ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ನೂತನ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
Tuesday, September 26th, 2023ಮೈಸೂರು : ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ ಎಂದು ನೂತನ ಡಿವೈಎಸ್ ಪಿ ಮತ್ತು ಅಬಕಾರಿ ಡಿವೈಎಸ್ ಪಿ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 37ನೇ ತಂಡದ ಪ್ರೊಬೆಷನರಿ ಪೊಲೀಸ್ ಉಪಾಧೀಕ್ಷಕರು ಮತ್ತು ಅಬಕಾರಿ ಉಪಾಧೀಕ್ಷಕರು ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಅಸಮಾನತೆ, ಜಾತಿ ತಾರತಮ್ಯ ಇರುವ ಸಮಾಜದಲ್ಲಿ ಅಶಕ್ತರಿಗೂ ನ್ಯಾಯ ಸಿಗುವಂತಾಗಬೇಕು. ಕೇವಲ ಬಲಾಡ್ಯರಿಗೆ ಮಾತ್ರ ನ್ಯಾಯ ಸಿಗುವಂತಾದರೆ ಇಷ್ಟೆಲ್ಲಾ ತರಬೇತಿ ಪಡೆದು ಪ್ರಯೋಜನ […]