​​​ಗೆ ಇಂದು ನಿಶ್ಚಿತಾರ್ಥದ ಸಂಭ್ರಮ

Friday, October 19th, 2018
neha-patil

ಬೆಂಗಳೂರು: ಸ್ಮೈಲ್ ಪ್ಲೀಸ್, ಸಿತಾರ, ವರ್ಧನ ಸಿನಿಮಾಗಳಲ್ಲಿ ನಟಿಸಿದ್ದ ನಟಿ ನೇಹಾ ಪಾಟೀಲ್ಗೆ ಇಂದು ನಿಶ್ಚಿತಾರ್ಥದ ಸಂಭ್ರಮ. ಬೆಂಗಳೂರು ಮೂಲದ ಪ್ರಣವ್ ಜೊತೆ ಇಂದು ನೇಹಾ ನಿಶ್ಚಿತಾರ್ಥ ಜರುಗಿದೆ. ಮಾಗಡಿ ರಸ್ತೆಯಲ್ಲಿರುವ ವಿಸ್ಮಯ ಪಾರ್ಟಿ ಹಾಲ್ನಲ್ಲಿ ನೇಹಾ ಪಾಟೀಲ್ ಎಂಗೇಜ್ ಮೆಂಟ್ ಜರುಗಿದೆ. ಎರಡು ಕುಟುಂಬಗಳ ಸಮ್ಮುಖದಲ್ಲಿ, ನೇಹಾ ಪಾಟೀಲ್ ಹಾಗು ಪ್ರಣವ್ ನಿಶ್ಚಿತಾರ್ಥ ಶಾಸ್ತ್ರ, ಸಂಪ್ರದಾಯದಂತೆ ನಡೆಸಲಾಯಿತು. ಕೆಂಪು ಸೀರೆ ಹಾಗೂ ಹಸಿರು ಬ್ಲೌಸ್ನಲ್ಲಿ ನೇಹಾ ಬಹಳ ಮುದ್ದಾಗಿ ಕಾಣುತ್ತಿದ್ದರು. ಚಿತ್ರರಂಗದ ಹಾಗೂ ಕಿರುತೆರೆಯ ಸಾಕಷ್ಟು […]