ಪತ್ನಿಯನ್ನು ಕೊಲೆಗೈದು, ಪತಿ ತೋಟದಲ್ಲಿ ಆತ್ಮಹತ್ಯೆ

Thursday, October 27th, 2022
shobha-poojary

ಉಳ್ಳಾಲ: ಪಿಲಾರು ಬಳಿಯ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಆಕೆಯ ಪತಿಯ ಮೃತದೇಹ ಸಮೀಪದ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿ, ಪತಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರಬೇಕು ಎಂದು ಪೊಲೀಸರು ಅಂದಾಜಿಸಿದ್ದಾರೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ (45) ಕೊಲೆಯಾದ ಮಹಿಳೆ ಮತ್ತು ಆಕೆಯ ಪತಿ ಶಿವಾನಂದ ಪೂಜಾರಿ (55) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಹತ್ತು ಗಂಟೆಯ ಸುಮಾರಿಗೆ ಶೋಭಾ […]

ವಿವಾಹಿತ ಮಹಿಳೆ ಮನೆಯ ಕೋಣೆಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆ

Thursday, August 4th, 2022
chaitra Adiga

ಧರ್ಮಸ್ಥಳ : ವಿವಾಹಿತ ಮಹಿಳೆಯೊಬ್ಬರು ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದಲ್ಲಿ ಗುರುವಾರ ಮುಂಜಾನೆ ನಡೆದಿದೆ. ಮುಂಡ್ರುಪ್ಪಾಡಿ ನಿವಾಸಿ ಚೈತ್ರಾ ಅಡಿಗ ಆತ್ಮಹತ್ಯೆ ಮಾಡಿಕೊಂಡವರು. ಧರ್ಮಸ್ಥಳದ ದೀಪಕ್ ಎಂಬವರೊಂದಿಗೆ ಮೂರು ವರ್ಷದ ಹಿಂದೆ ಚೈತ್ರಾ ವಿವಾಹವಾಗಿದ್ದು, ಇವರಿಗೆ ಹೆಣ್ಣು ಮಗುವಿದೆ. ಅವರು ಕೆಲ ಸಮಯದ ಹಿಂದೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ತಹಶೀಲ್ದಾರ್‍ ಪೃಥ್ವಿ ಸಾನಿಕಮ್, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಶಯಾಸ್ಪದ ಸ್ಥಿತಿಯಲ್ಲಿ ವಿವಾಹಿತ ದಂಪತಿ ಮೃತದೇಹ ಪತ್ತೆ

Saturday, June 4th, 2022
vasantha

ಕಾಸರಗೋಡು : ಎರಡು ವರ್ಷಗಳ ಹಿಂದೆಯಷ್ಟೇ ವಿವಾಹಿತರಾಗಿದ್ದ ದಂಪತಿ ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲದಲ್ಲಿ ನಡೆದಿದೆ. ಸರ್ಪಮಲೆ ಶೇತ್ತಿಬೈಲ್ ನಿವಾಸಿ ವಸಂತ (26) ಮತ್ತು ಅವರ ಪತ್ನಿ, ಕಜಂಪಾಡಿ ನಿವಾಸಿ ಶರಣ್ಯಾ(22) ಮೃತಪಟ್ಟವರಾಗಿದ್ದಾರೆ. ಇವರು ಎರಡು ವರ್ಷಗಳ ಹಿಂದೆಯಷ್ಟೇ ವಿವಾಹಿತರಾಗಿದ್ದರು. ಮನೆಯಲ್ಲಿ ಪತಿ-ಪತ್ನಿ ಮಾತ್ರ ವಾಸವಾಗಿದ್ದರು. ಶುಕ್ರವಾರ ದಿನವಿಡೀ ಇವರ ಮನೆಯ ಬಾಗಿಲು ತೆರೆದಿರಲಿಲ್ಲ ಎನ್ನಲಾಗಿದೆ. ಇದರಿಂದ ಸಂಶಯಗೊಂಡ ಪರಿಸರ ವಾಸಿಗಳು ಸಂಜೆ ವೇಳೆ ಮನೆಯತ್ತ ತೆರಳೀ ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ ಎಂದು […]

ಬಿಜೆಪಿ ಕಾರ್ಯಕರ್ತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Tuesday, February 15th, 2022
jyotish

ಕಾಸರಗೋಡು : ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಸರಗೋಡಿನಲ್ಲಿ ಪತ್ತೆಯಾಗಿದೆ. ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ. ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಮೃತದೇಹ  ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆ ಯಾಗಿದ್ದು, ಹುಡುಕಾಡಿದಾಗ ಮೃತದೇಹ ಪತ್ತೆಯಾಗಿದೆ. ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ […]

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುಂಬಳೆಯ ಮನೆಯಲ್ಲಿ ಆತ್ಮಹತ್ಯೆ

Saturday, September 18th, 2021
sneha

ಮಂಜೇಶ್ವರ :  ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ವೀರ ವಿಠಲ ಕ್ಷೇತ್ರ ಸಮೀಪದ ಚಂದ್ರಹಾಸ ಎಂಬವರ ಪುತ್ರಿ ಸ್ನೇಹಾ (17) ಆತ್ಮಹತ್ಯೆ ಮಾಡಿಕೊಂಡವಳು. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದ ಸ್ನೇಹಾ ಕೆಲ ಸಮಯದ ಬಳಿಕ ಕೋಣೆಯೊಳಗೆ ತೆರಳಿದ್ದು, ರಾತ್ರಿ ಸುಮಾರು 7 ಗಂಟೆ ಕಳೆದರೂ ಕೋಣೆಯಿಂದ ಹೊರ ಬರದ ಹಿನ್ನೆಲೆಯಲ್ಲಿ ಗಾಬರಿಗೊಂಡ ತಾಯಿ ಬಾಗಿಲು ಬಡಿದರೂ ತೆರೆಯಲಿಲ್ಲ. ಕೊನೆಗೆ […]

ಕಾರ್ಕಳ : ಅರ್ಚಕ ನೇಣು ಬಿಗಿದು ಆತ್ಮಹತ್ಯೆ

Tuesday, September 14th, 2021
Sharma

ಕಾರ್ಕಳ : ದೇವಳವೊಂದರ ಅರ್ಚಕ ರವಳನಾಥ ಶರ್ಮ(32) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್ ಇಂಡಿಯಾ ಬಳಿಯ ಮಹಾಲಸ ನಿವಾಸಿಯಾಗಿರುವ ಅವರು ಎಂಬಿಎ ಪದವೀದಾರರಾಗಿದ್ದರು.  ಈ ಹಿಂದೆ ಕಾರ್ಕಳದ ಕಾಲೇಜುವೊಂದರಲ್ಲಿ ಅತಿಥಿ ಉಪನ್ಯಾಸಕರಾಗಿ ದುಡಿದಿದ್ದರು. ಮೃತರು ತಂದೆ,ತಾಯಿ,ತಮ್ಮ,ಪತ್ನಿ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ನಗರ ಠಾಣಾಧಿಕಾರಿ ಘಟನಾ ಸ್ಥಳಕ್ಕೆ ಅಗಮಿಸಿ ಮಹಜರು ನಡೆಸಿದ್ದಾರೆ. ಮಾನಸಿಕ ಖಿನ್ನತೆ ಘಟನೆಗೆ ಕಾರಣವೆನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.

ನಾಪತ್ತೆಯಾಗಿದ್ದ ಹೋಟೆಲ್ ಉದ್ಯೋಗಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, September 5th, 2021
Rajesh Poojary

ಬಂಟ್ವಾಳ : ಸೆ.2ರಂದು ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಭಾನುವಾರ ಬೆಳಗ್ಗೆ  ಪತ್ತೆಯಾಗಿದ್ದಾರೆ. ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು ಮನೆಗೆ ಬಂದು ವಾಪಾಸು ಹೋದವರು ನಾಪತ್ತೆಯಾಗಿದ್ದರು. ನಾಪತ್ತೆ ಬಳಿಕ ಮನೆ ಮಂದಿ ಸಹಿತ ಊರವರು ರಾಜೇಶ್ ಅವರಿಗಾಗಿ ಎಲ್ಲೆಡೆ ಹುಡುಕಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಪಡಿಸಲಾಗಿತ್ತು. ಮೃತರು, ಪತ್ನಿ, ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಶುಕ್ರವಾರ ಮನೆ ಮಂದಿ ಪುಂಜಾಲಕಟ್ಟೆ ಠಾಣೆಗೆ ದೂರು […]

ಅಪ್ರಾಪ್ತ ಮಗನನ್ನು ಕಡಿದು ಕೊಲೆಗೈದು, ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ತಂದೆ

Wednesday, June 23rd, 2021
Sathwik

ಪುಂಜಾಲಕಟ್ಟೆ :  ಬಾಡಿಗೆ ಮನೆಯಲ್ಲಿ ವಾಸವಿದ್ದ ತಂದೆಯೊಬ್ಬ  ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಬುಧವಾರ ನಡೆದಿದೆ. ಬಾಬು ನಾಯ್ಕ (58) ತನ್ನ ಪುತ್ರ ಸಾತ್ವಿಕ್ (15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.  ಘಟನೆ ವೇಳೆ ಬಾಬು ನಾಯ್ಕನ ಪತ್ನಿ […]

ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು, ಗಂಡನ ಮನೆಯಲ್ಲಿ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

Wednesday, May 26th, 2021
hanging

ಗೌರಿಬಿದನೂರು :  ತನ್ನ ಹುಟ್ಟುಹಬ್ಬಕ್ಕೆ ಗಂಡ ಹೊಸ ಬಟ್ಟೆಯನ್ನು ತೆಗೆದುಕೊಟ್ಟಿಲ್ಲ ಎಂದು ಮನನೊಂದು 16 ವರ್ಷದ ಬಾಲಕಿ ಮಹಡಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  5ನೇ ವಾರ್ಡಿನ ಮಾರುತಿ ಸರ್ಕಲ್‌ ಬಳಿ ಬುಧವಾರ  ನಡೆದಿದೆ. ಮೃತ ಬಾಲಕಿ ಮತ್ತು ಮಹದೇವ ಅಲಿಯಾಸ್‌ ಮಣಿ ಒಂದೂವರೆ ವರ್ಷದಿಂದ ಪ್ರೀತಿಸಿದ್ದು ಒಂದು ವರ್ಷದಿಂದ ಮಹದೇವನ ಮನೆಯಲ್ಲೇ ಇದ್ದಳು. ಕಳೆದ 3 ತಿಂಗಳ ಹಿಂದೆಯಷ್ಟೇ ಇಬ್ಬರೂ ಮದುವೆಯಾಗಿದ್ದರು ಎನ್ನಲಾಗಿದೆ. ಮೃತಳು ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ತೊಂಡೇಬಾವಿ ಬಳಿಯ ಬೇವನಹಳ್ಳಿ ಗ್ರಾಮದ […]

ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮೀ ವಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Thursday, December 17th, 2020
lakshmi

ಬೆಂಗಳೂರು : ಡಿ.17-ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ ವಿ (33) ಬುಧವಾರ  ರಾತ್ರಿ ಸ್ನೇಹಿತನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಬಗ್ಗೆ ಅನೇಕ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಸ್ನೇಹಿತನ ಮನೆಗೆ ಊಟಕ್ಕೆಂದು ಹೋಗಿದ್ದ ಸಂದರ್ಭದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ಪಷ್ಟ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ವಿ. ಲಕ್ಷ್ಮೀ ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮೀ […]